spot_img
Wednesday, January 22, 2025
spot_img

ಸುಪ್ರೀಂ ಕೋರ್ಟ್‌ನಲ್ಲಿ ಕ್ಲರ್ಕ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ : ಇಲ್ಲಿದೆ ಸಂಪೂರ್ಣ ಮಾಹಿತಿ

ಜನಪ್ರತಿನಿಧಿ (ಮಾಹಿತಿ) : ಎಲ್‌ಎಲ್‌ಬಿ ಪದವಿ ಮುಗಿಸಿ ಸರ್ಕಾರಿ ನೌಕರಿ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ದೊರಕಿದಂತಾಗುವುದಂತೂ ಸತ್ಯ. ಸುಪ್ರೀಂ ಕೋರ್ಟ್‌ನಲ್ಲಿ ಕೆಲಸ ಅರಸುತ್ತಿರುವವವರಿಗೆ ಇದೊಂದು ಸುವರ್ಣ ಅವಕಾಶ.

ಸುಪ್ರೀಂ ಕೋರ್ಟ್ ಲಾ ಕ್ಲರ್ಕ್ ಕಮ್ ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಜಿ ಪ್ರಕ್ರಿಯೆಯು ಜನವರಿ 14 ರಿಂದ ಪ್ರಾರಂಭವಾಗಿದ್ದು, ಫೆಬ್ರವರಿ 7, 2025 ರವರೆಗೆ ಮುಂದುವರಿಯುತ್ತದೆ.

CSI sci.gov.in ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಆನ್‌ಲೈನ್​​ನಲ್ಲಿ ಅರ್ಜಿ ಸಲ್ಲಿಸಿ. ಸುಪ್ರೀಂ ಕೋರ್ಟ್ ನೇಮಕಾತಿ ಸೆಲ್ ಒಟ್ಟು 90 ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 14 ರಿಂದ ಫೆಬ್ರವರಿ 7 ರ ಮಧ್ಯರಾತ್ರಿ 12 ಗಂಟೆಯ ಮೊದಲು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಈ ಬಗ್ಗೆ ಗಮನಿಸಿ. ಇನ್ನುಳಿದಂತೆ ಅರ್ಜಿ ಸಲ್ಲಿಸುವುದಕ್ಕೆ ಬೇಕಾಗಿ ಅಭ್ಯರ್ಥಿಗಳ ವಯಸ್ಸು ಎಷ್ಟಿರಬೇಕು ಹಾಗೂ ಆಯ್ಕೆ ಪ್ರಕ್ರಿಯೆಯನ್ನು ಹೇಗೆ ನಡೆಸಲಾಗುತ್ತದೆ ಎನ್ನುವುದೆ ಬಗ್ಗೆ ಇಲ್ಲಿ ಸಂಕ್ಷಿಪ್ತವಾಗಿ ವಿವರಿಸಲಾಗಿದೆ.

SCI ಕಾನೂನು ಕ್ಲರ್ಕ್ ನೇಮಕಾತಿ ಅರ್ಹತಾ ಮಾನದಂಡ :

ಲಾ ಕ್ಲರ್ಕ್ ಕಮ್ ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಾನೂನಿನಲ್ಲಿ ಪದವೀಧರರಾಗಿರುವುದು ಕಡ್ಡಾಯವಾಗಿದೆ. ಐದು ವರ್ಷಗಳ ಇಂಟಿಗ್ರೇಟೆಡ್ ಕಾನೂನು ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳು ಸಹ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರ ವಯಸ್ಸು 7 ಫೆಬ್ರವರಿ 2025 ರಂತೆ 20 ರಿಂದ 32 ವರ್ಷಗಳ ನಡುವೆ ಇರಬೇಕು.

SCI ಕಾನೂನು ಕ್ಲರ್ಕ್ ನೇಮಕಾತಿ ಅರ್ಜಿ ಶುಲ್ಕ:

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ರೂ 500 ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೋಡ್ ಮೂಲಕ ಮಾತ್ರ ಪಾವತಿಸಬೇಕು. UCO ಬ್ಯಾಂಕ್ ಒದಗಿಸಿದ ಪಾವತಿ ಗೇಟ್‌ವೇ ಮೂಲಕ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ, ಅಭ್ಯರ್ಥಿಗಳು ಬಿಡುಗಡೆಯಾದ ನೇಮಕಾತಿ ಜಾಹೀರಾತನ್ನು ಪರಿಶೀಲಿಸಬಹುದು.

SCI ಕಾನೂನು ಕ್ಲರ್ಕ್ ನೇಮಕಾತಿಗೆ ಅರ್ಜಿ ಸಲ್ಲಿಸುವುದು ಹೇಗೆ?

  • ಅಧಿಕೃತ ವೆಬ್‌ಸೈಟ್ sci.gov.in ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ನೀಡಿರುವ ಸೂಚನೆ ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
  • ಬಳಿಕ ನೇಮಕಾತಿ ಟ್ಯಾಬ್ ಮೇಲೆ ಕ್ಲಿಕ್ ಮಾಡಿ.
  • ಇಲ್ಲಿ ಲಾ ಕ್ಲರ್ಕ್ ಕಮ್ ರಿಸರ್ಚ್ ಅಸೋಸಿಯೇಟ್ ಅಧಿಸೂಚನೆಯನ್ನು ಕ್ಲಿಕ್ ಮಾಡಿ.
  • ನಂತರ ನಿಯಮಗಳ ಪ್ರಕಾರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಮತ್ತು ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಸಲ್ಲಿಸಿ.

SCI ಲಾ ಕ್ಲರ್ಕ್ ಹುದ್ದೆಯ ಆಯ್ಕೆ ಪ್ರಕ್ರಿಯೆ:

ಅರ್ಜಿದಾರರನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಪರೀಕ್ಷೆಯಲ್ಲಿ ಬಹು ಆಯ್ಕೆಯ ಮಾದರಿಯ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಪರೀಕ್ಷೆಯನ್ನು 9 ಮಾರ್ಚ್ 2025 ರಂದು ನಡೆಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!