spot_img
Thursday, April 2, 2026
spot_img

ಮುಡಾ ಹಗರಣ : ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿರುದ್ಧ ಇಡಿ ಮತ್ತು ಲೋಕಾಯುಕ್ತಕ್ಕೆ ದೂರು

ಜನಪ್ರತಿನಿಧಿ (ಮೈಸೂರು) : ಮುಡಾ ನಿವೇಶನ ಹಂಚಿಕೆ ಅಕ್ರಮ ಕುರಿತಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿಕೃಷ್ಣ ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಹೋರಾಟ ನಡೆಸುತ್ತಿದ್ದು, ಇದೀಗ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿರುದ್ಧ ಇಡಿ ಮತ್ತು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಜಿಟಿ ದೇವೇಗೌಡ ವಿರುದ್ಧವೂ ಸಹ ಅಕ್ರಮವಾಗಿ 50:50 ಅನುಪಾತದಲ್ಲಿ ಸುಮಾರು 19 ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಜಿಟಿ ದೇವೇಗೌಡ ಅವರು ತಮ್ಮ ಸಹೋದರಿಯ ಮಗ ಮಹೇಂದ್ರ ಹೆಸರಿನಲ್ಲಿ ಬೇನಾಮಿಯಾಗಿ ಪರಿಹಾರ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ದೇವನೂರು ಗ್ರಾಮದ ಗುಂಗ್ರಾಲ್ ಛತ್ರದ ಸರ್ವೆ ನಂ.81/2 ರಲ್ಲಿದ್ದ ಮಹೇಂದ್ರಗೆ ಸೇರಿದ 2.22 ಎಕರೆ ಭೂಮಿಯನ್ನು ಉಪಯೋಗಿಸಿಕೊಂಡಿರುವುದಾಗಿ ಮುಡಾ ಹೇಳಿಕೊಂಡಿದೆ. ಆದರೆ ಯಾವಾಗ ಆ ಭೂಮಿ ವಶಪಡಿಸಿಕೊಂಡು ಅಭಿವೃದ್ಧಿಪಡಿಸಲಾಗಿದೆ ಎನ್ನುವ ಮಾಹಿತಿ ಮಾತ್ರ ಇಲ್ಲ. ಅಷ್ಟೆ ಅಲ್ಲದೆ, ದೇವನೂರು ಗ್ರಾಮದ ಭೂಮಿಗೆ ವಿಜಯನಗರ 3ನೇ ಹಂತದಲ್ಲಿ ಬದಲಿ ನಿವೇಶನ ಮಂಜೂರು ಕೂಡ ಮಾಡಲಾಗಿದೆ. ಪ್ರೋತ್ಸಾಹದಾಯಕ ಯೋಜನೆಯಲ್ಲಿ ಸ್ವಇಚ್ಛೆಯಿಂದ ಭೂಮಿ ಬಿಟ್ಟುಕೊಟ್ಟಿದ್ದಾರೆ ಎಂದು ಕ್ರಯ ಪತ್ರದಲ್ಲಿ ನಮೂದು ಆಗಿದ್ದು, ಈ ಯೋಜನೆಗೆ ನೀಡಬೇಕಿರುವುದು ಕೇವಲ 2 ಸೈಟ್ ಗಳು ಮಾತ್ರ. ಅದರಂತೆ 4060 ಮತ್ತು 4030ರ 3600 ಚದರ ಅಡಿ ಮಾತ್ರ ಪರಿಹಾರವಾಗಿ ಸಿಗಬೇಕಾಗಿತ್ತು. ಆದರೆ, ಅವರಿಗೆ ಪರಿಹಾರವಾಗಿ 19 ನಿವೇಶನಗಳನ್ನು ನೀಡಲಾಗಿದೆ ಆರೋಪಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!