spot_img
Monday, March 16, 2026
spot_img

‘ಒಂದು ರಾಷ್ಟ್ರ-ಒಂದು ಚುನಾವಣೆ’ ಪರಿಕಲ್ಪನೆಯನ್ನು ಜಾರಿಗೆ ಬಂದರೆ ದೇಶದ ದಿಕ್ಕನ್ನೇ ಬದಲಾಯಿಸುತ್ತದೆ’ : ಕೋವಿಂದ್‌

ಜನಪ್ರತಿನಿಧಿ (ಸೇಡಂ) : ‘ಒಂದು ರಾಷ್ಟ್ರ-ಒಂದು ಚುನಾವಣೆ’ ಪರಿಕಲ್ಪನೆಯನ್ನು ಜಾರಿಗೆ ತಂದರೆ ಅದು ದೇಶದ ದಿಕ್ಕನ್ನೇ ಬದಲಾಯಿಸುತ್ತದೆ’ ಎಂದು ಭಾರತದ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.

ಇಂದು (ಬುಧವಾರ (ಜ.29) ಸೇಡಂ ಬಳಿ ನಡೆದ ಭಾರತೀಯ ಸಂಸ್ಕೃತಿ ಉತ್ಸವನ್ನು ಉದ್ದೇಶಿಸಿ ಮಾತನಾಡಿದ ಕೋವಿಂದ್, ಒಂದು ದೇಶ, ಒಂದು ಚುನಾವಣೆಯಿಂದ ಸಮಯ, ಶಕ್ತಿ ಮತ್ತು ಹಣವನ್ನು ಉಳಿಸಲು ಸಾಧ್ಯವಾಗುವುದರಿಂದ ವಿದ್ಯಾರ್ಥಿಗಳು, ಶಿಕ್ಷಕರಿಗೆ ವರದಾನವಾಗಲಿದೆ ಎಂದು ಹೇಳಿದ್ದಾರೆ.

ದೇಶದ ಮಾಜಿ ರಾಷ್ಟ್ರಪತಿಗಳು ತಮ್ಮ ಅಧ್ಯಕ್ಷತೆಯ ಸಮಿತಿ ಸಲ್ಲಿಸಿದ ವರದಿಯಲ್ಲಿ, ಸಂಸತ್ತು, ಶಾಸಕಾಂಗ ಸಭೆಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಗಳನ್ನು 100 ದಿನಗಳಲ್ಲಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಒಂದು ರಾಷ್ಟ್ರ-ಒಂದು ಚುನಾವಣೆ ಪರಿಕಲ್ಪನೆ ಜಾರಿಗೆ ಬಂದರೆ, ಪದೇ ಪದೇ ಚುನಾವಣೆಗಳಿಂದಾಗಿ ವಿದ್ಯಾರ್ಥಿಗಳು, ಶಿಕ್ಷಕರಿಗೆ ಆಗುವ ಸಮಸ್ಯೆ ಕಡಿಮೆಯಾಗುತ್ತದೆ ಮತ್ತು ಅದು ಸಮಯ, ಶಕ್ತಿ ಮತ್ತು ಹಣವನ್ನು ಉಳಿಸುತ್ತದೆ ಎಂದು ಹೇಳಿದರು.

ತಮ್ಮ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿ 18526 ಪುಟಗಳ ವರದಿಯನ್ನು ಸಲ್ಲಿಸಿದೆ ಎಂದು ಹೇಳಿದರು. ವರದಿ ಸಲ್ಲಿಸುವ ಮೊದಲು, ಸಮಿತಿಯು ತಜ್ಞರು, ಮಾಜಿ ಮುಖ್ಯ ನ್ಯಾಯಮೂರ್ತಿಗಳು ಮತ್ತು ಬಹುತೇಕ ಎಲ್ಲಾ ಪಾಲುದಾರರೊಂದಿಗೆ ಸಮಾಲೋಚಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!