spot_img
Wednesday, March 18, 2026
spot_img

ಕಾಡು ನಾಶ ಆರೋಪ : ಕಾಂತಾರ ತಂಡ ಷರತ್ತು ಉಲ್ಲಂಘಿಸಿದ್ದರೆ ಕ್ರಮ : ಈಶ್ವರ ಖಂಡ್ರೆ

ಜನಪ್ರತಿನಿಧಿ (ಬೆಂಗಳೂರು) : ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಯಸಳೂರು ವಲಯದ ಶನಿವಾರಸಂತೆ ಬಳಿ ಹೇರೂರು ಗ್ರಾಮದ ಗವಿಬೆಟ್ಟ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಚಿತ್ರೀಕರಣ ನಡೆಸುತ್ತಿರುವ ಕಾಂತಾರಾ ಚಾಪ್ಟರ್ 1 ಚಿತ್ರ ತಂಡ ಷರತ್ತು ಉಲ್ಲಂಘಿಸಿದ್ದರೆ ಚಿತ್ರೀಕರಣ ನಿರ್ಬಂಧಿಸಿ, ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು,  ಗವಿಬೆಟ್ಟ ಮತ್ತು ಸುತ್ತಮುತ್ತಲ ಪರಿಭಾವಿತ ಅರಣ್ಯದ ಅಂಚಿನ ಗೋಮಾಳದಲ್ಲಿ 23 ದಿನ ಕಾಂತಾರಾ ಚಾಪ್ಟರ್ 1 ಚಿತ್ರೀಕರಣ ನಡೆಸಲು ಹೊಂಬಾಳೆ ಫಿಲಂಸ್ ಚಿತ್ರತಂಡ ಅನುಮತಿ ಕೋರಿತ್ತು. ಇದಕ್ಕೆ ಹಾಸನ ಉಪ ಅರಣ್ಯ ಸಂರಕ್ಷಣಾಧಿಕಾರಿಯವರು ಷರತ್ತುಬದ್ಧ ಅನುಮತಿ ನೀಡಿದ್ದಾರೆ ಎಂದರು.

ಆದರೆ ಕಾಂತಾರಾ ತಂಡ ಚಿತ್ರೀಕರಣದ ವೇಳೆ ಸ್ಫೋಟಕ ಬಳಸುತ್ತಿದ್ದು, ಇದರಿಂದ ವನ್ಯಜೀವಿಗಳು ವಿಚಲಿತವಾಗುತ್ತಿವೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿರುತ್ತದೆ. ವಿಷಯ ತಿಳಿಯುತ್ತಿದ್ದಂತೆ ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಇಂದೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲು ತಿಳಿಸಿದ್ದೇನೆ.  ಚಿತ್ರತಂಡದಿಂದ ಒಂದೊಮ್ಮೆ ಷರತ್ತುಗಳ ಉಲ್ಲಂಘನೆಯಾಗಿ, ವನ್ಯಜೀವಿಗಳಿಗೆ ಅಥವಾ ಸಸ್ಯ ಸಂಕುಲಕ್ಕೆ ಯಾವುದೇ ಹಾನಿ ಆಗದ್ದಲ್ಲಿ ಕೂಡಲೇ ಚಿತ್ರೀಕರಣ ಸ್ಥಗಿತಗೊಳಿಸಲು ಮತ್ತು  ಕ್ರಮ ಜರುಗಿಸಲು ಸೂಚಿಸಿದ್ದೇನೆ ಎಂದು ತಿಳಿಸಿದರು.

ಇನ್ನು ಟಾಕ್ಸಿಕ್ ಚಿತ್ರತಂಡಕ್ಕೆ, ಎಚ್.ಎಂ.ಟಿ.ಯಿಂದ ಭೂಮಿ ಖರೀದಿಸಿರುವ ಕೆನರಾ ಬ್ಯಾಂಕ್ ಗುತ್ತಿಗೆ ನೀಡಿದ್ದು, ಮೂರೂ ಸಂಸ್ಥೆ ಮೇಲೆ ಎಫ್.ಐ.ಆರ್. ಆಗಿದೆ. ಪ್ರಕರಣ ನ್ಯಾಯಾಲಯದಲ್ಲಿದೆ. ಘನ ನ್ಯಾಯಾಲಯ ತಡೆಯಾಜ್ಞೆ  ನೀಡಿದ್ದು, ಇದರ ತೆರವಿಗೆ ಕ್ರಮ ವಹಿಸುವಂತೆ ಸೂಚಿಸಲಾಗಿದೆ ಎಂದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!