spot_img
Thursday, April 2, 2026
spot_img

ಬಸ್ರೂರು ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನ: ಫೆ.2 ಬ್ರಹ್ಮರಥೋತ್ಸವ

ಕುಂದಾಪುರ : ಸುಮಾರು 475 ವಷಗಳ ಭವ್ಯ ಇತಿಹಾಸವಿರುವ ಕುಂದಾಪುರ ತಾಲೂಕು ಬಸ್ರೂರಿನ ಮಂಡಿಕೇರಿ ಶ್ರೀ ಮಹಾಲಸಾ ನಾರಾಯಣೀ ದೇವಸ್ಥಾನದ 16ನೇ ವಷದ ಬ್ರಹ್ಮ ರಥೋತ್ಸವವು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಫೆ.2ರಂದು ಜರಗಲಿದೆ.

ಬ್ರಹ್ಮ ರಥೋತ್ಸವ ದಿನದಂದು ಶ್ರೀದೇವಿಗೆ ಪಂಚಾಮೃತ ಅಭಿಷೇಕ, ಕನಕಾಭಿಷೇಕ, ತುಲಾಭಾರ ಸೇವೆ, ಯಜ್ಞವಿಧಿಗಳು, ಮಹಾ ಪ್ರಾರ್ಥನೆ, ಮಹಾಪೂಜೆ, ಮಹಾ ಬಲಿಪ್ರದಾನ, ಸಾಯಂಕಾಲ ರಥಾರೋಹಣ, ಮಹಾಸಮಾರಾಧನೆ ಬಳಿಕ ರಥೋತ್ಸವ ನಡೆಯಲಿದೆ. ರಾತ್ರಿ ಆಕರ್ಷಕ ಸುಡುಮದ್ದು ಪ್ರದರ್ಶನ ನಡೆಯಲಿದೆ. ಸಂಜೆ ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪಂಡಿತ್ ಶ್ರೀ ವಾಗೀಶ್ ಭಟ್, ಬೆಂಗಳೂರು ಮತ್ತು ವೃಂದದವರಿಂದ “ಭಜನ್ ಸಂಧ್ಯಾ” ನಡೆಯಲಿದೆ.

ಜ. 30ರಿಂದ ಫೆಬ್ರವರಿ 3ರ ತನಕ ಬ್ರಹ್ಮರಥೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿದ್ದು, ಫೆ. 3ರಂದು ಅವಭ್ರತ ಉತ್ಸವ ನಡೆಯಲಿದೆ ಎಂದು ದೇವಸ್ಥಾನದ ಧರ್ಮದರ್ಶಿ ಮಂಡಳಿ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!