spot_img
Tuesday, March 17, 2026
spot_img

ಸಂವಿಧಾನ ದ್ವೇಷಿ ಆರ್.ಎಸ್.ಎಸ್ ಸಿದ್ಧಾಂತವನ್ನು ಬಿಜೆಪಿ ಭಾರತೀಯರ ಮೇಲೆ ಹೇರುತ್ತಿದೆ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಳಗಾವಿ) : ಸಂವಿಧಾನ ದ್ವೇಷಿಯಾಗಿರುವ ಆರ್.ಎಸ್.ಎಸ್ ಸಿದ್ಧಾಂತವನ್ನು ಬಿಜೆಪಿ ಭಾರತೀಯರ ಮೇಲೆ ಹೇರುತ್ತಿದ್ದು, ಇದನ್ನು ಹಿಮ್ಮೆಟ್ಟಿಸೋಣ. ಬಿಜೆಪಿ ಪರಿವಾರ ಭಾರತದಲ್ಲಿ ಬಹಳ ವ್ಯವಸ್ಥಿತವಾಗಿ ಒಡಕು ತರುತ್ತಿದೆ. ಭಾರತೀಯರ ನಡುವೆ ಬಿರುಕು ಮೂಡಿಸುತ್ತಾ ಭಾರತವನ್ನು ದುರ್ಬಲಗೊಳಿಸುತ್ತಿದೆ. ಬಿಜೆಪಿಯ ಈ ಯತ್ನವನ್ನು ನಾವು ಸೋಲಿಸಬೇಕು. ಇದಕ್ಕೆ ಗಾಂಧಿ-ಅಂಬೇಡ್ಕರ್ ನಮಗೆ ಮಾರ್ಗದರ್ಶಕರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಐತಿಹಾಸಿಕ ಜೈ ಬಾಪು-ಜೈ ಭೀಮ್- ಜೈ ಸಂವಿಧಾನ ಅಭಿಯಾನದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸಮಾರಂಭವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಸಂವಿಧಾನ ಜಾರಿಯಾದಾಗ ಬಿಜೆಪಿ ಪರಿವಾರ ಅಂಬೇಡ್ಕರ್ ಭಾವಚಿತ್ರವನ್ನು, ಸಂವಿಧಾನವನ್ನು ಸುಟ್ಟಿತ್ತು. ಇದನ್ನು ಈ ದೇಶ, ದೇಶದ ಜನ ಸಮುದಾಯ ಯಾವತ್ತೂ ಕ್ಷಮಿಸುವುದಿಲ್ಲ, ಮರೆಯುವುದಿಲ್ಲ. ಹಲವು ಭಾಷೆ, ಹಲವು ಜಾತಿ, ಹಲವು ಧರ್ಮ‌ ಭಾರತದ ಶಕ್ತಿ. ಬಿಜೆಪಿ ಪರಿವಾರ ಗಾಂಧಿ, ಅಂಬೇಡ್ಕರ್ ರನ್ನು ದ್ವೇಷಿಸುತ್ತದೆ. ನಾವು ಇಬ್ಬರ ಆಶಯಗಳನ್ನೂ ಪೀಳಿಗೆಯಿಂದ ಪೀಳಿಗೆಗೆ ದಾಟಿಸುತ್ತೇವೆ, ವಿಸ್ತರಿಸುತ್ತೇವೆ ಎಂದು ಹೇಳಿದ್ದಾರೆ.

ನಾವು ಸಂವಿಧಾನ ರಕ್ಷಿಸಿದರೆ, ಸಂವಿಧಾನ ನಮ್ಮೆಲ್ಲರನ್ನೂ ರಕ್ಷಿಸುತ್ತದೆ. ನಮಗೆ ಚುನಾವಣೆ ಗೆಲ್ಲುವುದಕ್ಕಿಂತ ನಮ್ಮ ಸಿದ್ಧಾಂತ ಗೆಲ್ಲಬೇಕು. ಅದು ಮಾತ್ರ ನಮ್ಮ ನಿಜವಾದ ಗೆಲುವು. ಗಾಂಧಿ ಅಂಬೇಡ್ಕರ್ ಅವರ ಆಶಯಗಳು, ಮೌಲ್ಯಗಳ ಈಡೇರಿಕೆಗೆ ನಾವು ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದ್ದೇವೆ. ಇದಕ್ಕಾಗಿ ಬಜೆಟ್ ನಲ್ಲಿ 52 ಸಾವಿರ ಕೋಟಿಗೂ ಅಧಿಕ ಮೊತ್ತದ ಹಣವನ್ನು ನೇರವಾಗಿ ಜನರ ಖಾತೆಗೆ ಹಾಕಿ ರಾಜ್ಯದ ಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸಿದ್ದೇವೆ ಎಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!