spot_img
Sunday, February 15, 2026
spot_img

ಗಣರಾಜ್ಯೋತ್ಸವ ಪರೇಡ್‌ : ರಾಜ್ಯದ ʼಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರಕ್ಕೆ ಓಟ್‌ ಮಾಡಿ ಬೆಂಬಲಿಸುವಂತೆ ಸಿಎಂ ಸಿದ್ದರಾಮಯ್ಯ ಮನವಿ

ಜನಪ್ರತಿನಿಧಿ (ಬೆಂಗಳೂರು) : ದೆಹಲಿಯಲ್ಲಿ ಜನವರಿ 26 ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್ ಲೈನ್ ನಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಈ ಬಾರಿ ಕರ್ನಾಟಕವು ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರದೊಂದಿಗೆ ಭಾಗವಹಿಸಿತ್ತು. ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿರುವ ನಮ್ಮ ರಾಜ್ಯದ ಸ್ತಬ್ಧಚಿತ್ರವನ್ನು ಓಟ್ ಮಾಡಿ ಬೆಂಬಲಿಸುವಂತೆ ಸಮಸ್ತ ಕನ್ನಡಿಗರಲ್ಲಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.

ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ರಾಜ್ಯದ ಜನತೆಗೆ ಮನವಿ ಮಾಡಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರವು ಅತ್ಯುತ್ತಮ ಸ್ತಬ್ಧಚಿತ್ರದ ಆಯ್ಕೆಗಾಗಿ ಸಾರ್ವಜನಿಕರು ಆನ್ ಲೈನ್, ಇಮೇಲ್ ಮತ್ತು ಎಸ್ಎಂಎಸ್ ಮೂಲಕ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಜನವರಿ 28ರ ಮಧ್ಯರಾತ್ರಿ 12ರ ವರೆಗೆ ಓಟ್ ಮಾಡಲು ಅವಕಾಶವಿದೆ. ಸಾರ್ವಜನಿಕರು ನಿಗದಿತ ಅವಧಿಯೊಳಗೆ ಓಟ್ ಮಾಡಿ ರಾಜ್ಯದ ಸ್ತಬ್ಧಚಿತ್ರವನ್ನು ಬೆಂಬಲಿಸಬೇಕು.Lakkundi Cradle of stone Craft ವಿಷಯದ ಸ್ತಬ್ಧಚಿತ್ರಕ್ಕೆ ಹೆಚ್ಚು ಹೆಚ್ಚು ಓಟ್ ಮಾಡುವ ಮೂಲಕ ಬೆಂಬಲ ಹಾಗೂ ಮೆಚ್ಚುಗೆ ಸೂಚಿಸಬೇಕೆಂದು ಮನವಿ ಮಾಡಿದ್ದಾರೆ.

https://www.mygov.in/group-poll/vote-your-favourite-tableau-and-marching-contingent-republic-day-parade-2025/ಕೊಂಡಿಯನ್ನು ಕ್ಲಿಕ್ ಮಾಡಿ, Login to participate ಮೇಲೆ ಕ್ಲಿಕ್ ಮಾಡಿ, ತಮ್ಮ ನೋಂದಾಯಿತ ಮೊಬೈಲ್ ನಂಬರ್ ಅಥವಾ ಇಮೇಲ್ ವಿವರ ನಮೂದಿಸಿ, ತಾವು ಸ್ವೀಕರಿಸುವ ಒಟಿಪಿ ನಮೂದಿಸಿ, ನಂತರ Resend. OTP/ Submitted ಇದರಲ್ಲಿ submitt ಕ್ಲಿಕ್ ಮಾಡಿ, ಎಲ್ಲಾ ಸ್ತಬ್ಧಚಿತ್ರಗಳ ಮಾಹಿತಿ ಕಾಣುತ್ತದೆ. Lakkundi : cradle of stone craft ಕ್ಲಿಕ್ ಮಾಡಿ ತಮ್ಮ ಮತವನ್ನು ದಾಖಲಿಸಬಹುದು.

ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ MYGOVPOLL 357037,12 ಟೈಫ್ ಮಾಡಿ 7738299899 ಮೊಬೈಲ್ ಸಂಖ್ಯೆಗೆ ಎಸ್ಎಂಎಸ್ ಮೂಲಕ ಓಟ್ ಮಾಡಬಹುದಾಗಿದೆ. ‌

ನೀವು ಓಟ್ ಮಾಡಿ, ನಿಮ್ಮ ಕುಟುಂಬ ಸದಸ್ಯರು, ಆತ್ಮೀಯರ ಮೂಲಕವೂ ಓಟ್‌ ಮಾಡಿಸಿ, ಕರ್ನಾಟಕದ ಸ್ತಬ್ಧಚಿತ್ರವು ಪ್ರಶಸ್ತಿ ಗೆದ್ದು ರಾಷ್ಟ್ರಮಟ್ಟದಲ್ಲಿ ನಾಡಿನ ಕೀರ್ತಿಪತಾಕೆ ಹಾರಿಸಲು ನಮ್ಮೊಂದಿಗೆ ಕೈಜೋಡಿಸಿ ಎಂದು ಮನವಿ ಮಾಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!