spot_img
Tuesday, March 17, 2026
spot_img

ಜ.22ರಿಂದ 24: ಕಟ್‌ಬೇಲ್ತೂರು ಶ್ರೀ ಭದ್ರಮಹಾಕಾಳಿ ದೇವಿಯ ರಕ್ತ ಚಂದನದ ನೂತನ ದಾರುಬಿಂಬಿದ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ ಮಹೋತ್ಸವ

ಜನಪ್ರತಿನಿಧಿ ವಾರ್ತೆ] ಕುಂದಾಪುರ: ಕಟ್ ಬೇಲ್ತೂರು ಶ್ರೀ ಭದ್ರಮಹಾಕಾಳಿ ದೈವಸ್ಥಾನದಲ್ಲಿ ಸ್ವರ್ಣಾರೂಢ ಪ್ರಶ್ನಾಚಿಂತನೆ ಮತ್ತು ದೇವಿಯ ಅಪ್ಪಣೆಯ ಮೇರೆಗೆ ಶ್ರೀ ಭದ್ರಮಹಾಕಾಳಿ ದೇವಿಯ ನೂತನ ರಕ್ತ ಚಂದನದ ನೂತನ ದಾರುಬಿಂಬಿದ ಪ್ರತಿಷ್ಠೆ ಹಾಗೂ ಸಪರಿವಾರ ದೈವಗಳ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕುಂಭಾಭಿಷೇಕ ಮಹೋತ್ಸವ ಜನವರಿ 22ರಿಂದ ಜನವರಿ 24ರ ತನಕ ಮೂರು ದಿನಗಳ ಕಾಲ ನಡೆಯಲಿದೆ ಎಂದು ಮಾಜಿ ಶಾಸಕರು, ದೈವಸ್ಥಾನದ ಆಡಳಿತ ಮಂಡಳಿ ಗೌರವಾಧ್ಯಕ್ಷರಾದ ಕೆ.ಗೋಪಾಲ ಪೂಜಾರಿ ತಿಳಿಸಿದರು.

ಅವರು ಜ.17ರಂದು ಕಟ್‌ಬೇಲ್ತೂರು ಭದ್ರಮಹಾಕಾಳಿ ದೈವಸ್ಥಾನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಈ ದೈವಸ್ಥಾನ ಪುರಾತನವಾದ ಧಾರ್ಮಿಕ ಹಿನ್ನೆಲೆಯುಳ್ಳ ಕ್ಷೇತ್ರ. ಈ ಹಿಂದೆ ಭದ್ರಮಹಾಕಾಳಿಯ ಮೂರ್ತಿಯನ್ನು ರಕ್ತ ಚಂದನ ಮರದಿಂದ ನಿರ್ಮಿಸಲಾಗಿತ್ತು. ಇತ್ತೀಚೆಗೆ ಈ ವಿಗ್ರಹವನ್ನು ಬದಲಾಯಿಸಬೇಕಾದ ಅನಿವಾರ್ಯತೆ ಎದುರಾಯಿತು. ಮೂರು ವರ್ಷಗಳ ಕಾಲ ಸೂಕ್ತವಾದ ರಕ್ತಚಂದನ ಮರಕ್ಕಾಗಿ ಶೋಧ ನೆಡೆಸಿ ಕೊನೆಗೆ ಶಿವಮೊಗ್ಗದಲ್ಲಿ ರಕ್ತಚಂದನ ಮರ ದೊರಕಿತು. ಸರಕಾರ ನಿಯಮಾನುಸಾರ ಈ ಮರವನ್ನು ನಮಗೆ ದೊರಕಿಸಿ ಕೊಡಲು ಮುಖ್ಯಮಂತ್ರಿಗಳು ಆದೇಶ ಮಾಡಿದರು. ನಂತರ ಕಾನೂನು ಪ್ರಕಾರ ಸರಕಾರಕ್ಕೆ ಹಣ ಪಾವತಿಸಿ, ಮರವನ್ನು ಕಡಿದು ತರಲಾಯಿತು. ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಹಾಗೂ ರಾಜಗೋಪಾಲ ಆಚಾರ್ಯರು ಭದ್ರಮಹಾಕಾಳಿ ದೇವಿಯ ವಿಗ್ರಹವನ್ನು ನಿರ್ಮಿಸಿದ್ದಾರೆ. ಹಿಂದೆ ಇದ್ದ ವಿಗ್ರಹದ್ದಷ್ಟೇ ಯಥಾವತ್ತಾಗಿ ನೂತನ ವಿಗ್ರಹ ರಚನೆಗೊಂಡಿದೆ ಎಂದರು.

