spot_img
Wednesday, April 1, 2026
spot_img

ಬೋರ್ಡ್ ಹೈಸ್ಕೂಲ್ ಕುಂದಾಪುರ: ‘ನನ್ನ ವೃತ್ತಿ ನನ್ನ ಆಯ್ಕೆ’ ಕಾರ್ಯಕ್ರಮ ಉದ್ಘಾಟನೆ

ಕುಂದಾಪುರ: ಕುಂದಾಪುರದ ಬೋರ್ಡ್ ಹೈಸ್ಕೂಲ್ ನಲ್ಲಿ ಕರ್ನಾಟಕ ಸರಕಾರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕರ್ನಾಟಕ ಕೌಶಭಿವೃದ್ಧಿ ನಿಗಮ, ಸಮಗ್ರ ಶಿಕ್ಷಣ ಕರ್ನಾಟಕ ಮತ್ತು ಅನಹತ ಯುನೈಟೆಡ್ ಎಫರ್ಟ್ಸ್ ಬೆಂಗಳೂರು ಇವರ ಸಹಯೋಗದಲ್ಲಿ ರಾಜ್ಯದ 150 ಶಾಲೆಗಳಲ್ಲಿ ಅನುಷ್ಠಾನಗೊಂಡಿರುವ “ನನ್ನ ವೃತ್ತಿ ನನ್ನ ಆಯ್ಕೆ” ಕಾರ್ಯಕ್ರಮವನ್ನು ಉದ್ದೇಶಿಸಿ ಕುಂದಾಪುರದ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಎಸ್ ಶೆಟ್ಟಿ ಮಾತನಾಡಿದರು.

ಈಗಿನ ಔದ್ಯೋಗಿಕ ಪ್ರಪಂಚದಲ್ಲಿ ವಿದ್ಯಾರ್ಥಿಗಳು ಪ್ರೌಢ ಶಿಕ್ಷಣದಿಂದಲೇ ವೃತ್ತಿಯ ಬಗ್ಗೆ ಮಾರ್ಗದರ್ಶನ ಪಡೆದು ನಿಖರ ಗುರಿಯೆಡೆ ತಲುಪುವಲ್ಲಿ ಈ ಕಾರ್ಯಕ್ರಮ ಸಹಕರಿಯಾಗಲಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ, ಪ್ರಭಾರ ಉಪ ಪ್ರಾಂಶುಪಾಲರಾದ ವಿನುತಾ ಗಾಂವಕರ್, ಜಿಲ್ಲಾ ನೋಡಲ್ ಪ್ರಸನ್ನ ಕುಮಾರ್, ‘ನನ್ನ ವೃತ್ತಿ ನನ್ನ ಆಯ್ಕೆ’ ಮಾರ್ಗದರ್ಶಕ ಶಿಕ್ಷಕರಾದ ಅರುಣ್ ಶೆಟ್ಟಿ ಉಳ್ತೂರು, ಸ್ಪೂರ್ತಿ ಆಚಾರ್ಯ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!