spot_img
Thursday, April 2, 2026
spot_img

ಚನ್ನಪಟ್ಟಣ ತಾಲೂಕಿನ ವಂದರಗುಪ್ಪೆ ಗ್ರಾಮದ ರೇಲ್ವೆ ಲೆವೆಲ್ ಕ್ರಾಸಿಂಗ್ ನಲ್ಲಿ ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಅನುಮೋದನೆ

ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಮನವಿಗೆ ಸ್ಪಂದಿಸಿದ ರೇಲ್ವೆ ಸಚಿವ ಅಶ್ವಿನಿ ವೈಷ್ಣವ್‌

ಜನಪ್ರತಿನಿಧಿ (ನವದೆಹಲಿ) :  ಚನ್ನಪಟ್ಟಣ – ರಾಮನಗರ ನಡುವಿನ ವಂದರಗುಪ್ಪೆ ಗ್ರಾಮದ ಸಮೀಪದ  ಕಿ.ಮೀ. 52/100/200 ಕೈ.ಮೀ ರೇಲ್ವೆ ಲೆವೆಲ್ ಕ್ರಾಸಿಂಗ್ (ಎಲ್ ಸಿ 44) ನಲ್ಲಿ ಮೇಲು ಸೇತುವೆ ನಿರ್ಮಾಣಕ್ಕೆ ರೇಲ್ವೆ ಇಲಾಖೆ ಮಂಜೂರಾತಿ ನೀಡಿದೆ

ಈ ಸಂಬಂಧ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರ ಮನವಿಗೆ ಸ್ಪಂದಿಸಿದ ರೇಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರು, ಮೇಲು ಸೇತುವೆ ನಿರ್ಮಾಣಕ್ಕೆ ಒಪ್ಪಿಗೆ ನೀಡಿದ್ದಾರೆ.

ಮೇಲು ಸೇತುವೆ ನಿರ್ಮಾಣಕ್ಕೆ ಸಮಗ್ರ ಯೋಜನಾ ವರದಿ (ಡಿಪಿಆರ್) ಯನ್ನು ರೇಲ್ವೆ ಇಲಾಖೆ ತಯಾರು ಮಾಡುತ್ತಿದ್ದು, ಆದಷ್ಟು ಬೇಗ ಕಾಮಗಾರಿಯನ್ನು ಆರಂಭ ಮಾಡಲಾಗುವುದು ಇಂದು ರೇಲ್ವೆ ಸಚಿವರು ಕುಮಾರಸ್ವಾಮಿ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಲೆವೆಲ್ ಕ್ರಾಸಿಂಗ್ 44ರಲ್ಲಿ ವಂದರಗುಪ್ಪೆ ಗ್ರಾಮವಿದ್ದು, ಪದೇ ಪದೆ ರೇಲ್ವೆ ಗೇಟ್ ಹಾಕುವುದರಿಂದ ಬಹಳ ಸಮಸ್ಯೆ ಆಗುತ್ತಿದೆ. ನಿತ್ಯವೂ ಸಾವಿರಾರು ವಾಹನಗಳು ಈ ಕ್ರಾಸಿಂಗ್ ಮೂಲಕ ಸಂಚರಿಸುತ್ತವೆ. ಹತ್ತಾರು ಗ್ರಾಮಗಳ ಜನರಿಗೆ, ಅದರಲ್ಲಿಯೂ ವಿದ್ಯಾರ್ಥಿಗಳಿಗೆ ರೇಲ್ವೆ ಗೇಟು ಬೀಳುವುದರಿಂದ ಬಹಳಷ್ಟು ಅನನುಕೂಲ ಆಗುತ್ತಿದೆ. ಮುಖ್ಯವಾಗಿ ಈ ರಸ್ತೆ ತುಮಕೂರು ನಗರಕ್ಕೆ ಸಮರ್ಪಕ ಕಲ್ಪಿಸುತ್ತದೆ ಎಂದು ಮನವಿ ಪತ್ರದಲ್ಲಿ ಕೇಂದ್ರ ಸಚಿವರು ಉಲ್ಲೇಖ ಮಾಡಿದ್ದರು.

ಒಮ್ಮೆ ರೇಲ್ವೆ ಗೇಟ್ ಹಾಕಿದರೆ ಆಂಬುಲೆನ್ಸ್ ಗಳು ಕೂಡ ಮಾರ್ಗ ನಡುವೆಯೇ ನಿಲ್ಲುವುದು ಸಾಮಾನ್ಯವಾಗಿದೆ. ದಿನನಿತ್ಯವೂ ಬೆಂಗಳೂರು – ಮೈಸೂರು ಮಾರ್ಗದಲ್ಲಿ ಸುಮಾರು 75ಕ್ಕೂ ಹೆಚ್ಚು ರೇಲುಗಳು ಸಂಚರಿಸುತ್ತಿದ್ದು, ಪದೇ ಪದೆ ಗೇಟ್ ಹಾಕಬೇಕಾದ ಪರಿಸ್ಥಿತಿ ಇದೆ ಎಂದು ಕುಮಾರಸ್ವಾಮಿ ಅವರು ಮನವರಿಕೆ ಮಾಡಿಕೊಟ್ಟಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!