spot_img
Tuesday, March 17, 2026
spot_img

ವಿದ್ಯಾರಣ್ಯ ಶಾಲೆಯಲ್ಲಿ ವಿದ್ಯಾರ್ಥಿನಿ ಚಿಕಿತ್ಸೆಗೆ 3 ಲಕ್ಷ ರೂ. ಸಹಾಯಹಸ್ತ ವಿತರಣೆ

ಕುಂದಾಪುರ: “ಅವಿಭಕ್ತ ಕುಟುಂಬ ವ್ಯವಸ್ಥೆಯು ನಮ್ಮ ದೇಶದ ಶ್ರೀಮಂತ ಸಂಸ್ಕೃತಿಯ ಭಾಗವಾಗಿದೆ. ಈ ವ್ಯವಸ್ಥೆಯಲ್ಲಿ ಕುಟುಂಬದ ಸದಸ್ಯರಲ್ಲಿ ನಾವು ನಮ್ಮವರು ಎಂಬ ಭಾವನೆ ಮೂಡಿ ಒಬ್ಬರಿಗೊಬ್ಬರು ಹೊಂದಾಣಿಕೆಯಿಂದ ಸಹಕಾರ ಮನೋಭಾವದಿಂದ ಜೀವನ ಸಾಗಿಸುತ್ತಾರೆ. ಇದು ಉತ್ತಮ ಸಮಾಜ ಮುನ್ನಡೆಗೆ ಸಹಾಯವಾಗುತ್ತದೆ. ಹಾಗೆಯೇ ಶಾಲೆಯೂ ಕೂಡ ಒಂದು ತುಂಬು ಕುಟುಂಬಕ್ಕೆ ಉದಾಹರಣೆಯಾಗಿದ್ದು, ಇಲ್ಲಿ ಮಕ್ಕಳು, ಪೋಷಕರು, ಶಿಕ್ಷಕರು, ಆಡಳಿತ ಮಂಡಳಿ, ಬೋಧಕೇತರ ಸಿಬ್ಬಂದಿಗಳು ಇಡೀ ಕುಟುಂಬದ ಸದಸ್ಯರು. ಇಲ್ಲಿ ಯಾರಿಗಾದರೂ ಸಮಸ್ಯೆ ಎದುರಾದರೂ ಆಡಳಿತ ಮಂಡಳಿ ಮತ್ತು ಎಲ್ಲರೂ ಜೊತೆಗೆ ನಿಂತು ಸಹಕರಿಸುತ್ತಾರೆ. ಅಂತೆಯೇ ನಮ್ಮ ಸಂಸ್ಥೆಯೂ ಹಿಂದಿನಿಂದಲೂ ಈ ಸಹಕಾರ ತತ್ವದಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ರೀತಿ ಸಹಕಾರ ಮತ್ತು ಹೊಂದಾಣಿಕೆಯಿಂದ ಸಂಸ್ಥೆಗಳು ಉತ್ತಮವಾಗಿ ಮುನ್ನೆಡೆಯಲು ಸಾಧ್ಯವಾಗುತ್ತದೆ” ಎಂದು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್(ರಿ) ಇದರ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ ಹೇಳಿದರು.

ಹೃದಯ ಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿ ತ್ರಿಷಿಕಾಳ ಹೃದಯ ಶಸ್ತ್ರ ಚಿಕಿತ್ಸೆಗೆ, ಶಾಲಾ ಆಡಳಿತ ಮಂಡಳಿ, ಪೋಷಕರು, ಶಿಕ್ಷಕ-ಶಿಕ್ಷಕೇತರ ವೃಂದದವರು ನೀಡಿದ ದೇಣಿಗೆ ಸಹಾಯಧನ ಒಟ್ಟು 3,11,465 ರೂಪಾಯಿಗಳನ್ನು ಬಾಲಕಿಯ ತಾಯಿಗೆ ಹಸ್ತಾಂತರಿಸಿ ಮಾತನಾಡಿದರು.

ಶಾಲೆಯ ವಿದ್ಯಾರ್ಥಿನಿಯ ಚಿಕಿತ್ಸೆಗೆ ದೊಡ್ಡ ಮೊತ್ತದ ಹಣ ಸಂಗ್ರಹಿಸಲು ಸಹಕರಿಸಿದ ಶಾಲೆಯ ಪೋಷಕರಿಗೆ ಶಾಲಾ ಆಡಳಿತ ಮಂಡಳಿ ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಮುಖ್ಯ ಶಿಕ್ಷಕ ಪ್ರದೀಪ್ ಕೆ. ಮತ್ತು ಶಿಕ್ಷಕ ವೃಂದದವರು ಕೃತಜ್ಞತೆ ಸಲ್ಲಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!