spot_img
Wednesday, January 22, 2025
spot_img

ನಾಳೆ ಸಂಜೆ 7ಕ್ಕೆ ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆ : ವಿಜಯೇಂದ್ರ ಯಡಿಯೂರಪ್ಪ | ಮಹತ್ವದ ಚರ್ಚೆ ಸಾಧ್ಯತೆ !

ಜನಪ್ರತಿನಿಧಿ (ಬೆಂಗಳೂರು) :  ಜ.21 ಸಂಜೆ 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ ನಡೆಸುವುದಕ್ಕೆ ನಿಶ್ಚಯಿಸಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.

ವರದಿಗಾರರರಿಗೆ ಪ್ರತಿಕ್ರಿಯಿಸಿ ಮಾತನಾಡಿದ ವಿಜಯೇಂದ್ರ, ರಾಜ್ಯ ಬಿಜೆಪಿ ಉಸ್ತುವಾರಿ ಗಾಊ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್‌ ದಾಸ್‌ ಅಗರ್‌ವಾಲ್‌, ತಮಿಳುನಾಡಿನಿಂದ ಪೊನ್ನು ರಾಧಾಕೃಷ್ಣನ್‌, ರಾಜ್ಯದ ಸಹ ಉಸ್ತುವಾರಿ ಸುಧಾಕರ ರೆಡ್ಡಿ ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶಾಸಕರು, ಸಂಸದರು, ವಿಧಾನಪರಿಷತ್‌ ಸದಸ್ಯರನ್ನು ಒಳಗೊಂಡು ನಮ್ಮ ಚುನಾಯಿತ ಪ್ರತಿನಿಧಿಗಳ ಸಭೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಸಭೆಯಲ್ಲಿ ರಾಜ್ಯ ಬಿಜೆಪಿಯ ಅಭಿಪ್ರಾಯ ಪಡೆಯಲಿದ್ದಾರೆ. ಸಂಘಟನೆಗೆ ಸಂಬಂಧಿಸಿದಂತೆ ಚರ್ಚಿಸಲಿದ್ದಾರೆ. ಸಂಜೆ ರಾಜ್ಯದಲ್ಲಿ ನಡೆಯುತ್ತಿರುವ ಸಂಘಟನಾ ಪರ್ವದ ಬಗ್ಗೆ ಚರ್ಚೆಯೂ ನಡೆಯಲಿದೆ. ಮಂಡಲ ಅಧ್ಯಕ್ಷರ ಚುನಾವಣೆ ನಡೆದಿದೆ. ಜಿಲ್ಲಾಧ್ಯಕ್ಷರ ನಿಯೋಜನೆ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯಾಧ್ಯಕ್ಷರ ಚುನಾವಣೆ ಬಗ್ಗೆ ಕೂಡ ಚರ್ಚೆ ನಡೆಯಲಿದೆ  ಎಂದು ಅವರು ವಿವರಿಸಿದ್ದಾರೆ. ಪಕ್ಷದ ಚುನಾವಣಾ ಅಧಿಕಾರಿಗಳು, ಸಹ ಅಧಿಕಾರಿಗಳು ೧೩ ಜನ ಮೇಲ್ವಿಚಾರಕರ ಸಭೆಯೂ ನಡೆಯಲಿದೆ ಎಂದು ತಿಳಿಸಿದ್ದಾರೆ.

ಈ ಸಭೆಗಳಲ್ಲಿ ಸಂಸದರು, ಶಾಸಕರು, ವಿಧಾನಪರಿಷತ್‌ ಸದಸ್ಯರು ಭಾಗವಹಿಸಲಿದ್ದಾರೆ. ರಾಜ್ಯದ ಪರಿಸ್ಥಿತಿ, ಸಂಘಟನಾ ವಿಚಾರವಾಗಿ, ರಾಜ್ಯದ ಅಧ್ಯಕ್ಷರ ವಿಚಾರವಾಗಿ ಎಲ್ಲವೂ ಕೂಡ ಸಮಗ್ರವಾಗಿ ನಾಳೆ ಚರ್ಚೆ ನಡೆಯಲಿದೆ ಎಂದವರು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!