spot_img
Wednesday, May 6, 2026
spot_img

ನಿರಂತರ ಗೋವುಗಳ ರುಂಡ ಪತ್ತೆ ಪ್ರಕರಣ: ಬೃಹತ್ ಪ್ರತಿಭಟನೆಗೆ ಸಿದ್ಧತೆ-ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು: ಗೋ ಹತ್ಯೆ, ಗೋ ಕಳ್ಳತನದ ನಡುವೆಯೂ ನಿರಂತರವಾಗಿ ಗೋವುಗಳ ರುಂಡ ಪತ್ತೆಯಾಗುತ್ತಿರುವ ಪ್ರಕರಣಗಳು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚಾಗುತ್ತಿದ್ದು, ಇದನ್ನು ಖಂಡಿಸಿ ಮುಂದಿನ ವಾರ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಶಾಸಕ ಗುರುರಾಜ ಗಂಟಿಹೊಳೆ ತಿಳಿಸಿದ್ದಾರೆ.

ಬೈಂದೂರು ಕ್ಷೇತ್ರವ್ಯಾಪ್ತಿಯಲ್ಲಿ ಈವರೆಗೆ 27 ಕಡೆಗಳಲ್ಲಿ ಗೋವಿನ ರುಂಡ ಪತ್ತೆಯಾಗಿದೆ. ಇಂತಹ ವಿಕೃತ ಮೆರೆಯುವವರಿಗೆ ಕಠಿಣ ಶಿಕ್ಷೆ ಆಗಲೇ ಬೇಕು. ಪೊಲೀಸರ ನಿರಂತರ ಪರಿಶ್ರಮದ ನಡುವೆಯೂ ಇಂತಹ ಘಟನೆಗಳು ನಡೆಯುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ. ಶಿರೂರು ಭಾಗದಲ್ಲೇ ಅತಿ ಹೆಚ್ಚು ಪ್ರಕರಣ ಕಂಡು ಬಂದಿದೆ. ಕ್ಷೇತ್ರದ ಬೇರೆ ಬೇರೆ ಕಡೆಗಳಲ್ಲೂ ಇದು ಹೆಚ್ಚಾಗುತ್ತಿದೆ. ಇದಕ್ಕೆಲ್ಲ ಶಾಶ್ವತ ಕಡಿವಾಣ ಬೀಳಲೇ ಬೇಕು.

ಗೋವುಗಳ ಕಳ್ಳತನ, ಗೋಹತ್ಯೆ ಮಾಡಿ, ಗೋವಿನ ರುಂಡಗಳನ್ನು ಉದ್ದೇಶ ಪೂರ್ವಕವಾಗಿ ಹಿಂದು ದೇವಸ್ಥಾನ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಎಸೆದು ಹೋಗುವ ಮೂಲಕ ಹಿಂದೂಗಳ ಭಾವನೆಗೆ ಧಕ್ಕೆ ತರುತ್ತಿದ್ದಾರೆ ಮತ್ತು ಹಿಂದೂಗಳ ತಾಳ್ಮೆ ಕೆಡಿಸುವ ಪ್ರಯತ್ನವೂ ನಡೆಯುತ್ತಿದೆ. ಗೋವುಗಳ ಮೇಲಿನ ಹಿಂಸೆ, ಗೋವುಗಳ ರುಂಡಪತ್ತೆ ಪ್ರಕರಣಗಳನ್ನು ವಿರೋಧಿಸಿ, ಖಂಡಿಸಿ ಮುಂದಿನ ವಾರ ಕ್ಷೇತ್ರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಶಾಸಕ ಗುರುರಾಜ್ ಗಂಟಿಹೊಳೆ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!