spot_img
Tuesday, March 31, 2026
spot_img

ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಯನ್ನು ನಯವಾಗಿ ನಿರಾಕರಿಸಿದ ಅಭಿನಯ ಚಕ್ರವರ್ತಿ | ಕ್ಷಮೆ ಕೇಳಿದ ಸುದೀಪ್‌ !

ಜನಪ್ರತಿನಿಧಿ (ಬೆಂಗಳೂರು) : ಪ್ರಶಸ್ತಿ, ಗೌರವಗಳಿಂದ ದೂರ ಉಳಿಯುವ ಕಿಚ್ಚ ಸುದೀಪ್ ಅವರ ಪೈಲ್ವಾನ್ ಸಿನಿಮಾದ ನಟನೆಗಾಗಿ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿ ನಿನ್ನೆ(ಬುಧವಾರ) ಘೋಷಣೆಯಾಗಿತ್ತು. ಆದರೆ, ಇದೀಗ ಬೆಸ್ಟ್ ಆ್ಯಕ್ಟರ್​ ರಾಜ್ಯ ಪ್ರಶಸ್ತಿಯನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ವಿನಮ್ರವಾಗಿ ತಿರಸ್ಕರಿಸಿದ್ದಾರೆ. ತಮ್ಮ ಅಧಿಕೃತ ಎಕ್ಸ್‌ ಖಾತೆಯ ಮೂಲಕ ಪೋಸ್ಟ್​ ಶೇರ್ ಮಾಡುವ ಮೂಲಕ ನಾನು ಪ್ರಶಸ್ತಿ ಸ್ವೀಕರಿಸುವುದನ್ನು ನಿಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

ತೀರ್ಪುಗಾರರಿಗೆ ಹೃತ್ಪೂರ್ವಕ ಧನ್ಯವಾದ

2019ನೇ ಸಾಲಿನ ರಾಜ್ಯ ಪ್ರಶಸ್ತಿ ಘೊಷಣೆ ಆಗಿತ್ತು. ಪೈಲ್ವಾನ್ ಸಿನಿಮಾ ನಟನೆಗೆ ಅತ್ಯುತ್ತಮ ನಟ ರಾಜ್ಯ ಪ್ರಶಸ್ತಿಗೆ ಸುದೀಪ್​ ಆಯ್ಕೆ ಆಗಿದ್ರು. ಆದ್ರೆ ನನಗೆ ಅವಾರ್ಡ್​ಗಳು ಬೇಡ ಎಂದು ಸುದೀಪ್ ಸುದೀರ್ಘ ಪೋಸ್ಟ್ ಶೇರ್​ ಮಾಡಿದ್ದಾರೆ. ​ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿಯನ್ನು ಪಡೆದಿರುವುದು ನಿಜಕ್ಕೂ ಒಂದು ಸೌಭಾಗ್ಯ, ಈ ಗೌರವಕ್ಕಾಗಿ ಗೌರವಾನ್ವಿತ ತೀರ್ಪುಗಾರರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಸುದೀಪ್​ ಬರೆದಿದ್ದಾರೆ.

