Thursday, November 21, 2024

ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಕುಂದಾಪುರ, ಸೆ.5: ರಾಜ್ಯದ ಹಿಂದೂ ಧಾರ್ಮಿಕ ದತ್ತಿ ಇಲಾಖೆ, ಮೀನುಗಾರಿಕೆ ಇಲಾಖೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘಕ್ಕೆ ಶನಿವಾರ ಭೇಟಿ ನೀಡಿದರು.

ಸಂಘದ ಕಾರ್ಯಚಟುವಟಿಕೆ ಬಗ್ಗೆ ಮಾಹಿತಿ ಪಡೆದುಕೊಂಡು, ಮೀನುಗಾರರ ಸಹವಾಲು ಸ್ವೀಕರಿಸಿ ಮಾತನಾಡಿದ ಸಚಿವರು, ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲು ಸಿದ್ಧತೆ ನಡೆಯುತ್ತಿದೆ. ಗಂಗೊಳ್ಳಿ ಮೀನುಗಾರಿಕಾ ಬಂದರಿನ ಅಭಿವೃದ್ಧಿ ಕಾರ್ಯಗಳಿಗೆ ಚುರುಕು ನೀಡುವ ಕೆಲಸ ಮಾಡುತ್ತಿದ್ದು, ಮೀನುಗಾರರ ಸಂಕಷ್ಟಗಳಿಗೆ ಸರಕಾರ ಪ್ರಾಮಾಣಿಕವಾಗಿ ಸ್ಪಂದಿಸುತ್ತಿದೆ. ಮೀನುಗಾರರಿಗೆ ಪಾವತಿಸಲು ಬಾಕಿ ಉಳಿದಿರುವ ಸಂಕಷ್ಟ ಪರಿಹಾರ ನಿಧಿಯ ಎರಡು ವರ್ಷಗಳ ಹಣವನ್ನು ಅತಿ ಶೀಘ್ರ ಪಾವತಿಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಕಂಚುಗೋಡು, ಉಪಾಧ್ಯಕ್ಷ ಸೂರಜ್ ಖಾರ್ವಿ, ಜಿಪಂ ಸದಸ್ಯೆ ಶೋಭಾ ಜಿ.ಪುತ್ರನ್, ತಾಪಂ ಸದಸ್ಯ ಸುರೇಂದ್ರ ಖಾರ್ವಿ, ಬೈಂದೂರು ತಾಪಂ ಅಧ್ಯಕ್ಷ ಮಹೇಂದ್ರ ಪೂಜಾರಿ, ಗಂಗೊಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಮಂಜು ಬಿಲ್ಲವ, ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಸಂಘದ ವ್ಯವಸ್ಥಾಪಕ ಮೋಹನ ಖಾರ್ವಿ, ಸಂಘದ ನಿರ್ದೇಶಕರು, ಬಿಜೆಪಿ ಮುಖಂಡರು, ಮೀನುಗಾರರು ಮತ್ತಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!