ಜ.20ರಂದು ನೂತನ ವಿಗ್ರಹವನ್ನು ಕೋಟೇಶ್ವರದಲ್ಲಿ ಪೂಜೆ ಸಲ್ಲಿಸಿ ತಂದು ಹೆಮ್ಮಾಡಿ ಶಾಲಾ ಮೈದಾನದಿಂದ ವೈಭವದ ಪುರ ಮೆರವಣಿಗೆಯ ಮೂಲಕ ದೈವಸ್ಥಾನಕ್ಕೆ ತರಲಾಗುವುದು. ಜ.22ರಂದು ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿದೆ. ಜ.23ರಂದು ಗುರುವಾರ ಶ್ರೀ ಭದ್ರಮಹಾಕಾಳಿ ಮೊದಲ್ಗೊಂಡು 39 ಬಿಂಬಗಳಿಗೆ ಅಧಿವಾಸ ಪೂಜೆ, ಪ್ರತಿಷ್ಠಾಧಿವಾಸ ಹೋಮ, ಪೀಠಾಧಿವಾಸ ಹೋಮ, ನಪುಂಸಕ ಶಿಲಾಧಿವಾಸ ಹೋಮ, ಶಕ್ತಿ ಹೋಮ, ಸಂಜೆ ಬ್ರಹ್ಮಕುಂಭ ಪ್ರತಿಷ್ಠೆ, ಆಧಿವಾಸ ಹೋಮ ನಡೆಯಲಿದೆ. ಜ.24 ಶುಕ್ರವಾರ ಬೆಳಿಗ್ಗೆ ಶ್ರೀ ಭದ್ರಮಹಾಕಾಳಿ ದೇವಿಯ ಭವ್ಯವಾದ ರಕ್ತ ಚಂದನದ ದಾರು ಬಿಂಬ ಪ್ರತಿಷ್ಠಾಪನೆ ನಡೆಯಲಿದೆ. ಬ್ರಹ್ಮಕುಂಭಾಭಿಷೇಕ, ಮಹಾಪೂಜೆ, ಅಮ್ಮನವರ ದರ್ಶನ ನಡೆಯಲಿದೆ. ಮಧ್ಯಾಹ್ನ ಮಹಾ‌ಅನ್ನಸಂತರ್ಪಣೆ ನಡೆಯಲಿದೆ ಎಂದರು.

ಆಡಳಿತ ಸಮಿತಿ ಅಧ್ಯಕ್ಷ ಕೆ.ಆನಂದ ಶೆಟ್ಟಿ ಮಾತನಾಡಿ, ಜ.24 ಶುಕ್ರವಾರ ಮಧ್ಯಾಹ್ನ 2ಕ್ಕೆ ಶ್ರೀಕ್ಷೇತ್ರ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ದೈವಸ್ಥಾನದ ಆಡಳಿತ ಮಂಡಳಿ ಗೌರವಾಧ್ಯಕ್ಷರಾದ ಕೆ.ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ವೇ.ಮೂ.ಬ್ರಹ್ಮಶ್ರೀ ಕೆ.ಎಸ್ ಲಕ್ಷ್ಮೀನಾರಾಯಣ ಸೋಮಯಾಜಿ ಕಮ್ಮರಡಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ.ಅಪ್ಪಣ್ಣ ಹೆಗ್ಡೆ ಶುಭಾಶಂಸನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿ, ಮೀನುಗಾರಿಕಾ ಸಚಿವರಾದ ಮಂಕಾಳ ಎಸ್.ವೈದ್ಯ, ಸಂಸದ ಬಿ.ವೈ ರಾಘವೇಂದ್ರ ಮೊದಲಾದವರು ಭಾಗವಹಿಸಲಿದ್ದಾರೆ. ಆ ದಿನ ರಾತ್ರಿ 8 ಗಂಟೆಗೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಗುರುರಾಜ ಗಂಟಿಹೊಳೆ, ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದರು.

ಸಾಂಸ್ಕೃತಿಕ ಕಾರ್ಯಕ್ರಮವಾಗಿ ಜ.೨೪ರಂದು ಅಪರಾಹ್ನ 2 ಗಂಟೆಗೆ ನೃತ್ಯ ವಸಂತ ನಾಟ್ಯಾಲಯ ಕುಂದಾಪುರ ಇವರಿಂದ ನೃತ್ಯ ಸಿಂಚನ, ರಾತ್ರಿ 8 ಗಂಟೆಗೆ ಕಲರ್ಸ್ ಕನ್ನಡ ಖ್ಯಾತಿಯ ಗಿಚ್ಚಿ ಗಿಲಿಗಿಲಿ ಕಾಮಿಡಿ ಕಿಲಾಡಿಗಳಿಂದ ಹಾಸ್ಯ ರೂಪಕ, ಜೀ ಕನ್ನಡ ಸರಿಗಮಪ ಖ್ಯಾತಿಯ ಸುಹಾನ ಸೈಹಾದ್ ಇವರಿಂದ ಸಂಗೀತ ವೈಭವ, ಇನಿದನಿ ಮ್ಯೂಸಿಕಲ್ ವರ್ಲ್ಡ್ ಸಾಸ್ತಾನ, ಈ ಟಿವಿ ಜೀ ಕನ್ನಡ ಕಲರ್ಸ್ ಕನ್ನಡ ಹಾಗೂ ಅಂತರಾಷ್ಟ್ರೀಯ ಮಟ್ಟದ ಕಲಾವಿದರಿಂದ ಗಾನ ನೃತ್ಯ ವೈಭವ ನಡೆಯಲಿದೆ ಎಂದರು.

ದೈವಸ್ಥಾನದ ಆಡಳಿತ ಮೊಕ್ತೇಸರ ಬಿ.ವಿಠಲ ಶೆಟ್ಟಿ ಹೆಗ್ಡೆಯವರಮನೆ ಶ್ರೀಧರ ಶೆಟ್ಟಿ ನಾಗಯ್ಯ ಶೆಟ್ರ ಮನೆ, ಮಂಜಯ್ಯ ಶೆಟ್ಟಿ ವಾಸ ಶೆಟ್ರಮನೆ, ಸೀತಾರಾಮ ಶೆಟ್ಟಿ ಹೆಗ್ಡೆಯವರ ಮನೆ, ಹೈಗುಳಿ ಪಾತ್ರ ರವಿ ನಾಯ್ಕ, ಅಮ್ಮನವರ ಪಾತ್ರಿ ಗೋವಿಂದ ಪೂಜಾರಿ, ಅರ್ಚಕ ದೊಟ್ಟ ಪೂಜಾರಿ, ಜೋಗಿ ಕುಟುಂಬದ ಶೇಖರ ಜೋಗಿ, ಕಾರ್ಯದರ್ಶಿ ಚಂದ್ರ ನಾಯ್ಕ ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!