ಪ್ರಶಸ್ತಿ ಸ್ವೀಕರಿಸುವುದನ್ನು ನಿಲ್ಲಿಸಿದ್ದೇನೆ

ನಾನು ಹಲವಾರು ವರ್ಷಗಳಿಂದ ಪ್ರಶಸ್ತಿಗಳನ್ನ ಸ್ವೀಕರಿಸುವುದನ್ನು ನಿಲ್ಲಿಸಿದ್ದೇನೆ. ಈ ನಿರ್ಧಾರದ ಹಿಂದೆ ವಿವಿಧ ವೈಯಕ್ತಿಕ ಕಾರಣಗಳು ಸಹ ಇದೆ. ನಟನೆಯಲ್ಲಿ ಸಾಧನೆ ಮಾಡಿರುವ ಅನೇಕ ಅರ್ಹ ನಟರಿದ್ದಾರೆ. ನಾನು ಮಾಡುವುದಕ್ಕಿಂತ ಹೆಚ್ಚಾಗಿ ಕೆಲಸ ಮಾಡಿದ್ದಾರೆ. ಅವರಲ್ಲಿ ಒಬ್ಬರು ಅದನ್ನು ಸ್ವೀಕರಿಸುವುದನ್ನು ನೋಡುವುದು ನನಗೆ ಸಂತೋಷವನ್ನು ನೀಡುತ್ತದೆ ಎಂದು ಸುದೀಪ್ ಬರೆದಿದ್ದಾರೆ.

ಜನರನ್ನು ರಂಜಿಸುವುದು ನನ್ನ ಕೆಲಸವಾಗಿದೆ. ಈ ಕಾಯಕಕ್ಕೆ ಪ್ರಶಸ್ತಿಗಳ ನಿರೀಕ್ಷೆ ಮಾಡಿಲ್ಲ. ತೀರ್ಪುಗಾರರ ಈ ಆಯ್ಕೆ ಇನ್ನಷ್ಟು ಉತ್ತಮವಾಗಿ ಕೆಲಸ ಮುಂದುವರಿಸಲು ನನಗೆ ಉತ್ತೇಜನ ನೀಡುತ್ತದೆ ಎಂದು ಸುದೀಪ್ ಬರೆದಿದ್ದಾರೆ.

ಬೇಸರವಾಗಿದ್ದಲ್ಲಿ ಕ್ಷಮಿಸಿ!

ಇದು ಸ್ವತಃ ನನ್ನ ಕೆಲಸದ ಪ್ರತಿಫಲವಾಗಿರುವುದರಿಂದ ನನ್ನನ್ನು ಆಯ್ಕೆ ಮಾಡಿದ್ದಕ್ಕಾಗಿ ಪ್ರತಿಯೊಬ್ಬ ತೀರ್ಪುಗಾರರ ಸದಸ್ಯರಿಗೂ ನಾನು ಕೃತಜ್ಞನಾಗಿದ್ದೇನೆ. ನನ್ನ ನಿರ್ಧಾರದಿಂದ ಬೇಸರ-ನಿರಾಸೆ ಆಗಿದ್ದಲ್ಲಿ, ನಾನು ತೀರ್ಪುಗಾರರ ಸದಸ್ಯರು ಮತ್ತು ರಾಜ್ಯ ಸರ್ಕಾರಕ್ಕೆ  ಕ್ಷಮೆಯಾಚಿಸುತ್ತೇನೆ. ನೀವು ನನ್ನ ನಿರ್ಧಾರವನ್ನು ಗೌರವಿಸುತ್ತೀರಿ ಮತ್ತು ನಾನು ಆಯ್ಕೆ ಮಾಡಿದ ಹಾದಿಯಲ್ಲಿ ನನ್ನನ್ನು ಬೆಂಬಲಿಸುತ್ತೀರಿ ಎಂದು ನಂಬುತ್ತೇನೆ ಎಂದು ಸುದೀಪ್​ ಬರೆದಿದ್ದಾರೆ..

ಮತ್ತೊಮ್ಮೆ, ನನ್ನ ಕೆಲಸವನ್ನು ಗುರುತಿಸಿ ಈ ಪ್ರಶಸ್ತಿಗೆ ಪರಿಗಣಿಸಿದ್ದಕ್ಕಾಗಿ ತೀರ್ಪುಗಾರರ ಗೌರವಾನ್ವಿತ ಸದಸ್ಯರು ಮತ್ತು ರಾಜ್ಯ ಸರ್ಕಾರಕ್ಕೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಸುದೀಪ್​ ಬರೆದಿದ್ದಾರೆ.

https://x.com/KicchaSudeep/status/1882379919986184508

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!