spot_img
Thursday, April 2, 2026
spot_img

ಕುಂದಾಪುರ: ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಮಲ್ಯಾಡಿ ಶಿವರಾಮ ಶೆಟ್ಟಿ, ಉಪಾಧ್ಯಕ್ಷರಾಗಿ ದಿನಪಾಲ ಶೆಟ್ಟಿ ಆಯ್ಕೆ

ಜನಪ್ರತಿನಿಧಿ ವಾರ್ತೆ( ಕುಂದಾಪುರ) ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿ., ಕುಂದಾಪುರ ಇದರ ನೂತನ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಮಲ್ಯಾಡಿ ಶಿವರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ದಿನಪಾಲ ಶೆಟ್ಟಿ ಮೊಳಹಳ್ಳಿ ಆಯ್ಕೆಗೊಂಡಿದ್ದಾರೆ.
ನೂತನ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸೋಮವಾರ ನಡೆಯಿತು.

ಅಧಿಕಾರ ಸ್ವೀಕರಿಸಿ ಮಾತನಾಡಿದ ಮಲ್ಯಾಡಿ ಶಿವರಾಮ ಶೆಟ್ಟಿ, ಪ್ರಾಥಮಿಕ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕನ್ನು ಮುನ್ನೆಡಸಲು ಸಾಕಷ್ಟು ಸವಾಲುಗಳಿವೆ. ಸಾಲ ನೀಡಿಕೆಯಲ್ಲಿ ಹಲವಾರು ದಾಖಲೆಗಳನ್ನು ನೀಡಬೇಕಾಗುತ್ತದೆ. ಆದರೂ ಕೂಡಾ ನಮ್ಮ ಸಂಘವು ಉತ್ತಮ ಸ್ಥಿತಿಯಲ್ಲಿದೆ. ಸಾಲ ನೀಡಿಕೆಯಲ್ಲಿನ ನಿಯಮಗಳನ್ನು ಸರಕಾರ ಸಡಿಲಿಕೆ ಮಾಡಿದರೆ ಇನ್ನಷ್ಟು ಅಭಿವೃದ್ದಿ ಹೊಂದಲು ಸಾಧ್ಯ. ನಮ್ಮ ಆಡಳಿತ ಮಂಡಳಿಯು ಆ ನಿಟ್ಟಿನಲ್ಲಿ ಯೋಚಿಸಿ ಹೆಜ್ಜೆ ಹಾಕಲಿದೆ. ಈ ಸಂದರ್ಭದಲ್ಲಿ ಅವಿರೋಧವಾಗಿ ಆಯ್ಕೆಯಾಗಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ದಿವಾಕರ ಪೂಜಾರಿ, ಅಣ್ಣಯ್ಯ ಗಾಣಿಗ, ಜಿ.ಮಹಮ್ಮದ್, ಗೋಪಾಲ ಬಳೆಗಾರ, ಗೀತಾ ಎಸ್ ಶೆಟ್ಟಿ, ಗೌರಿ, ಶೇಖರ ಚಾತ್ರಬೆಟ್ಟು, ಸುಖಾನಂದ ಶೆಟ್ಟಿ, ಲಲಿತಾ, ವೆಂಕಪ್ಪ ಪೂಜಾರಿ, ರಾಜೇಂದ್ರ ಶೆಟ್ಟಿ ಬಿ ಉಪಸ್ಥಿತರಿದ್ದರು.

ಚುನಾವಣಾಧಿಕಾರಿ, ಸಹಕಾರಿ ಸಂಘಗಳ ಸಹಾಯಕ ನಿಬಂಧಕರಾದ ಸುಕನ್ಯಾ ಚುನಾವಣಾ ಪ್ರಕ್ರಿಯೆ ನೆಡೆಸಿಕೊಟ್ಟರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮೃತಕಲಾ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!