spot_img
Thursday, April 2, 2026
spot_img

ಬಸ್ರೂರು ಸ್ವಾತಂತ್ರ್ಯ ದಿನ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕುಂದಾಪುರ: ಛತ್ರಪತಿ ಶಿವಾಜಿ ಅಭಿಮಾನಿ ಬಳಗ, ಬಸ್ರೂರು ಇವರ ನೇತೃತ್ವದಲ್ಲಿ ಪ್ರತಿವರ್ಷದಂತೆ ಈ ಬಾರಿ 2025 ಫೆಬ್ರವರಿ 13 ರಂದು ಬಸ್ರೂರು ಸ್ವಾತಂತ್ರ್ಯ ದಿನ ಮಹೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಅನ್ನಸಂತರ್ಪಣೆ ಮತ್ತು ಶೋಭಾ ಯಾತ್ರೆಯ ಹಾಗೂ ಸ್ವಾತಂತ್ರ್ಯ ದಿನ ಮಹೋತ್ಸವ ಸಭಾ ಕಾರ್ಯಕ್ರಮ ಆಯೋಜಿಸಲಾಗಿದ್ದು ಈ ಕಾರ್ಯಕ್ರಮದಲ್ಲಿ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್  ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಗುರುವಾರ ಸಂಜೆ ಕುಂದಾಪುರದ ಬ್ರಹ್ಮಶ್ರೀ ನಾರಾಯಣಗುರು ಕಲ್ಯಾಣ ಮಂಟಪದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟೆಹೊಳೆ, ಸುಬ್ರಮಣ್ಯ ಹೊಳ್ಳ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತರು, ಉಮೇಶ್ ಆಚಾರ್ಯ, ಛತ್ರಪತಿ ಶಿವಾಜಿ ಅಭಿಮಾನಿ ಬಳಗದ ಅಧ್ಯಕ್ಷ, ಕಾರ್ಯದರ್ಶಿ ರಾಜೇಶ್ ಕೆಳಮನೆ, ಕುಂದಾಪುರದ ಪುರಸಭಾ ಮಾಜಿ ಉಪಾಧ್ಯಕ್ಷ ರಾಜೇಶ್ ಕಾವೇರಿ, ಹಾಗೂ ಕುಂದಾಪುರ ಹಾಗೂ ಬೈಂದೂರು ಭಾಗದ ಛತ್ರಪತಿ ಶಿವಾಜಿ ಅಭಿಮಾನಿಗಳು, ಹಿಂದೂ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!