spot_img
Wednesday, April 1, 2026
spot_img

ಮರವಂತೆ ಶಾಲೆಯಲ್ಲಿ ಇಂಗ್ಲಿಷ್ ಫೆಸ್ಟ್ ಸಂಪನ್ನ

ಮರವಂತೆ: ಮರವಂತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಇಂಗ್ಲಿಷ್ ಫೆಸ್ಟ್ ಸಂಪನ್ನಗೊಂಡಿತು.

ನಿವೃತ್ತ ಆಂಗ್ಲಭಾಷಾ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಅವರು ಕಾರ್ಯಕ್ರಮವನ್ನು ವಿಶಿಷ್ಟವಾಗಿ ತೆರೆದುಕೊಳ್ಳುವ ಇಂಗ್ಲಿಷ್ ಫೆಸ್ಟ್ ಎಂಬ ಪದಗಳ ಫಲಕವನ್ನು ಅನಾವರಣಗೊಳಿಸುವ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಇಂಗ್ಲಿಷ್ ಮಾತ್ರ ಬಳಸಿಕೊಂಡು ನಡೆಸುವ ವಿವಿಧ ಚಟುವಟಿಕೆ ಹಾಗೂ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಒಳಗೊಳ್ಳುವಂತೆ ಮಾಡುವುದರಿಂದ ಅವರಲ್ಲಿ ಭಾಷಾ ಕೌಶಲ ವೃದ್ಧಿಯಾಗುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಕರು ಶ್ರಮಪಟ್ಟು ರೂಪಿಸಿದ ಕಾರ್ಯಕ್ರಮ ಸಾರ್ಥಕವಾಗಲಿದೆ ಎಂದರು.

ಅಭಿವೃದ್ಧಿ ಸಮಿತಿ ಅಧ್ಯಕ್ಷ ವಿಶ್ವನಾಥ ಶ್ಯಾನುಭಾಗ್ ಅಧ್ಯಕ್ಷತೆ ವಹಿಸಿದ್ದರು. ಅತಿಥಿಯಾಗಿದ್ದ ಸ್ಥಳೀಯ ನೇತಾಜಿ ಸುಭಾಶ್ಚಂದ್ರ ಬೋಸ್ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎಂ. ಭಾಸ್ಕರ ಮಯ್ಯ ಶುಭ ಹಾರೈಸಿದರು. ಬ್ರಹ್ಮಾವರ ವಲಯ ಸಂಪನ್ಮೂಲ ವ್ಯಕ್ತಿ ಉದಯ ಕೋಟ ಶಿಕ್ಷಕರು ಇಂಗ್ಲಿಷ್ ಭಾಷೆಯಲ್ಲಿ ಸಂವಹನ ತರಗತಿಗಳನ್ನು ನಡೆಸುವ ಬಗ್ಗೆ ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳಿಂದ ವಿವಿಧ ಕಲಿಕಾ ಪೂರಕ ಚಟುವಟಿಕೆಗಳು, ಪ್ರಹಸನ ನಡೆದುವು.

ವಿದ್ಯಾರ್ಥಿನಿ ಸಂಚಿತಾ ಸ್ವಾಗತಿಸಿದರು. ಶಿಕ್ಷಕಿ ನಿರ್ಮಲಾ ಪಟಗಾರ್ ಪ್ರಸ್ತಾವಿಕವಾಗಿ ಮಾತನಾಡಿದರು. ವಿಜೇತಾ ಕಾರ್ಯಕ್ರಮದ ಪೂರ್ವದಲ್ಲಿ ನಡೆದಿದ್ದ ಸ್ಪರ್ಧೆಗಳ ವಿಜೇತರ ಹೆಸರು ಓದಿದರು. ಅನ್ವಿತ್ ವಂದಿಸಿದರು ಭುವನ್ ಮತ್ತು ಪೌರ್ಣಮಿ ನಿರೂಪಿಸಿದರು. ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಶಾರದಾ, ಮುಖ್ಯೋಪಾಧ್ಯಾಯ ಸೀತಾರಾಮ, ವಿದ್ಯಾರ್ಥಿ ನಾಯಕ ಪ್ರತೀಕ್, ಪೋಷಕರು ಇದ್ದರು. ನಿರ್ಮಲಾ ಪಟಗಾರ್, ಶಶಿಕಲಾ ಮತ್ತು ಎಲ್ಲ ಶಿಕ್ಷಕ, ಶಿಕ್ಷಕಿಯರು ಚಟುವಟಿಕೆಗಳನ್ನು ರೂಪಿಸಿದ್ದರು. ಜನಾರ್ದನ ಅವರನ್ನು ಗೌರವಿಸಲಾಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!