spot_img
Wednesday, April 1, 2026
spot_img

ಎಲ್ಲಾ ಶಾಸಕರಿಗೂ ಸಿಎಂ ಸಿದ್ದರಾಮಯ್ಯ ಸಂಕ್ರಾಂತಿ ಗಿಫ್ಟ್‌ | ಶಾಸಕರಿಗೆ ತಲಾ 10 ಕೋಟಿ ಅನುದಾನ ಘೋಷಣೆ

ಜನಪ್ರತಿನಿಧಿ (ಬೆಂಗಳೂರು) : ಎಲ್ಲಾ ಪಕ್ಷದ ಶಾಸಕರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಕರ ಸಂಕ್ರಾಂತಿಗೆ ಬಂಫರ್ ಗಿಫ್ಟ್ ನೀಡಿದ್ದಾರೆ. ಶಾಸಕರಿಗೆ ತಲಾ 10 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ.

ಬೆಳಗಾವಿ ನಡೆದ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಶಾಸಕರಿಗೆ ಅನುದಾನ ಬಿಡುಗಡೆ ಮಾಡದಿರುವ ಬಗ್ಗೆ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ ಶಾಸಕರು ಅಸಮಾಧಾನ ವ್ಯಕ್ತ ಪಡಿಸಿದ್ದರು. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಆಡಳಿತದ ವಿರುದ್ಧ ಪ್ರತಿಪಕ್ಷಗಳ ನಾಯಕರು ಆಕ್ರೋಶ ಹೊರ ಹಾಕಿದ್ದರು.

ಸದ್ಯ, ಈಗ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಿಎಲ್ ಪಿ ಸಭೆಯಲ್ಲಿ ಶಾಸಕರಿಗೆ ಅನುದಾನವನ್ನು ನೀಡುವ ಘೋಷಿಸಿದ್ದಾರೆ. ಎಲ್ಲಾ ಪಕ್ಷದ ಶಾಸಕರಿಗೂ ತಲಾ 10 ಕೋಟಿ ಅನುದಾನವನ್ನು ನೀಡಿದ್ದೇವೆ. ಬಿಜೆಪಿ, ಜೆಡಿಎಸ್ ಶಾಸಕರಿಗೂ 10 ಕೋಟಿ ಅನುದಾನ ಕೊಡುತ್ತಿರುವುದಾಗಿ ಘೋಷಣೆ  ಮಾಡಿದ್ದಾರೆ.

ನಿನ್ನೆ (ಸೋಮವಾರ) ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಅನುದಾನ ಕೊರತೆ ಬಗ್ಗೆ ಪ್ರಸ್ತಾಪಿಸಿದರು. ಆಗ ಮಾತನಾಡಿದ ಸಿದ್ದರಾಮಯ್ಯ, ‘ಭಾನುವಾರವಷ್ಟೇ ಕಡತಕ್ಕೆ ಸಹಿ ಹಾಕಿದ್ದೇನೆ. ಕಾಂಗ್ರೆಸ್ ಶಾಸಕರು ಮಾತ್ರವಲ್ಲ ಎಲ್ಲಾ ಶಾಸಕರಿಗೂ ತಲಾ 10 ಕೋಟಿ ರೂ. ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಿದರು.

ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಕೆಲ ಶಾಸಕರು, 10 ಕೋಟಿ ರೂ. ಅನುದಾನದಿಂದ ಯಾವುದೇ ಅಭಿವೃದ್ದಿ ಕಾರ್ಯಗಳನ್ನು ಮಾಡಲು ಆಗುವುದಿಲ್ಲ. ಹೆಚ್ಚುವರಿ ಅನುದಾನಬಿಡುಗಡೆ ಮಾಡಬೇಕು ಎಂದು ಬೇಡಿಕೆ ಇಟ್ಟರು. ಬೇಡಿಕೆಗೆ ಸ್ಪಂದಿಸಿದ ಸಿದ್ದರಾಮಯ್ಯ, ಸದ್ಯಕ್ಕೆ 10 ಕೋಟಿ ರು. ಅನುದಾನ ಬಳಕೆ ಮಾಡಿ. ಹೆಚ್ಚುವರಿ ಅನುದಾನಬೇಕಿರುವವರು ಫೆಬ್ರವರಿ ತಿಂಗಳಲ್ಲಿ ಪ್ರಸ್ತಾವನೆ ಸಲ್ಲಿಸಿ. 2025-26ನೇ ಸಾಲಿನ ಆಯವ್ಯಯದಲ್ಲಿ ಅನುದಾನಕ್ಕೆ ಅವಕಾಶ ಮಾಡಿಕೊಡುತ್ತೇನೆ ಎಂದು ಭರವಸೆ ನೀಡಿದರು ಎಂದು ತಿಳಿದುಬಂದಿದೆ.

ಶಾಸಕಾಂಗ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ ಅವರು ಕೈ ಶಾಸಕರು, ಸಚಿವರಿಗೆ ಬಹಿರಂಗ ಹೇಳಿಕೆ ನೀಡದಂತೆ ತಾಕೀತು ಮಾಡಿದರು. ಏನೇ ಗೊಂದಲಗಳಿದ್ದರೂ ನಾಲ್ಕು ಗೋಡೆಗಳ ಮಧ್ಯೆ, ಪಕ್ಷದ ಚೌಕಟ್ಟಿನಲ್ಲಿ ಚರ್ಚಿಸುವಂತೆ ಸೂಚಿಸಿದರು. ಸುರ್ಜೆವಾಲ ಮಾತಿಗೆ ಸಿಎಂ ದನಿಗೂಡಿಸಿದರು. ಎಲ್ಲವೂ ಹೈಕಮಾಂಡ್​​ಗ್ ಗೆ ಬಿಟ್ಟ ವಿಚಾರ. ಅದರಂತೆ ಎಲ್ಲರೂ ನಡೆಯಬೇಕು ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!