spot_img
Wednesday, January 22, 2025
spot_img

ಜ.23ರಂದು ತೆಕ್ಕಟ್ಟೆಯಲ್ಲಿ ಬೀಜಾಡಿ ಮೀನುಗಾರರ ಸಹಕಾರಿ ಸಂಘದ ನಾಲ್ಕನೇ ಶಾಖೆ ಉದ್ಘಾಟನೆ

ಕುಂದಾಪುರ: ಮೀನುಗಾರರ ಸಹಕಾರಿ ಸಂಘ ನಿಯಮಿತ ಬೀಜಾಡಿ ಇದರ 4 ಶಾಖೆಯ ಉದ್ಘಾಟನ ಸಮಾರಂಭವು ಜ.23ರಂದು ಬೆಳಗ್ಗೆ 10 ಗಂಟೆಗೆ ತೆಕ್ಕಟ್ಟೆ ರಾ.ಹೆ.66ರ ಸಮೀಪದ ನಿರೂಪಮಾ ಕಾಂಪ್ಲೆಕ್ಸ್‌ನಲ್ಲಿ ಉದ್ಘಾಟನೆಗೊಳ್ಳಲಿದೆ.

ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ನಾಡೋಜ ಡಾ.ಜಿ. ಶಂಕರ್ ಇವರು ಶಾಖೆಯನ್ನು ಉದ್ಘಾಟಿಸಲಿದ್ದು ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಬಿ.ಮಂಜುನಾಥ ಕುಂದರ್ ಚಾತ್ರಬೆಟ್ಟು ಅಧ್ಯಕ್ಷತೆ ವಹಿಸಲಿದ್ದಾರೆ.

ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ್ ಎಸ್ ವೈದ್ಯ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಹಿರಿಯ ಮೀನುಗಾರರಿಗೆ ಗೌರವ ಪುರಸ್ಕಾರ ನೀಡಲಿದ್ದಾರೆ. ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್ ಅವರು ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ.

ಶಾಸಕ ಎ.ಕಿರಣ್ ಕುಮಾರ್ ಕೊಡ್ಲಿ ಅವರು ಗಣಕಯಂತ್ರ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ.ಸುವರ್ಣ ಸ್ವಸಹಾಯ ಗುಂಪುಗಳಿಗೆ ಸಾಲ ವಿತರಣೆ ಮಾಡಲಿದ್ದಾರೆ. ಈ ಸಂದರ್ಭ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಅವರು ಬೀಜಾಡಿಯ ಹುತಾತ್ಮ ಯೋಧ ಅನೂಪ್ ಪೂಜಾರಿಯವರ ಸ್ಮರಣಾರ್ಥ ಹುತಾತ್ಮ ಯೋಧನ ತಾಯಿ ಮತ್ತು ಪತ್ನಿಗೆ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಕಿಶೋರ್ ಕುಮಾರ್, ತೆಕ್ಕಟ್ಟೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭನಾ ಶೆಟ್ಟಿ ಉದ್ಯಮಿ ಎಂ.ದಿನೇಶ್ ಹೆಗ್ಡೆ ಮೊಳಹಳ್ಳಿ ಮೀನುಗಾರಿಕಾ ನಿರ್ದೇಶಕ ದಿನೇಶ್ ಕುಮಾರ್ ಕಳ್ಳೇರ್, ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಎಂ. ಶಿವರಾಮ ಶೆಟ್ಟಿ ಮಲ್ಯಾಡಿ, ಸಹಕಾರ ಸಂಘಗಳ ಉಪನಿಬಂಧಕಿ ಕೆ. ಆರ್. ಲಾವಣ್ಯ, ಸಹಾಯಕ ನಿಬಂಧಕಿ ಸುಕನ್ಯ, ಉದ್ಯಮಿ ಸಂತೋಷ್ ನಾಯಕ್, ಕಟ್ಟಡ ಮಾಲಿಕ ಟಿ.ರಾಮದಾಸ ಪ್ರಭು ಭಾಗವಹಿಸಲಿದ್ದಾರೆ ಎಂದು ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಬಿ.ಮಂಜುನಾಥ ಕುಂದರ್ ಚಾತ್ರಬೆಟ್ಟು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರಮೇಶ್ ಕಾಂಚನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!