spot_img
Tuesday, March 31, 2026
spot_img

ಸಂವಿಧಾನ ನಮಗೆ ಎಲ್ಲವನ್ನೂ ಕೊಟ್ಟಿದೆ-ಎಂ ಮಹೇಶ್ ಹೆಗ್ಡೆ

ಕುಂದಾಪುರ: ಸುಣ್ಣಾರಿಯ ಎಕ್ಸಲೆಂಟ್ ಸಂಸ್ಥೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಎಂ.ಎಂ ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರು ಹಾಗೂ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎಂ.ಮಹೇಶ್ ಹೆಗ್ಡೆ ಅವರು 76ನೇ ಗಣರಾಜ್ಯೋತ್ಸವದ ಧ್ವಜಾರೋಹಣ ಮಾಡಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎನ್ನುವ ತತ್ವ ನಮ್ಮ ಸಂವಿಧಾನದಿಂದ ಬಂದಿದೆ ಪ್ರತಿಯೊಬ್ಬರನ್ನು ಕೂಡ ಗೌರವದಿಂದ ನೋಡುದರ ಜೊತೆಗೆ ನಾವೆಲ್ಲ ಒಂದೇ ಅನ್ನುವ ಭಾವನೆ ನಮ್ಮಲ್ಲಿ ಇರಬೇಕು ಈ ದೇಶ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವಂತೆ ಮಾಡುವುದು ನಮ್ಮ ಭಾವಿ ಜನಾಂಗವಾದ ನಿಮ್ಮ ಮೇಲೆ ಇದೆ ಎಂದರು.

ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ ಸ್ವಾಗತಿಸಿದರು. ಪ್ರೌಢಶಾಲೆಯ ಮುಖ್ಯೋಪಾಧ್ಯಾಯನಿ ಸರೋಜಿನಿ ಪಿ ಆಚಾರ್ಯ ೭೬ನೇ ಗಣರಾಜ್ಯೋತ್ಸವಕ್ಕೆ ಶುಭ ಕೋರಿದರು. ಸಂಸ್ಥೆಯ ಉಪನ್ಯಾಸಕರು, ಶಿಕ್ಷಕ ಹಾಗೂ ಶಿಕ್ಷಕೇತರ ಬಳಗದವರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಕರಾದ ನಾರಾಯಣ್ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!