spot_img
Saturday, February 14, 2026
spot_img

ಶಂಕರನಾರಾಯಣ ವ್ಯವಸಾಯ ಸೇವಾ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಮೈತ್ರಿಕೂಟಕ್ಕೆ ಜಯ

ಜನಪ್ರತಿನಿಧಿ ವಾರ್ತೆ (ಕುಂದಾಪುರ) ಜ.19: ಶಂಕರನಾರಾಯಣ ವ್ಯವಸಾಯ ಸೇವಾ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಚ್ಚಿದಾನಂದ ವೈದ್ಯ ನೇತೃತ್ವದ ಬಿಜೆಪಿ ಮೈತ್ರಿ ಕೂಟ 9 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಬೆಂಬಲಿತರ ತಂಡ 4 ಸ್ಥಾನಗಳಲ್ಲಿ ಜಯ ಗಳಿಸಿದೆ.

ಶಂಕರನಾರಾಯಣ ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಇಂದು (ಜ.19ರಂದು) ಎಲ್ಲಾ 13 ಸ್ಥಾನಗಳಿಗೆ ಚುನಾವಣೆ ನಡೆಯಿತು.

ಸಾಮಾನ್ಯ ಮೀಸಲು ಸ್ಥಾನದಿಂದ ಬಿಜೆಪಿ ಮೈತ್ರಿ ಕೂಟದ ಸಚ್ಚಿದಾನಂದ ವೈದ್ಯ, ಉಮೇಶ ಶೆಟ್ಟಿ ಕಲ್ಗದ್ದೆ, ಕೃಷ್ಣಮೂರ್ತಿ ಡಿ ಶೇಟ್, ಮಂಜುನಾಥ ಕುಲಾಲ್, ವಿಜಯ ಮಡಿವಾಳ ಗೆಲುವು ಸಾಧಿಸಿದ್ದಾರೆ. ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಿಂದ ರವಿಕುಲಾಲ್, ಮಹಿಳಾ ಮೀಸಲು ಕ್ಷೇತ್ರದಿಂದ ಮಮತಾ ಆರ್ ಶೆಟ್ಟಿ ಹದ್ದೂರು, ಲತಾ ಡಿ.ಎಸ್, ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಗಿರಿಜಾ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್ ಬೆಂಬಲಿತರಾದ ರಾಜೀವ ಶೆಟ್ಟಿ, ರಾಮಚಂದ್ರ ದೇವಾಡಿಗ ಸಾಮಾನ್ಯ ಮೀಸಲು ಕ್ಷೇತ್ರದಿಂದ ಜಯ ಗಳಿಸಿದ್ದಾರೆ. ಹಿಂದುಳಿದ ವರ್ಗ ಬ ಮೀಸಲು ಕ್ಷೇತ್ರದಿಂದ ಸದಾಶಿವ ಶೆಟ್ಟಿ, ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಕೃಷ್ಣ ನಾಯ್ಕ ಗೆಲುವು ಸಾಧಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!