spot_img
Wednesday, April 1, 2026
spot_img

ದೆಹಲಿ ಅಬಕಾರಿ ನೀತಿ ಪ್ರಕರಣ : ಕೇಜ್ರಿವಾಲ್‌ ವಿರುದ್ಧ ಪ್ರಾಸಿಕ್ಯೂಷನ್‌ಗೆ ಕೇಂದ್ರ ಗೃಹ ಸಚಿವಾಲಯ ಅನುಮತಿ

ಜನಪ್ರತಿನಿಧಿ (ನವದೆಹಲಿ) : ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಗೃಹ ಸಚಿವಾಲಯ, ಜಾರಿ ನಿರ್ದೇಶನಾಲಯ(ಇಡಿ)ಕ್ಕೆ ಅನುಮತಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರ ತನಿಖಾ ಸಂಸ್ಥೆಯು 56 ವರ್ಷದ ರಾಜಕಾರಣಿಯ ವಿರುದ್ಧ ಕಳೆದ ವರ್ಷ ಮಾರ್ಚ್‌ನಲ್ಲಿ ಬಂಧಿಸಿದ ನಂತರ ಅವರ ವಿರುದ್ಧ ವಿಶೇಷ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ನ್ಯಾಯಾಲಯದ ಮುಂದೆ ಆರೋಪಪಟ್ಟಿ ಸಲ್ಲಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾನೂನಿನಡಿಯಲ್ಲಿ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಗೃಹ ಸಚಿವಾಲಯ(ಎಂಎಚ್‌ಎ) ಇತ್ತೀಚೆಗೆ ಜಾರಿ ನಿರ್ದೇಶನಾಲಯ(ಇಡಿ)ಕ್ಕೆ ಅಗತ್ಯವಾದ ಅನುಮತಿಯನ್ನು ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫೆಬ್ರವರಿ 5 ರಂದು ನಿಗದಿಯಾಗಿರುವ ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಈ ಬೆಳವಣಿಗೆ ನಡೆದಿದೆ.

ಮಾಜಿ ಮುಖ್ಯಮಂತ್ರಿಯನ್ನು ದೆಹಲಿ ಅಬಕಾರಿ “ಹಗರಣ”ದ “ಪ್ರಮುಖ ಆರೋಪಿ ಮತ್ತು ಪ್ರಮುಖ ಸಂಚುಕೋರ” ಎಂದು ಇಡಿ ಕರೆದಿದೆ.

ದೆಹಲಿ ಸರ್ಕಾರದ ಸಚಿವರು, ಎಎಪಿ ನಾಯಕರು ಮತ್ತು ಇತರರೊಂದಿಗೆ ಕೇಜ್ರಿವಾಲ್ ಅವರು ಶಾಮೀಲಾಗಿದ್ದಾರೆ ಎಂದು ಇಡಿ ಆರೋಪಿಸಿದೆ.

ಸಾರ್ವಜನಿಕ ಸೇವಕರನ್ನು ವಿಚಾರಣೆಗೆ ಒಳಪಡಿಸುವ ಮೊದಲು ಇಡಿ ಪೂರ್ವಾನುಮತಿ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಕಳೆದ ನವೆಂಬರ್ ನಲ್ಲಿ ನೀಡಿದ ಆದೇಶದಲ್ಲಿ ಹೇಳಿತ್ತು. ಇದರ ಬೆನ್ನಲ್ಲೇ ಡಿಸೆಂಬರ್ 5ರಂದು ಜಾರಿ ನಿರ್ದೇಶನಾಲಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ಪತ್ರ ಬರೆದಿದ್ದು, ಕೇಜ್ರಿವಾಲ್ ಹಗರಣದ ಪ್ರಮುಖ ಸಂಚುಕೋರ ಆಗಿರುವುದರಿಂದ ವಿಚಾರಣೆಗೆ ಅನುಮತಿ ನೀಡಬೇಕು ಎಂದು ಕೇಳಿಕೊಂಡಿತ್ತು. ಇದಕ್ಕೆ ದಿಲ್ಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಒಪ್ಪಿಗೆ ನೀಡಿದ್ದರು. ಇದೀಗ ಕೇಂದ್ರ ಗೃಹ ಸಚಿವಾಲಯವು ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ನೀಡಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!