spot_img
Wednesday, April 1, 2026
spot_img

ಮುಡಾ ಹಗರಣ | ಲೋಕಾಯುಕ್ತ ಕ್ಲೀನ್ ಚಿಟ್ ನೀಡಿರುವ ಬಗ್ಗೆ ಏನೂ ಗೊತ್ತಿಲ್ಲಾರೀ.. ಏನೂ ಗೊತ್ತಿಲ್ಲ’ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣದಲ್ಲಿ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿರುವ ಬಗ್ಗೆ ನನಗೆ ತಿಳಿದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮುಡಾದಿಂದ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹೆಸರಿನಲ್ಲಿ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಅಕ್ರಮವಾಗಿ ತಮಗೆ ಬೇಕಾದಲ್ಲಿ ಸೈಟು ಪಡೆದುಕೊಂಡಿದ್ದಾರೆ ಎಂದು ಆರೋಪ ಕೇಳಿಬಂದಿದ್ದು, ಈ ಹಗರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಬಿಜೆಪಿ ಈ ಹಗರಣವನ್ನು ತನ್ನ ರಾಜಕೀಯ ಅಸ್ತ್ರವಾಗಿ ಬಳಸಿಕೊಂಡಿತ್ತು. ಮುಡಾ ಹಗರಣ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು.

ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಆರ್‌ಟಿಐ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ಜನವರಿ 27ರಂದು ವಿಚಾರಣೆ ನಡೆಸಲಿರುವ ಹೈಕೋರ್ಟ್, ಅಷ್ಟರೊಳಗೆ ತನಿಖಾ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಲಾಗಿತ್ತು.

ವಿಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಇದೀಗ ತನಿಖೆ ಪೂರ್ಣಗೊಳಿಸಿ ವರದಿ ಸಿದ್ಧಪಡಿಸಿದೆ. ಈ ವರದಿಯಲ್ಲಿ ಸಿಎಂ ಮತ್ತು ಪತ್ನಿ ವಿರುದ್ಧದ ಹೇಳಿಕೆಗೆ ಯಾವುದೇ ಪುರಾವೆಯಿಲ್ಲ. ಅಧಿಕಾರಿಗಳಿಂದ ತಪ್ಪಾಗಿತ್ತು ಎಂದು ವರದಿ ನೀಡಲಾಗಿದೆ ಎನ್ನಲಾಗಿದೆ. ಇದನ್ನು ಇನ್ನೂ ಕೋರ್ಟ್ ಗೆ ಸಲ್ಲಿಕೆ ಮಾಡಿಲ್ಲ.

ಈ ಬೆಳವಣಿಗೆ ಕುರಿತು ಮಾಧ್ಯಮಗಳ ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಏನೂ ಗೊತ್ತಿಲ್ಲಾರೀ.. ಏನೂ ಗೊತ್ತಿಲ್ಲ’ ಎಂದು ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!