spot_img
Saturday, February 14, 2026
spot_img

ತಲ್ಲೂರು: ತಾಲೂಕು ಮಟ್ಟದ ಮಹಿಳಾ ಸಮಾವೇಶ, ವಿಚಾರಗೋಷ್ಠಿ

ಜನಪ್ರತಿನಿಧಿ ವಾರ್ತೆ] ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ) ಕುಂದಾಪುರ ತಾಲೂಕಿನ ತಾಲೂಕು ಮಟ್ಟದ ಮಹಿಳಾ ಸಮಾವೇಶ ಹಾಗೂ ವಿಚಾರಗೋಷ್ಠಿ ಕಾರ್ಯಕ್ರಮ ತಲ್ಲೂರು ಸಂತ ಫ್ರಾನ್ಸಿಸ್ ಆಸಿಸ್ ಚರ್ಚ್ ಹಾಲ್ ಸಭಾಂಗಣದಲ್ಲಿ ನಡೆಯಿತು.

ತಲ್ಲೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ವಸಂತ್ ಆರ್ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ತಾಲೂಕಿನ ಕೇಂದ್ರ ಸಮಿತಿಯ ಉಪಾಧ್ಯಕ್ಷ ಶಶಿಧರ್ ಶೆಟ್ಟಿ ವಹಿಸಿದ್ದರು. ಕುಂದಾಪುರ ತಾಲೂಕಿನ ಯೋಜನಾಧಿಕಾರಿ ಪಾರ್ವತಿ ಅವರು ಮಾತನಾಡಿ, ಮಾತೃಶ್ರಿ ಹೇಮಾವತಿ ಹೆಗ್ಗಡೆಯವರ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಎಲ್ಲಾ ಮಹಿಳೆಯರನ್ನು ಆರ್ಥಿಕವಾಗಿ ಸಾಮಾಜಿಕವಾಗಿ ಪ್ರಭಾವಿ ವ್ಯಕ್ತಿಗಳನ್ನಾಗಿ ಮಾಡುವುದು ಜೊತೆಗೆ ವಾತ್ಸಲ್ಯ ಕಾರ್ಯಕ್ರಮದ ಮೂಲಕ ಸಮಾಜದಲ್ಲಿ ತೀರಾ ಕೆಳಮಟ್ಟದಲ್ಲಿರುವವರಿಗೆ ಮನೆ ನಿರ್ಮಾಣ ಮಾಡುವ ಕಾರ್ಯಕ್ರಮ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಯೋಜನೆ ಕಳೆದ 42 ವರ್ಷಗಳಿಂದ ಮಾಡುತ್ತಾ ಬರುತ್ತಿದೆ ಎಂದರು.

ಖ್ಯಾತ ವಕೀಲರಾದ ಟಿ.ಬಿ ಶೆಟ್ಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಮಹಿಳೆಯರು ಸಮಾಜದ ಕಣ್ಣು ಎಲ್ಲರ ಏಳಿಗೆಗೆ ಪ್ರಮುಖ ಹೋರಾಟ ಮಾಡುವವಳು ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಅರ್ಪಿತ ಪ್ರಶಾಂತ್ ಶೆಟ್ಟಿ ಭಾಗವಹಿಸಿ ಆಧುನಿಕತೆಯ ಪ್ರವಾಹದಲ್ಲಿ ಮಹಿಳೆ ಮತ್ತು ಕುಟುಂಬದ ಬಗ್ಗೆ ಉತ್ತಮವಾಗಿ ವಿಷಯ ಮಂಡಿಸಿದರು. ತಲ್ಲೂರು ಗ್ರಾಮ ಪಂಚಾಯಿತಿನ ಅಧ್ಯಕ್ಷ ಗಿರೀಶ್ ಎಸ್ ನಾಯ್ಕ್, ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಭಾಸ್ಕರ್ ಆಚಾರ್ಯ, ತಲ್ಲೂರು ವಲಯದ ವಲಯಾಧ್ಯಕ್ಷರಾದ ಗೀತಾಂಬ, ತಲ್ಲೂರು ಚರ್ಚ್ ಪಾಲನಾ ಮಂಡಳಿಯ ಕಾರ್ಯದರ್ಶಿ ರೀನಾ ಮೆಂಡೋನ್ಸ್, ತಲ್ಲೂರು ವಲಯದ ಅಧ್ಯಕ್ಷರಾದ ವಿಕ್ರಂ ಉಪಸ್ಥಿತರಿದ್ದರು.

ಕುಂದಾಪುರ ತಾಲೂಕಿನ ವಿಚಕ್ಷಣ ಅಧಿಕಾರಿ, ತಾಲೂಕಿನ ಸೇವಾ ಪ್ರತಿನಿಧಿಗಳು. ತಲ್ಲೂರು ಒಕ್ಕೂಟದ ಪದಾಧಿಕಾರಿಗಳು, ಒಕ್ಕೂಟದ ಸದಸ್ಯರು, ಜ್ಞಾನವಿಕಾಸ ಕೇಂದ್ರದ ಎಲ್ಲಾ ಸಂಯೋಜಕರು ಮತ್ತು ಸದಸ್ಯರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಓಂಕಾರ ಜ್ಞಾನವಿಕಾಸ ಕೇಂದ್ರದ ಸಂಗೀತ ಅನಿಸಿಕೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಕೇಂದ್ರದ ಮಹಿಳೆಯರಿಗೆ ರಂಗೋಲಿ ಪುಷ್ಪಗುಚ್ಛ ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವಲಯ ಮೇಲ್ವಿಚಾರಕಿ ನಾಗರತ್ನ ಸ್ವಾಗತಿಸಿದರು, ರಮೇಶ್ ನಿರೂಪಿಸಿದರು, ಜ್ಞಾನವಿಕಾಸ ಸಮನ್ವಯ ಅಧಿಕಾರಿ ರೇಣುಕಾ ಕೋಡಪದವು ಕಾರ್ಯಕ್ರಮದ ವರದಿ ವಾಚಿಸಿದರು. ಕೃಷಿ ಅಧಿಕಾರಿ ಸಂಜು ಕಳ್ಳಿಮನಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!