spot_img
Monday, March 16, 2026
spot_img

ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 105ನೇ ವಾರ್ಷಿಕೋತ್ಸವ

ಗಂಗೊಳ್ಳಿ : ಒಂದು ಶಾಲೆಯಲ್ಲಿ ಅಧ್ಯಾಪಕರು, ಎಸ್‌ಡಿ‌ಎಂಸಿ, ವಿದ್ಯಾರ್ಥಿಯಿಂದ ಶಾಲೆಯ ಕೀರ್ತಿ ಬೆಳಗಿಸಲು ಸಾಧ್ಯವಿದೆ. ಪೋಷಕರು ಮಕ್ಕಳ ಬೌದ್ಧಿಕ ಮಟ್ಟವನ್ನು ಗಮನಿಸುತ್ತಿರಬೇಕು. ಪಾಲಕರು ತಮ್ಮ ಮಕ್ಕಳ ಸಾಮರ್ಥ್ಯವನ್ನು ಬೇರೆಯವರೊಂದಿಗೆ ಹೋಲಿಸಬಾರದು. ಗುಜ್ಜಾಡಿ ಶಾಲೆಯ ಬೆಳವಣಿಯಲ್ಲಿ ಎಸ್‌ಡಿ‌ಎಂಸಿ ಪಾತ್ರ ಗಣನೀಯವಾಗಿದೆ. ಸಾಕಷ್ಟು ಅಭಿವೃದ್ಧಿ ಪರ ಚಿಂತನೆಯನ್ನಿಟ್ಟುಕೊಂಡು ಹಳೆ ವಿದ್ಯಾರ್ಥಿ ಸಂಘದ ಮೂಲಕ ಶಾಲೆಯನ್ನು ಗುಣಾತ್ಮಕ ಶಿಕ್ಷಣ ಸಂಸ್ಥೆಯನ್ನಾಗಿ ರೂಪಿಸಿದೆ ಎಂದು ಬೈಂದೂರು ವಲಯ ಕ್ಷೇತ್ರ ಶಿಕ್ಷಣಧಿಕಾರಿ ನಾಗೇಶ ನಾಯ್ಕ್ ಹೇಳಿದರು.

ಬೈಂದೂರು ವಲಯದ ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 105ನೇ ವಾರ್ಷಿಕೋತ್ಸವ ಸಮಾರಂಭವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ಶಾಲೆಯ ಎಸ್‌ಡಿ‌ಎಂಸಿ ಅಧ್ಯಕ್ಷ ನಾರಾಯಣ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಉಮೇಶ್ ಎಲ್.ಮೇಸ್ತ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್, ಎಸ್‌ಡಿ‌ಎಂಸಿ ಸಮನ್ವಯ ವೇದಿಕೆ ಜಿಲ್ಲಾಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು ಶುಭಾಶಂಸನೆಗೈದರು. ಶಾಲೆಯ ಹಳೆ ವಿದ್ಯಾರ್ಥಿ ನಾಗರತ್ನ ಅಶೋಕ ಸ್ವಸ್ತಿ ವಾಚನಗೈದರು. ಶೈಕ್ಷಣಿಕ ಮತ್ತು ಪಾಠೇತರ ಚಟುವಟಿಕೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಶಾಲಾ ವಿದ್ಯಾರ್ಥಿ ನಾಯಕ ಸುಜಿತ್ ಎಸ್.ಪೂಜಾರಿ, ಎಸ್‌ಡಿ‌ಎಂಸಿ ಸದಸ್ಯರು, ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

ಎಸ್‌ಡಿ‌ಎಂಸಿ ಉಪಾಧ್ಯಕ್ಷೆ ಗಾಯತ್ರಿ ಕೊಡಂಚ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಗಂಗಾಧರ ಬಂಟ ವರದಿ ವಾಚಿಸಿದರು. ಸಹಶಿಕ್ಷಕರಾದ ಸುಮನಾ ನಾಯ್ಕ್, ಜಿ.ಕೆ.ವಿಶಾಲಾಕ್ಷಿ, ಸುಚೇತಾ ಎಸ್.ಮಿಜಾರ್ ಮತ್ತು ವಿಶ್ವನಾಥ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಸಹಶಿಕ್ಷಕ ಶ್ರೀಧರ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕ ಭರಮಪ್ಪ ಹಡಪಾದ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!