spot_img
Monday, March 16, 2026
spot_img

ಡಿಕೆಶಿ ಮುಖ್ಯಮಂತ್ರಿಯಾಗುವುದು ಯಾರಿಂದಲೂ ತಡೆಯುವುದಕ್ಕೆ ಸಾಧ್ಯವಿಲ್ಲ : ಎಂಎಲ್ಸಿ ಎ.ಎಚ್.ವಿಶ್ವನಾಥ್

ಜನಪ್ರತಿನಿಧಿ (ಬೆಂಗಳೂರು) : ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮಾಜಿ ನಾಯಕ, ಬಿಜೆಪಿ ಎಂಎಲ್ ಸಿ ಎ.ಎಚ್.ವಿಶ್ವನಾಥ್ ಭವಿಷ್ಯ ನುಡಿದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿದ ಬಳಿಕ ವರದಿಗಾರರಿಗೆ ಸ್ಪಂದಿಸಿ ಅವರು ಮಾತನಾಡಿದರು.

ಸಿದ್ದರಾಮಯ್ಯನವರೇ 5 ವರ್ಷ ಮುಖ್ಯಮಂತ್ರಿ ಎಂದು ಹೇಳಲಾಗುತ್ತಿದೆ. ಇದೆಲ್ಲಾ ಬಾಲಿಶತನ, ಮೂರ್ಖತನ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಕಾಂಗ್ರೆಸ್‌‍ 136 ಸ್ಥಾನ ಗೆಲ್ಲಲು ಡಿ.ಕೆ.ಶಿವಕುಮಾರ್‌ ಅವರ ಕೊಡುಗೆ ಬಹಳಷ್ಟಿದೆ. ಅವರದು ಸಾಕಷ್ಟು ಖರ್ಚಾಗಿದೆ. ಚುನಾವಣಾ ಸಂದರ್ಭದಲ್ಲಿ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಮಾತುಕತೆಯಾಗಿತ್ತು. ಹೀಗಾಗಿ ಮುಂದೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾಗುವುದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಸಿದ್ದರಾಮಯ್ಯನವರು ಕಾಂಗ್ರೆಸ್‌‍ ಪಕ್ಷವನ್ನು ಕಟ್ಟಿದವರಲ್ಲ. ಅವರಿಗೆ ಏನು ಆಗಬೇಕೊ ಅದು ಆಗಿ ಆಗಿದೆ. ಕಾಂಗ್ರೆಸ್‌‍ ಪಕ್ಷದ ಘನತೆ ಹಾಗೂ ಖ್ಯಾತಿಯನ್ನು ಕಟ್ಟಿಕೊಂಡು ಅವರಿಗೇನು ಆಗಬೇಕು. ಈ ಕಾರಣಕ್ಕಾಗಿಯೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಎಂದು ಸುದ್ದಿ ಹಬ್ಬಿಸುತ್ತಿದ್ದಾರೆ. ಇದರ ಹಿಂದೆ ಸಿದ್ದರಾಮಯ್ಯನವರಿರುವುದು ಖಚಿತ. ಮಂತ್ರಿಗಳು ನೆಪಮಾತ್ರ ಎಂದು ತಿಳಿಸಿದರು.

ಸಿದ್ದರಾಮಯ್ಯನವರು ಮುಡಾ ಪ್ರಕರಣದಲ್ಲಿ ಮರ್ಯಾದೆ ಕಳೆದುಕೊಂಡಿದ್ದಾರೆ. ಮೈಸೂರು ಜನರಿಗೆ ಮನೆ ಕಟ್ಟಿಕೊಳ್ಳಲು ಒಂದು ಸೈಟ್‌ ಕೊಡುವುದಿಲ್ಲ. ಬದಲಾಗಿ ಮುಖ್ಯಮಂತ್ರಿ ಹಾಗೂ ಸಚಿವರು ತಮಷ್ಟಕ್ಕೆ ತಾವೇ ನಿವೇಶನಗಳನ್ನು ಬರೆಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರ ಕಾಲದಲ್ಲಿ ಮೈಸೂರು ವಿಜಯನಗರ ಸಾಮ್ರಾಜ್ಯವಾಗಿದೆ. 1200 ರೂ.ಗೆ 50×80 ಅಡಿ ನಿವೇಶನವನ್ನು ಮಾರಾಟ ಮಾಡಿದ್ದಾರೆ. ವಿಜಯನಗರದ ಸಾಮ್ರಾಜ್ಯದ ಕಾಲದಲ್ಲಿ ಚಿನ್ನ, ಬೆಳ್ಳಿಯನ್ನು ಮಾರಾಟ ಮಾಡುತ್ತಿದ್ದರು. ಈಗ ನಿವೇಶನಗಳ ಮಾರಾಟವಾಗುತ್ತಿದೆ ಎಂದು ಲೇವಡಿ ಮಾಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!