spot_img
Tuesday, March 17, 2026
spot_img

ಯಲ್ಲಾಪುರ ಅಪಘಾತ : ರಾಜ್ಯ ಸರ್ಕಾರದಿಂದ ರೂ.3 ಲಕ್ಷ, ಕೇಂದ್ರದಿಂದ 2 ಲಕ್ಷ ರೂ. ಪರಿಹಾರ ಘೋಷಣೆ !

ಜನಪ್ರತಿನಿಧಿ (ಯಲ್ಲಾಪುರ) : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಫುರದ ಬಳಿ ಇಂದು ಬೆಳಗ್ಗೆ ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಸ್ಥಳದಲ್ಲೇ 10 ಜನ ಮೃತಪಟ್ಟಿದ್ದರು. 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದ ವತಿಯಿಂದ ತಲಾ ರೂ.3 ಲಕ್ಷ ಪರಿಹಾರ ನೀಡಲಾಗುವುದು. ಜೊತೆಗೆ ಅಪಘಾತದಲ್ಲಿ ಗಾಯಗೊಂಡವರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅವಸರ, ಅತಿ ವೇಗದ ಚಾಲನೆ ಹಾಗೂ ಅಜಾಗರೂಕತೆ ಅಪಘಾತಕ್ಕೆ ಕಾರಣ. ಎಚ್ಚರಿಕೆಯಿಂದ ವಾಹನ ಚಲಾಯಿಸಿ, ಸುರಕ್ಷಿತರಾಗಿರಿ ಎಂದು ಮನವಿ ಮಾಡುತ್ತೇನೆ ಎಂದೂ ಅವರು ಹೇಳಿದ್ದಾರೆ.

ಇನ್ನು, ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲದೇ, ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬಸ್ಥರಿಗೆ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಕರ್ನಾಟಕ ಸರ್ಕಾರದಿಂದ ಈಗಾಗಲೇ 3 ಲಕ್ಷ ರೂ. ಪರಿಹಾರ ಮೊತ್ತ ಘೋಷಿಸಲಾಗಿದೆ.

ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಬೇಗ ಗುಣಮುಖರಾಗಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ ಎಂದು ಮೋದಿ ಅವರು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಹಾಗೇ, ಮೃತರ ಪ್ರತಿ ಕುಟುಂಬಕ್ಕೂ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!