spot_img
Wednesday, April 1, 2026
spot_img

ಮಹಾಕುಂಭ ಮೇಳ ಕಾಲ್ತುಳಿತ ಪ್ರಕರಣ : ಪರಿಸ್ಥಿತಿ ನಿಯಂತ್ರಣದಲ್ಲಿದೆ, ಅಮೃತ ಸ್ನಾನ ಪುನರಾರಂಭ : ಸಿಎಂ ಯೋಗಿ ಆದಿತ್ಯನಾಥ್‌

ಜನಪ್ರತಿನಿಧಿ (ಉತ್ತರ ಪ್ರದೇಶ): ಮಹಾಕುಂಭ ಮೇಳದಲ್ಲಿ ಮೌನಿ ಅಮಾವಾಸ್ಯೆ ಹಿನ್ನೆಲೆ ಕೋಟ್ಯಾಂತರ ಭಕ್ತರು ಸೇರಿದ್ದು, ಅಮೃತ ಸ್ನಾನ ಮಾಡಲು ಸರದಿ ಸಾಲಿನಲ್ಲಿ ತೆರಳಿದ್ದಾರೆ. ಆದರೆ, ಭಕ್ತರು ಸಂಖ್ಯೆ ಹೆಚ್ಚಾದ ಕಾರಣ ಕಾಲ್ತುಳಿತವಾಗಿದ್ದು, ಘಟನೆಯಲ್ಲಿ ಹಲವು ಭಕ್ತರು ಗಾಯಗೊಂಡು 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಮಾಹಿತಿ ಪಡೆದುಕೊಂಡು ಕೆಲ ಸೂಚನೆಗಳನ್ನು ನೀಡಿದ್ದಾರೆ.

ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಸ್ಥಳದಲ್ಲಿ ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಇಂದು ಪ್ರಯಾಗ್‌ರಾಜ್‌ನಲ್ಲಿ ಸುಮಾರು 8 ರಿಂದ 10 ಕೋಟಿ ಭಕ್ತರು ಸೇರಿದ್ದು, ಸಂಗಮದೆಡೆಗೆ ಭಕ್ತರ ಸಂಚಾರ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ಅಖಾರ ಮಾರ್ಗದಲ್ಲಿ ಬ್ಯಾರಿಕೇಡಿಂಗ್ ದಾಟಲು ಕೆಲವರು ಯತ್ನಿಸಿದ್ದು, ಈ ವೇಳೆ ಕೆಲ ಭಕ್ತರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದರು.

ಕಳೆದ ರಾತ್ರಿಯಿಂದ ಮೌನಿ ಅಮವಾಸ್ಯೆ ಮಹೂರ್ತ ಆರಂಭವಾದಾಗಿದ್ದು, ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರು ಪರಿಸ್ಥಿತಿಯ ವರದಿಗಳನ್ನು ನಿರಂತರವಾಗಿ ಅವಲೋಕನ ನಡೆಸುತ್ತಿದ್ದಾರೆ.

ಪ್ರಧಾನಿ ಮೋದಿಯವರು ಇದೂವರೆಗೆ ನಾಲ್ಕು ಬಾರಿ ಮಾತಕತೆ ನಡೆಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರು ಪರಿಸ್ಥಿತಿಯ ವರದಿಗಳನ್ನು ನಿರಂತರವಾಗಿ ಪಡೆದುಕೊಳ್ಳುತ್ತಿದ್ದಾರೆಂದು ತಿಳಿಸಿದರು.

ನಾಗ್ ವಾಸುಕಿ ಮಾರ್ಗ ಮತ್ತು ಸಂಗಮ್ ಮಾರ್ಗದಲ್ಲಿ ಹೆಚ್ಚಿನ ಜನಸಂದಣಿ ಇದೆ. ಜನರು ಯಾವುದೇ ವದಂತಿಗಳಿಗೆ ಗಮನ ಕೊಡಬಾರದು. ಕುಂಭಮೇಳ ನಡೆಯುತ್ತಿರುವ ಪ್ರದೇಶದಲ್ಲಿ ಘಾಟ್‌ಗಳನ್ನು ನಿರ್ಮಿಸಲಾಗಿದೆ. ಭಕ್ತರು ಸಂಗಮದ ಬಳಿಗೇ ಸಮೀಪದ ಘಾಟ್‌ಗಳಲ್ಲಿ ಪವಿತ್ರ ಸ್ನಾನ ಮಾಡಬಹುದು. ಅಲ್ಲಿಯೂ ಸಂಗಮದ ನೀರು ಬರುತ್ತಿದೆ. ಭಕ್ತರ ಅನುಕೂಲಕ್ಕಾಗಿ ಭಾರತೀಯ ರೈಲ್ವೇ ವಿಶೇಷ ರೈಲುಗಳನ್ನು ವ್ಯವಸ್ಥೆ ಮಾಡಿದೆ. ಭಕ್ತರನ್ನು ಅವರವರ ಸ್ಥಳಗಳಿಗೆ ಹಿಂತಿರುಗಿಸಲು ಪ್ರಯಾಗರಾಜ್ ಪ್ರದೇಶದ ವಿವಿಧ ನಿಲ್ದಾಣಗಳಿಂದ ವಿಶೇಷ ರೈಲುಗಳ ವ್ಯವಸ್ಥೆಗಳಿವೆ ಎಂದು ಹೇಳಿದ್ದಾರೆ.

ಏತನ್ಮಧ್ಯೆ, ಉತ್ತರ ಪ್ರದೇಶ ಸರ್ಕಾರದ ಪ್ರಕಾರ ಬುಧವಾರ ಬೆಳಿಗ್ಗೆ 10 ಗಂಟೆಯವರೆಗೆ 3.61 ಕೋಟಿ ಭಕ್ತರು ಸಂಗಮದಲ್ಲಿ ಸ್ನಾನ ಮಾಡಿದ್ದಾರೆಂದು ತಿಳಿದುಬಂದಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!