spot_img
Friday, April 3, 2026
spot_img

ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ನಿರ್ದೇಶಕರಾಗಿ ಲೋಹಿತಾಶ್ವ ಆರ್ ಕುಂದರ್ ಆಯ್ಕೆ

ಜನಪ್ರತಿನಿಧಿ ವಾರ್ತೆ] ಕುಂದಾಪುರ: ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಸಾಮಾನ್ಯ ಸ್ಥಾನ ಒಂದು ಸ್ಥಾನಕ್ಕೆ ಜ.26ರಂದು ನಡೆದ ಚುನಾವಣೆಯಲ್ಲಿ ಲೋಹಿತಾಶ್ವ ಆರ್ ಕುಂದರ್ ಬಾಳಿಕೆರೆ ಗೆಲುವು ಸಾಧಿಸಿ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಸಮಾಜ ಸೇವೆಯಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿರುವ ಇವರು ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದಲ್ಲಿ ಎರಡು ಅವಧಿಗೆ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಬಳಿಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಗೌರವಾಧ್ಯಕ್ಷರಾಗಿದ್ದಾರೆ. ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲಾ ಘಟಕದ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ, ಮೊಗವೀರ ಮಹಾಜನ ಸೇವಾ ಸಂಘ ಮುಂಬೈ ಬಗ್ವಾಡಿ ಹೋಬಳಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಜೆಸಿ‌ಐ ಸಂಸ್ಥೆಯ ಸದಸ್ಯರಾಗಿ, ಜನತಾ ಪ್ರೌಢಶಾಲೆ ಹೆಮ್ಮಾಡಿ ಹಳೆ ವಿದ್ಯಾರ್ಥಿ ಸಂಘದ ಸದಸ್ಯರಾಗಿ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೆಂಚನೂರು ಕಾರ್ಯದರ್ಶಿಯಾಗಿ, ಬಾಳಿಕೆರೆ ಆದಿಮುಡೂರ ಹೈಗುಳಿ ಚಿಕ್ಕು ಪರಿವಾರ ದೈವಸ್ಥಾನದ ಕಾರ್ಯದರ್ಶಿಯಾಗಿ ಪ್ರಸ್ತುತ ಉಪಾಧ್ಯಕ್ಷರಾಗಿ ಧಾರ್ಮಿಕ ಕ್ಷೇತ್ರದಲ್ಲಿಯೂ ಕೂಡಾ ಸೇವೆ ಸಲ್ಲಿಸಿದ್ದಾರೆ.

ಸಹಕಾರ ಕ್ಷೇತ್ರದ ಬಗ್ಗೆ ಆಸಕ್ತಿ ಹೊಂದಿರುವ ಅವರು ಇದೀಗ ಸಕ್ರಿಯವಾಗಿ ಸಹಕಾರ ವ್ಯವಸ್ಥೆ ಪ್ರವೇಶ ಮಾಡಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!