spot_img
Tuesday, March 17, 2026
spot_img

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಇವರೆಲ್ಲಾ ನಕಲಿ ಗಾಂಧಿಗಳು : ಅಶೋಕ್‌ ವ್ಯಂಗ್ಯ

ಜನಪ್ರತಿನಿಧಿ (ಬೆಂಗಳೂರು) : ದೇಶಕ್ಕೆ ಸ್ವಾತ್ರಂತ್ಯ ತಂದುಕೊಟ್ಟವರು ಮಹಾತ್ಮ ಗಾಂಧಿ. ಅವರೇ ನಿಜವಾದ ಗಾಂಧಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಇವರೆಲ್ಲಾ ನಕಲಿ ಗಾಂಧಿಗಳು ಎಂದು ವಿಧಾನಸಭಾ ವಿಪಕ್ಷ ನಾಯಕ ಆರ್.ಅಶೋಕ ವ್ಯಂಗ್ಯವಾಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆ ಮಾಸುವ ಮುನ್ನವೇ, ಹೊನ್ನಾವರದಲ್ಲಿ ಕೂಡ ಗರ್ಭಿಣಿ ಹಸುವನ್ನು ಭೀಕರವಾಗಿ ಕೊಲ್ಲಲಾಗಿದೆ. ಕರ್ನಾಟಕದಲ್ಲಿ ಗೋವುಗಳಿಗೆ ರಕ್ಷಣೆ ಇಲ್ಲ ಎಂಬುದು ಇದರಿಂದ ಸಾಬೀತಾಗಿದೆ.

ರಾಜ್ಯ ಕಾಂಗ್ರೆಸ್‌ ಸರ್ಕಾರ ಕಿವುಡು ಸರ್ಕಾರ. ರಾಜ್ಯದ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದರೂ, ಸರ್ಕಾರ ಸಮಾವೇಶ ಮಾಡುತ್ತಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಇವರೆಲ್ಲಾ ಸ್ವಾತಂತ್ರ್ಯ ಹೋರಾಟ ಮಾಡಿದ್ದಾರಾ? ಇವರೆಲ್ಲಾ ಡೂಪ್ಲಿಕೇಟ್ ಗಾಂಧಿಗಳು ಎಂದವರು ಹೇಳಿದ್ದಾರೆ.

ಇನ್ನು, ರಾಜ್ಯದಲ್ಲಿ ಗೃಹ ಸಚಿವರು ಯಾರು ಎನ್ನುವುದೇ ಗೊತ್ತಾಗುತ್ತಿಲ್ಲ. ಎಲ್ಲ ಸಚಿವರು ಗೃಹ ಇಲಾಖೆಯಲ್ಲಿ ಕೈಯಾಡಿಸುತ್ತಿದ್ದಾರೆ. ಭ್ರಷ್ಟಾಚಾರ ಹಾಗೂ ಲಂಚಾವತಾರ ಮಿತಿ ಮೀರಿದೆ. ಶೇ.60 ರಷ್ಟು ಕಮಿಷನ್ ಕೊಟ್ಟರೆ ಮಾತ್ರ ಈ ಸರ್ಕಾರದಲ್ಲಿ ಫೈಲ್ ಮೂವ್ ಆಗುತ್ತದೆ. ವಿಜಯಪುರಲ್ಲಿ ಕಾರ್ಮಿಕರನ್ನು ನಡು ರಸ್ತೆಯಲ್ಲಿಯೇ ಥಳಿಸುತ್ತಿರುವ ಹೃದಯವಿದ್ರಾವಕ ಘಟನೆಯನ್ನು ಮಾಧ್ಯಮಗಳಲ್ಲಿ ನೋಡಿದೆ. ಬೀದಿಯಲ್ಲೇ ನಿಂತು ರಾಜಾರೋಷವಾಗಿ ಹೊಡೆಯುತ್ತಿದ್ದಾರೆ ಎಂದರೆ ರಾಜ್ಯದಲ್ಲಿರುವ ದರೋಡೆಕೋರರಿಗೆ, ರೌಡಿಗಳಿಗೆ ಪೊಲೀಸರ ಬಗ್ಗೆ ಏನು ಸಂದೇಶ ಹೋಗುತ್ತಿದೆ? ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ ಎಂಬುದಕ್ಕೆ ಇದು ಉದಾಹರಣೆ ಎಂದು ಅವರು ಸಿಟ್ಟಾಗಿದ್ದಾರೆ.

ಹಾಡಹಗಲೇ ಬ್ಯಾಂಕ್ ದರೋಡೆ ನಡೆಯುತ್ತಿದೆ. ಇಷ್ಟೆಲ್ಲಾ ಆದರೂ ರಾಜ್ಯ ಸರ್ಕಾರ ಸುಮ್ಮನೆ ಕುಳಿತಿದೆ. ಇದೊಂದು ಕುಂಭಕರ್ಣ ಸರ್ಕಾರ. ಕಾಂಗ್ರೆಸ್ ಆಡಳಿತದ 20 ತಿಂಗಳಲ್ಲಿ 20 ಹಗರಣಗಳು ನಡೆದಿವೆ. ಬೆಳಗಾವಿ ಅಧಿವೇಶನದಲ್ಲಿ ಸಿ.ಟಿ.ರವಿ ಅವರ ಮೇಲಿನ ಹಲ್ಲೆ ಪ್ರಕರಣವನ್ನು ಯಾರು ನಿರ್ವಹಣೆ ಮಾಡುತ್ತಿದ್ದಾರೆ? ಜಿಲ್ಲಾ ಉಸ್ತುವಾರಿ ಸಚಿವರು ತಾವು ನಿರ್ವಹಿಸುತ್ತಿಲ್ಲ ಎನ್ನುತ್ತಿದ್ದಾರೆ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಾನು ಹ್ಯಾಂಡಲ್ ಮಾಡುತ್ತಿಲ್ಲ ಎನ್ನುತ್ತಿದ್ದಾರೆ. ಸಚಿವ ಪರಮೇಶ್ವರ್ ನನಗೆ ವಿಷಯ ಗೊತ್ತಿಲ್ಲ ಎಂದಿದ್ದಾರೆ. ಗೃಹ ಇಲಾಖೆಯನ್ನು ಯಾರು ಹ್ಯಾಂಡಲ್ ಮಾಡುತ್ತಿದ್ದಾರೆ? ಎಂದು ಪ್ರಶ್ನೆ ಮಾಡಿದರು.

ಕಾಂಗ್ರೆಸ್ ಎಂದರೆ 60% ಕಮಿಷನ್ ಸರ್ಕಾರ. ಎಲ್ಲ ಇಲಾಖೆಗಳಲ್ಲೂ 60% ಕಮಿಷನ್ ಪಡೆಯುತ್ತಿದ್ದಾರೆ. ಮುಡಾದಲ್ಲಿ 3 ಸಾವಿರ ಕೋಟಿ ರೂ.ಗೂ ಹೆಚ್ಚು ಹಾಗೂ ವಾಲ್ಮೀಕಿ ನಿಗಮದಲ್ಲಿ 197 ಕೋಟಿ ರೂ. ಹಗರಣ ಆಗಿದೆ. ಈ ಎಲ್ಲ ಹಣ ಈಗ ಬೆಳಗಾವಿಯ ಕಾಂಗ್ರೆಸ್ ಸಮಾವೇಶಕ್ಕೆ ಬಳಕೆಯಾಗಿದೆ. ಕಾಂಗ್ರೆಸ್ ನವರು ಕರ್ನಾಟಕವನ್ನು ಲೂಟಿ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!