spot_img
Wednesday, April 1, 2026
spot_img

ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಶೆಟ್ಟಿ ಆಯ್ಕೆ

ಜನಪ್ರತಿನಿಧಿ ವಾರ್ತೆ (ಕುಂದಾಪುರ) ಪಂಚಗಂಗಾ ರೈತರ ಸೇವಾ ಸಹಕಾರಿ ಸಂಘ ಹೆಮ್ಮಾಡಿ ಇದರ ನೂತನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಜ.15 ಬುಧವಾರ ಸಂಘದ ಪ್ರಧಾನ ಕಛೇರಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರು, ಉಪಾಧ್ಯಕ್ಷರನ್ನು ಅಭಿನಂದಿಸಿ ದಕ ಜಿಲ್ಲಾ ಕೇಂದ್ರ ಬ್ಯಾಂಕ್ ಮಂಗಳೂರು ಇದರ ನಿರ್ದೇಶಕರಾದ ಮಹೇಶ ಹೆಗ್ಡೆ ಮೊಳಹಳ್ಳಿ, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಶೆಟ್ಟಿ ಗುಡಿಬೆಟ್ಟು ಮಾತನಾಡಿದರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಸಂತೋಷ ಕುಮಾರ್ ಶೆಟ್ಟಿ ತೋಟಬೈಲು, ಚಂದ್ರ ಪೂಜಾರಿ ಹೊಳ್ಮಗೆ, ಆನಂದ ಬಿಲ್ಲವ, ತಮ್ಮಯ್ಯ ದೇವಾಡಿಗ, ಚಂದ್ರ ಎಸ್ ನಾಯ್ಕ, ಸುಧಾಕರ ಎನ್ ದೇವಾಡಿಗ, ರಾಘವೇಂದ್ರ ಪೂಜಾರಿ, ಸಂಜೀವ ಹಕ್ಲಾಡಿ, ಶ್ರೀಮತಿ ಚಂದ್ರಮತಿ ಹೆಗ್ಡೆ, ಶ್ರೀಮತಿ ಸುನೀತಾ ಪೂಜಾರಿ, ಶ್ರೀಮತಿ ಶಾರದ ಉಪಸ್ಥಿತರಿದ್ದರು.

ಇತ್ತೀಚೆಗೆ ಪಂಚಗಂಗಾ ರೈತರ ಸಹಕಾರ ಸಂಘಕ್ಕೆ ಚುನಾವಣೆ ನಡೆದಿತ್ತು. ಎಲ್ಲಾ 13 ಸ್ಥಾನಗಳನ್ನು ಕಾಂಗ್ರೆಸ್ ಬೆಂಬಲಿತರು ಗೆದ್ದುಕೊಂಡಿದ್ದರು. ಪ್ರಸ್ತುತ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಂತೋಷಕುಮಾರ್ ಶೆಟ್ಟಿ ಹಕ್ಲಾಡಿ ಅವರು ಸತತ 5ನೇ ಬಾರಿಗೆ ಸಹಕಾರ ಕ್ಷೇತ್ರ ಪ್ರವೇಶ ಮಾಡಿದ್ದಾರೆ.

ಸುರೇಶ ಪೂಜಾರಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!