spot_img
Tuesday, March 17, 2026
spot_img

ಲಂಚ ಆರೋಪ : ಗಂಗೊಳ್ಳಿ ಪಿಡಿಒ, ಕ್ಲರ್ಕ್‌ ರೆಡ್‌ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ

ಜನಪ್ರತಿನಿಧಿ (ಗಂಗೊಳ್ಳಿ) : ಜಾಗದ ದಾಖಲೆಗೆ ಸಂಬಂಧಿಸಿದಂತೆ ಲಂಚ ಕೇಳಿದ ಆರೋಪದ ಮೇಲೆ ಗಂಗೊಳ್ಳಿ ಗ್ರಾಮ ಪಂಚಾಯತ್ ಪಿಡಿಒ ಹಾಗೂ ಕ್ಲರ್ಕ್‌ನನ್ನು ಲೋಕಾಯುಕ್ತ ಪೊಲೀಸರು ಇಂದು(ಬುಧವಾರ) ಬಂಧಿಸಿದ್ದಾರೆ.

ಮಹಮ್ಮದ್ ಹನೀಫ್ ಅವರು ನೀಡಿರುವ ದೂರಿನ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಪಿಡಿಒ ಹಾಗೂ ಕ್ಲರ್ಕ್‌ ನನ್ನು ಬಂಧಿಸಿದ್ದಾರೆ.

ಹನೀಫ್ ಅವರ ಜಾಗದ 9/11 ಮಾಡಿ ಕೊಡಲು 22,000 ರೂ. ಲಂಚಕ್ಕೆ ಬೇಡಿಕೆ ಇಟ್ಟ ಗಂಗೊಳ್ಳಿ ಪಿಡಿಒ ಉಮಾಶಂಕರ್ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಶೇಖರ ಬಿ. ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಲಾಗಿದೆ.

ಲೋಕಾಯುಕ್ತ ಅಧೀಕ್ಷಕ ನಟರಾಜ್ ಅವರ ಮಾರ್ಗದರ್ಶನದಲ್ಲಿ ಪ್ರಭಾರ ಪೊಲೀಸ್ ಉಪಾಧೀಕ್ಷಕ ಮಂಜುನಾಥ್ ಅವರ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ಅಮನುಲ್ಲ ಹಾಗೂ ಚಂದ್ರಶೇಖರ, ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ರೋಹಿತ್, ಪುಷ್ಪಳತಾ, ಮಲ್ಲಿಕಾ, ಅಬ್ದುಲ್ ಜಲಾಲ್, ಸತೀಶ್ ಹಂದಾಡಿ, ರವೀಂದ್ರ ಗಾಣಿಗ, ಪ್ರಸನ್ನ ದೇವಾಡಿಗ, ರಮೇಶ್‌, ಸತೀಶ್‌ ಆಚಾರ್ಯ, ರಾಘವೇಂದ್ರ ಹೊಸಕೋಟೆ, ಸೂರಜ್ ಕಾಪು, ಸುಧೀರ್ ಹಾಗೂ ಮಂಗಳೂರು ಲೋಕಾಯುಕ್ತ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!