spot_img
Thursday, April 2, 2026
spot_img

ಮತದಾನ ಮತದಾರರ ಸಂವಿಧಾನ ಬದ್ಧ ಹಕ್ಕು-ಅಬ್ದುಲ್ ರಹೀಮ್ ಹುಸೇನ್ ಶೇಖ್

ಕುಂದಾಪುರ: ಮತದಾನ ನಮ್ಮ ಹಕ್ಕು, ಮತಕ್ಕೆ ಬೇರೆ ಯಾವುದೇ ಸಾಟಿಯಿಲ್ಲ. ಮತದಾನ ಮೂಲಭೂತ ಹಕ್ಕಲ್ಲ ಅದು ಮತದಾರರ ಸಂವಿಧಾನ ಬದ್ಧ ಹಕ್ಕು ಎಂಬುದಾಗಿ ಸರ್ವೋಚ್ಛ ನ್ಯಾಯಾಲಯ ತೀರ್ಪು ನೀಡಿದೆ. ಮತದಾರರಿಗೆ ಅವರ ಅಧಿಕಾರದ ಬಗ್ಗೆ ಮಾಹಿತಿ ನೀಡಬೇಕಿದೆ ಎಂದು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದುಲ್ ರಹೀಮ್ ಹುಸೇನ್ ಶೇಖ್ ಹೇಳಿದರು.

ತಾಲೂಕು ಆಡಳಿತ, ತಾಲೂಕು ಪಂಚಾಯತ್ ಕುಂದಾಪುರ, ತಾಲೂಕು ಕಾನೂನು ಸೇವೆಗಳ ಸಮಿತಿ ಕುಂದಾಪುರ, ವಕೀಲರ ಸಂಘ ಕುಂದಾಪುರ ಹಾಗೂ ಅಭಿಯೋಗ ಇಲಾಖೆ ಕುಂದಾಪುರ ಇವರ ಸಹಯೋಗದೊಂದಿಗೆ ಕುಂದಾಪುರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ-2025 ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಟಿ.ಎನ್.ಶೇಷನ್ ಚುನಾವಣಾ ಆಯೋಗದ ಆಯುಕ್ತರಾದ ಮೇಲೆ. ಅವರು ಚುನಾವಣಾ ಪ್ರಕ್ರಿಯೆಯಲ್ಲಿ ತುಂಬಾ ಬದಲಾವಣೆಯನ್ನು ತಂದು ಅನೇಕ ಕಠಿಣ ನಿರ್ಧಾರಗಳನ್ನು ತೆಗೆದುಕೊಂಡರು. ಹಣ ಮತ್ತು ಹೆಂಡದ ಮೇಲೆ ಚುನಾವಣೆ ನಡೆಯುತ್ತಿತ್ತು. ಇದಕ್ಕೆ ಕಡಿವಾಣ ಹಾಕುವಲ್ಲಿ ಟಿ.ಎನ್.ಶೇಷನ್ ಪಾತ್ರ ಮಹತ್ವದಾಗಿತ್ತು ಎಂದು ಅವರು ಹೇಳಿದರು.

ನಮ್ಮ ದೇಶದಲ್ಲಿ ೧೦೦ ಕೋಟಿ ಮತದಾರರನ್ನು ನಿಭಾಯಿಸುವ ಜವಾಬ್ದಾರಿಯನ್ನು ಚುನಾವಣಾ ಆಯೋಗ ಮೇಲಿದ್ದು, ಚುನವಾಣಾ ಆಯೋಗ ಈ ಕಾರ್ಯವನ್ನು ಈವರೆಗೆ ಯಶಸ್ವಿಯಾಗಿ ನಿರ್ವಹಿಸಿಕೊಂಡು ಬಂದಿದೆ. ಮತಪತ್ರದ ಬದಲಿಗೆ ಇವಿ‌ಎಂ ಯಂತ್ರಗಳನ್ನು ಅಳವಡಿಸಿದಾಗ ಚುನಾವಣಾ ಆಯೋಗಕ್ಕೆ ಬಹಳಷ್ಟು ಸವಾಲುಗಳು ಎದುರಾಗಿತ್ತು. ಆದರೆ ಮತದಾರರಿಗೆ ಸರಿಯಾದ ಮಾಹಿತಿಯನ್ನು ನೀಡುವ ಮೂಲಕ ಎಲ್ಲಾ ಚುನಾವಣೆಯನ್ನು ಆಯೋಗ ಯಶಸ್ವಿಯಾಗಿ ನಡೆಸಿದೆ. ಮತದಾರರ ತಮ್ಮ ಸಂವಿಧಾನಬದ್ಧ ಮತದಾನದ ಹಕ್ಕನ್ನು ಚಲಾಯಿಸಿ ಸದೃಢ ರಾಷ್ಟ್ರ ಕಟ್ಟಲು ಕೈಜೋಡಿಸಬೇಕು ಎಂದು ಅವರು ಹೇಳಿದರು.

ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಕೆ.ಮಹೇಶ್ಚಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ರಾಜು ಎನ್., ಮತ್ತು ಪ್ರಧಾನ ಸಿವಿಲ್ ಮತ್ತು ಜೆ‌ಎಂಎಫ್‌ಸಿ ನ್ಯಾಯಾಧೀಶೆ ಮಂಜುಳ ಬಿ. ಶುಭ ಹಾರೈಸಿದರು. ಕುಂದಾಪುರ ತಾಪಂ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಡಾ. ರವಿ ಕುಮಾರ್ ಹುಕ್ಕೇರಿ, ಕುಂದಾಪುರ ಪೊಲೀಸ್ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ.ಕುಲಕರ್ಣಿ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಆನಂದ ಜಿ., ಸಹಾಯಕ ಸರಕಾರಿ ಅಭಿಯೋಜಕ ಉದಯ ಕುಮಾರ್ ಬಿ.ಎ., ಕುಂದಾಪುರ ವಕೀಲರ ಸಂಘದ ಅಧ್ಯಕ್ಷ ಹಂದಟ್ಟು ಪ್ರಮೋದ ಹಂದೆ, ಪ್ರಧಾನ ಕಾರ್ಯದರ್ಶಿ ಗಿಳಿಯಾರು ಪ್ರಕಾಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

ಕುಂದಾಪುರ ತಾಲೂಕು ತಹಶೀಲ್ದಾರ್ ಮಲ್ಲಿಕಾರ್ಜುನ್ ಸ್ವಾಗತಿಸಿದರು. ಆಶಾಲತಾ ಪ್ರಾರ್ಥಿಸಿದರು. ಉಪತಹಶೀಲ್ದಾರ್ ವಿನಯ್ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!