spot_img
Monday, March 16, 2026
spot_img

ಮಂಗಳೂರು ಬ್ಯಾಂಕ್‌ ದರೋಡೆ : ಹಿರಿಯ ಪೊಲೀಸ್‌ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ತುರ್ತು ಸಭೆ

ಜನಪ್ರತಿನಿಧಿ (ಮಂಗಳೂರು) : ನಗರಕ್ಕೆ ಭೇಟಿ ನೀಡಿರುವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಟೇಕಾರು ಬ್ಯಾಂಕ್‌ ನಲ್ಲಿ ನಡೆದ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು. ಆರೋಪಿಗಳ ಶೀಘ್ರ ಪತ್ತೆಗೆ ಸಿಎಂ ಸೂಚನೆ ನೀಡಿದ್ದಾರೆ.

ಘಟನೆ ಬಗ್ಗೆ ಸಮಗ್ರ ಮಾಹಿತಿ ಪಡೆದ ಮುಖ್ಯಮಂತ್ರಿ, ಆರೋಪಿಗಳು ಸಲೀಸಾಗ ತಪ್ಪಿಸಿಕೊಂಡು ಹೋಗಿದ್ದು ಹೇಗೆ ? ಎಷ್ಟು ಟೋಲ್‌ಗಳನ್ನು ದಾಟಿ ಹೋಗಿದ್ದಾರೆ? ಟೋಲ್‌ ಗಳಲ್ಲಿ ಯಾಕೆ ತಪಾಸಣೆ ಬಿಗಿಯಾಗಿಸಿಲ್ಲ ಎಂದು ಪ್ರಶ್ನಿಸಿದ್ದಾಗಿ ಮೂಲಗಳು ತಿಳಿಸಿವೆ.

ಸಹಕಾರಿ ಬ್ಯಾಂಕ್‌ ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್‌ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಹಾಗೂ ಹಿಂದಿ ಮಾತನಾಡಿರುವುದು ದಾಖಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದಾರೆ.

ಎಲ್ಲಾ ಟೋಲ್‌ಗಳಲ್ಲಿ ತಪಾಸಣೆ ಬಿಗಿಗೊಳಿಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂದಿ ಹಾಗಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಬೇಕು ಎಂದು ಮುಖ್ಯಮಂತ್ರಿ ಸೂವನೆ ನೀಡಿದರು ಎಂಬ ಮಾಹಿತಿ ಲಭ್ಯವಾಗಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!