spot_img
Wednesday, January 22, 2025
spot_img

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ವೀರೇಂದ್ರ ಹೆಗ್ಗಡೆ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಮಹೇಶ್‌ ಶೆಟ್ಟಿ ತಿಮರೋಡಿ ಮತ್ತವರ ಸಹಚರರಿಗೆ ಹೈಕೋರ್ಟ್‌ ಆದೇಶ

ಜನಪ್ರತಿನಿಧಿ (ಬೆಂಗಳೂರು) : ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಮತ್ತು ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಯಾವುದೇ ಮಾನಹಾನಿ ಹೇಳಿಕೆ ನೀಡದಂತೆ ಹೈಕೋರ್ಟ್‌, ಮಹೇಶ್‌ ಶೆಟ್ಟಿ ತಿಮರೋಡಿ ಹಾಗೂ ಅವರ ಅನುಯಾಯಿಗಳಿಗೆ ಆದೇಶಿಸಿದೆ.

ನ್ಯಾಯಮೂರ್ತಿ ಆರ್‌.ದೇವದಾಸ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ಸಾರ್ವಜನಿಕ ಸಭೆಗಳು ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಡಾ.ವೀರೇಂದ್ರ ಹೆಗ್ಗಡೆ, ಅವರ ಕುಟುಂಬ, ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಯಾವುದೇ ಅಪಪ್ರಚಾರ ಅಥವಾ ಮಾನಹಾನಿ ಹೇಳಿಕೆ ನೀಡಬಾರದು ಎಂದು ನ್ಯಾಯಾಲಯ ಆದೇಶ ನೀಡಿದೆ.

ಸಿವಿಲ್‌ ನ್ಯಾಯಾಲಯದ ತಡೆಯಾಜ್ಞೆ ಇದ್ದರೂ, ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್‌ ಶೆಟ್ಟಿ ತಿಮರೋಡಿ ಮತ್ತಿತರರು ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಅವಮಾನಕರ ಹೇಳಿಕೆ ನೀಡಿರುವುದನ್ನು ಮತ್ತು ನ್ಯಾಯಾಂಗ ಹಾಗೂ ಹೈಕೋರ್ಟ್‌ ನ್ಯಾಯಮೂರ್ತಿಗಳ ನಿಂದನೆಯನ್ನು ಹೈಕೋರ್ಟ್‌ ಗಂಭೀರವಾಗಿ ಪರಿಗಣಿಸಿ, ಈ ಆದೇಶ ನೀಡಿದೆ. ಅರ್ಜಿ ವಿಚಾರಣೆ ವೇಳೆ ಮಹೇಶ್‌ ಶೆಟ್ಟಿ ತಿಮರೋಡಿ ಬೇಷರತ್‌ ಕ್ಷಮೆಯ ಅಫಿಡವಿಟ್‌ ಸಲ್ಲಿಸಿದ್ದರೂ, ತಮ್ಮ ವರ್ತನೆ ಸರಿಪಡಿಸಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ಹಾಗೂ ಅವರ ಸಹಚರರು ಯಾವುದೇ ಸಾಮಾಜಿಕ ಜಾಲತಾಣ, ಸಭೆ, ಸಮಾರಂಭಗಳಲ್ಲಿ ಧರ್ಮಸ್ಥಳ, ಧರ್ಮಾಧಿಕಾರಿಗಳು, ಕುಟುಂಬ ಸದಸ್ಯರು ಹಾಗೂ ಧರ್ಮಸ್ಥಳದ ಸಂಸ್ಥೆಗಳ ವಿಚಾರದಲ್ಲಿ ನ್ಯಾಯಾಂಗ ನಿಂದನೆ, ಅಪಪ್ರಚಾರ, ಮಾನಹಾನಿ ಮಾಡಿದಲ್ಲಿ ಕಾನೂನು ರೀತಿ ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆದೇಶಿಸಿದೆ.

ಅರ್ಜಿದಾರರ ಪರ ಹೈಕೋರ್ಟ್‌ನಲ್ಲಿ ಹಿರಿಯ ನ್ಯಾಯವಾದಿ ಉದಯ ಹೊಳ್ಳ ಹಾಗೂ ಆರ್‌.ರಾಜಶೇಖರ್‌ ಹಿಲಿಯಾರು ವಾದ ಮಂಡಿಸಿದರು.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!