spot_img
Wednesday, April 1, 2026
spot_img

ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ: ಡಿಸಿಎಂ ಡಿ.ಕೆ.ಶಿವಕುಮಾರ್

ಜನಪ್ರತಿನಿಧಿ (ತಮಿಳುನಾಡು) : “ನಮ್ಮ ದೇಶ ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶ. ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಸ್ಕೌಟ್ ಮತ್ತು ಗೈಡ್ಸ್ ನ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಹರಿಯಾಣ ಬಿಜೆಪಿ ಸರ್ಕಾರ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿರುವ ಬಗ್ಗೆ ಕೇಳಿದಾಗ, “ಪ್ರತಿಯೊಬ್ಬ ನಾಗರಿಕನಿಗೂ ತನ್ನದೇ ಆದ ವೈಯಕ್ತಿಕ ಜೀವನವಿರುತ್ತದೆ. ಇಡೀ ದೇಶದಲ್ಲಿ ಜಾರಿ ಮಾಡಲು ಸಾಧ್ಯವಿಲ್ಲದ್ದು, ಒಂದು ರಾಜ್ಯದಲ್ಲಿ ಜಾರಿ ಮಾಡಲು ಹೇಗೆ ಸಾಧ್ಯ?” ಎಂದು ಹೇಳಿದರು.

ನಾಯಕತ್ವ ಗುಣ ಬೆಳೆಯುತ್ತದೆ :

“ಸ್ಕೌಟ್ ಮತ್ತು ಗೈಡ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ನನಗೆ ತುಂಬಾ ಸಂತೋಷವಾಯಿತು. ನಾನು ಸಹ ನನ್ನ ಶಾಲಾ ದಿನಗಳಲ್ಲಿ ಇದರ ಭಾಗವಾಗಿದ್ದೆ ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಮಾನವೀಯತೆ ಮತ್ತು ಶಿಸ್ತನ್ನು ಇಲ್ಲಿಂದ ವಿದ್ಯಾರ್ಥಿಗಳು ಕಲಿಯಬಹುದು. ಜೊತೆಗೆ ನಾಯಕತ್ವ ಗುಣವನ್ನು ಇದು ಬೆಳೆಸುತ್ತದೆ. ಯುವ ಜನತೆಯ ವ್ಯಕ್ತಿತ್ವ ಇದರಿಂದ ಗಟ್ಟಿಯಾಗುತ್ತದೆ.

ತಮಿಳುನಾಡು ಸರ್ಕಾರ ಅಚ್ಚುಕಟ್ಟಾಗಿ ಈ ಕಾರ್ಯಕ್ರಮವನ್ನು ಆ ಯೋಜನೆ ಮಾಡಿದೆ. ಇಷ್ಟು ದೊಡ್ಡ ಕಾರ್ಯಕ್ರಮವನ್ನು ಆಯೋಜಿಸುವುದು ಸುಲಭದ ಕೆಲಸವಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!