spot_img
Thursday, March 19, 2026
spot_img

ಮೀನುಗಾರಿಕೆಯ ವೇಳೆ ಮೀನುಗಾರ ನೀರುಪಾಲು ಪ್ರಕರಣ : ಸಂತ್ರಸ್ತ ಕುಟುಂಬಕ್ಕೆ ರೂ.10 ಲಕ್ಷ ಚೆಕ್‌ ಹಸ್ತಾಂತರ

ಜನಪ್ರತಿನಿಧಿ (ಗಂಗೊಳ್ಳಿ) : ಕುಂದಾಪುರ ತಾಲೂಕಿನ ಗಂಗೊಳ್ಳಿ ಬಂದರಿನಿಂದ ಇತ್ತೀಚೆಗೆ (ಜನವರಿ 02) ಮೀನುಗಾರಿಕೆಗೆ ತೆರಳಿದ್ದ ಗಂಗೊಳ್ಳಿ ನಿವಾಸಿ ನಾರಾಯಣ ಮೊಗವೀರ (58 ವ) ಎಂಬುವವರು ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಕಾಣೆಯಾಗಿದ್ದರು. ಮೀನುಗಾರಿಕಾ ಸಚಿವ ಮಾಂಕಾಳ್‌ ವೈದ್ಯ ಅವರು ಮೀನುಗಾರ ನಾರಾಯಣ ಅವರ ಮನೆಗೆ ಭೇಟಿ ನೀಡಿ ಕುಟುಂಬದವರನ್ನು ಸಾಂತ್ವಾನಿಸಿ ಷರತ್ತಿನ ಮೇರೆಗೆ (Indemnity Bond) ಮೀನುಗಾರಿಕೆ ಸಂಕಷ್ಟ ಪರಿಹಾರ ನಿಧಿಯಿಂದ ರೂ.10 ಲಕ್ಷ ಮೊತ್ತದ ಚೆಕ್‌’ನ್ನು ಹಸ್ತಾಂತರಿಸಿದ್ದಾರೆ.

ಚೆಕ್‌’ನ್ನು ಹಸ್ತಾಂತರಿಸಿದ ಬಳಿಕ ಮಾತನಾಡಿದ ಸಚಿವರು, ಈ ಹಿಂದೆ ಯಾವ ಸರಕಾರವು ಕೂಡಾ ನಾಪತ್ತೆಯಾದ ಮೀನುಗಾರರಿಗೆ ಪರಿಹಾರ ನೀಡಿ ಸಂಕಷ್ಟಕ್ಕೆ ಸಿಲುಕಿರುವ ಮೀನುಗಾರರ ಕುಟುಂಬದ ಕಣ್ಣೀರು ಒರೆಸುವ ಕೆಲಸ ಮಾಡಿರಲಿಲ್ಲ. ಆದರೆ ನಮ್ಮ ನಾಯಕರಾದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ನೇತೃತ್ವದ ಸರ್ಕಾರ ಮೀನುಗಾರ ಸಂಕಷ್ಟ ಪರಿಹಾರ ನಿಧಿ ಹಣವನ್ನು ಒಂದೇ ವರ್ಷದಲ್ಲಿ ₹6 ಲಕ್ಷದಿಂದ ₹10 ಲಕ್ಷಕ್ಕೆ ಹೆಚ್ಚಿಸಿದ್ದಲ್ಲದೆ ನಾಪತ್ತೆಯಾದ ಮೀನುಗಾರರ ಕುಟುಂಬಗಳಿಗೂ ಕೂಡಾ ಪರಿಹಾರ ನೀಡುವಲ್ಲಿ ಯಶಸ್ವಿಯಾಗಿದೆ ಎಂದವರು ಹೇಳಿದ್ದಾರೆ.

ಈ ಸಂಧರ್ಭದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಗೋಪಾಲ ಪೂಜಾರಿ ಸೇರಿ ಪ್ರಮುಖರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!