spot_img
Wednesday, April 1, 2026
spot_img

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್‌ಗೆ ಇಡಿ ನೋಟೀಸ್‌ !

ಜನಪ್ರತಿನಿಧಿ (ಬೆಂಗಳೂರು) : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ನೋಟಿಸ್​​ ಜಾರಿ ಮಾಡಿದೆ.

ಇಡಿ ನೋಟಿಸ್​ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್​ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ್ ಪೀಠಕ್ಕೆ ಮನವಿ ಮಾಡಿದರು. ಸೋಮವಾರ ಕಲಾಪದ ಕೊನೆಗೆ ವಿಚಾರಣೆ ನಡೆಸುವುದಾಗಿ ನ್ಯಾ.ಎಂ.ನಾಗಪ್ರಸನ್ನ ಒಪ್ಪಿಗೆ ಸೂಚಿಸಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಮಧ್ಯಂತರ ತನಿಖಾ ವರದಿಯನ್ನು ಧಾರವಾಡ ಹೈಕೋರ್ಟ್ ಪೀಠಕ್ಕೆ ಇಂದು ಸಲ್ಲಿಸಲಿದ್ದಾರೆ.

ಜಾರಿ ನಿರ್ದೇಶನಾಲಯ ಇದೀಗ ಸಿಎಂ ಸಿದ್ದರಾಮಯ್ಯ ಹಾಗೂ ಸಿದ್ದರಾಮಯ್ಯ ಅವರ ಆಪ್ತ, ಸಚಿವ ಬೈರತಿ ಸುರೇಶ್ ಅವರಿಗೆ ನೋಟಿಸ್ ನೀಡಿದೆ. ನೋಟಿಸ್ ಬಂದ ಬೆನ್ನಲ್ಲೇ ಅದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿ ಅವರಿಗೆ ಕ್ಲೀನ್‌ಚಿಟ್‌ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಹೇಳಲಾಗಿದೆಯಂತೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!