spot_img
Wednesday, April 1, 2026
spot_img

ಲಕ್ಷ್ಮೀ ಹೆಬ್ಬಾಳ್ಕರ್‌ಗೆ ನಿಂದಿಸಿದ ಆರೋಪ : ಸಿ.ಟಿ ರವಿಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ

ಜನಪ್ರತಿನಿಧಿ (ಬೆಂಗಳೂರು) : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಎಂಎಲ್​​ಸಿ ಮಾಜಿ ಸಚಿವ ಸಿಟಿ ರವಿಗೆ ಕೊಂಚ ನಿರಾಳವಾದಂತಾಗಿದೆ. ಸಿಟಿ ರವಿ ವಿರುದ್ಧ ಫೆಬ್ರವರಿ 30 ರವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ ನೀಡಿದೆ.

ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದ ಕೊನೆಯ ದಿನ ಪ್ರತಿಭಟನೆ ಸಂದರ್ಭದಲ್ಲಿ ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುವಾಗ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿ ಟಿ ರವಿ ಅವಾಚ್ಯ ಶಬ್ದಗಳನ್ನು ಬಳಸಿದ್ದರು ಎಂಬುದು ಆರೋಪವಾಗಿದೆ. ಶಾಸಕರ ನಡುವೆ ಸದನದಲ್ಲಿ ನಡೆದ ವಿಚಾರಕ್ಕೆ ವಿನಾಯಿತಿ ಇದೆ ಎಂದು ಸಿಟಿ ರವಿ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರು. ಇದಕ್ಕೆ ಪ್ರತಿಯಾಗಿ ಕ್ರಿಮಿನಲ್ ಕೃತ್ಯಗಳಿಗೆ ವಿನಾಯಿತಿ ಇಲ್ಲವೆಂದು ಎಸ್​ಪಿಪಿ ಬಿಎ ಬೆಳ್ಳಿಯಪ್ಪ ವಾದ ಮಂಡಿಸಿದರು.

ತನಿಖೆ ವ್ಯಾಪ್ತಿಯ ಪ್ರಶ್ನೆಯನ್ನು ನಾವು ತೀರ್ಮಾನಿಸಬೇಕಿದೆ ಎಂದ ಹೈಕೋರ್ಟ್, ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ. ಸಿಟಿ ರವಿ ವಾಯ್ಸ್ ಸ್ಯಾಂಪಲ್ ತೆಗೆದುಕೊಳ್ಳಬೇಕಿದೆ ಎಂದು ಎಸ್​​​ಪಿಪಿ ವಾದ ಮಂಡಿಸಿದರು. ಆದಾಗ್ಯೂ ಮುಂದಿನ ಪ್ರಶ್ನೆ ಬಗ್ಗೆ ತೀರ್ಮಾನಿಸುವವರೆಗೆ ಕಾಯುವಂತೆ ಹೈಕೋರ್ಟ್ ಸೂಚನೆ ನೀಡಿತು.

ಸಿ ಟಿ ರವಿ ಅಶ್ಲೀಲವಾಗಿ ನಿಂದಿಸಿರುವುದು ಸರ್ಕಾರಿ ಟಿವಿಯಲ್ಲಿ ದಾಖಲಾಗಿರುವುದು ಇತ್ತೀಚೆಗೆ ದೃಢಪಟ್ಟಿದೆ. ಆದರೆ ಅದು ಸಿಟಿ ರವಿ ಅವರ ಧ್ವನಿಯೇ ಎಂಬುದನ್ನು ಖಚಿತಪಡಿಸಲು ಅವರ ವಾಯ್ಸ್ ಸ್ಯಾಂಪಲ್ ಕೋರಲಾಗಿತ್ತು. ವಾಯ್ಸ್ ಸ್ಯಾಂಪಲ್ ನೀಡಲು ಅವರು ನಿರಾಕರಿಸಿದ್ದರು. ಈ ವಿಚಾರದ ಬಗ್ಗೆಯೂ ಹೈಕೋರ್ಟ್​ನಲ್ಲಿ ವಾದ ಪ್ರತಿವಾದ ನಡೆಯುತ್ತಿದೆ. ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!