spot_img
Sunday, February 15, 2026
spot_img

ಸರಕಾರದ ಯೋಜನೆಗಳ ವೈಫಲ್ಯಕ್ಕೆ ಮೈಕ್ರೋ ಫೈನಾನ್ಸ್ ಪ್ರಕರಣಗಳೇ ಸಾಕ್ಷಿ : ಹೆಚ್.ಡಿ.ಕುಮಾರಸ್ವಾಮಿ

ಜನಪ್ರತಿನಿಧಿ (ಮೈಸೂರು): ಮೈಕ್ರೋ ಫೈನಾನ್ಸ್ ಪ್ರಕರಣಗಳು ಹಾಗು ಸಂಭವಿಸುತ್ತಿರುವ ಸಾವುಗಳು ಸರ್ಕಾರಿ ಕಾರ್ಯಕ್ರಮಗಳ ವೈಫಲ್ಯಕ್ಕೆ ಸಾಕ್ಷಿಯಾಗಿವೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಕೃಷಿ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಪ್ರಕರಣಗಳು ಸೃಷ್ಟಿಸುತ್ತಿರುವ ತಲ್ಲಣಗಳು ಒಂದೆರಡಲ್ಲ. ಅನೇಕ ಸಾವು ನೋವುಗಳು ಆಗುತ್ತಿವೆ. ಸರ್ಕಾರಗಳಿಂದ ಅನುಷ್ಟಾನ ಆಗುತ್ತಿರುವ ಕಾರ್ಯಕ್ರಮಗಳ ವೈಫಲ್ಯಕ್ಕೆ ಇವೆಲ್ಲಾ ಸಾಕ್ಷಿಯಾಗಿವೆ. ಕಾರ್ಯಕ್ರಮಗಳು ಕಾರ್ಯಕ್ರಮಗಳು ಜನರಿಗೆ ತಲುಪುತ್ತಿಲ್ಲ ಎಂದರು.

ಸರಕಾರಗಳ ಕಾರ್ಯಕ್ರಮಗಳು ಜನರಿಗೆ ಯಾಕೆ ತಲುಪುತ್ತಿಲ್ಲ ಎನ್ನುವ ಬಗ್ಗೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು. ಅಭಿವೃದ್ಧಿಶೀಲ ರಾಜ್ಯ ಕರ್ನಾಟಕದಲ್ಲಿ ಘಟಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಬಂಧಿಸಿದ ಪ್ರಕರಣಗಳು ಯಾರಿಗೂ ಶೋಭೆ ತರುವಂತವು ಅಲ್ಲ. ಇದಕ್ಕೆ ಪರಿಹಾರ ಏನು? ಎಂಬ ಬಗ್ಗೆ ಆಲೋಚನೆ ಮಾಡಬೇಕಿದೆ ಎಂದು ಕೇಂದ್ರ ಸಚಿವರು ಹೇಳಿದರು.

ದೇಶದಲ್ಲಿ ಹಣವಿದೆ. ಅದನ್ನು ಹೇಗೆ ಬಳಕೆ ಮಾಡುತ್ತಿದ್ದೇವೆ ಎನ್ನುವುದು ಮುಖ್ಯ. ನಮ್ಮ ಕಾರ್ಯಕ್ರಮಗಳು ಎಲ್ಲಿ ವಿಫಲವಾಗುತ್ತಿವೆ. ಜನಪ್ರತಿನಿಧಿಗಳು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂಬ ಬಗ್ಗೆ ಓರೆಗೆ ಹಚ್ಚಬೇಕಿದೆ. ಆನ್ಲೈನ್ ಲಾಟರಿ, ಗೇಮ್ ಗಳು ಯುವಕರನ್ನು ದಾರಿ ತಪ್ಪಿಸುತ್ತಿವೆ. ಕುಟುಂಬಗಳು ನಾಶವಾಗುತ್ತಿವೆ. ಇಂಥ ಪಿಡುಗುಗಳಿಗೆ ಕಡಿವಾಣ ಹಾಕದೇ ಇದ್ದರೆ ಇದೇ ಅತಿದೊಡ್ಡ ಸಮಸ್ಯೆಯಾಗಿ ಮುಂದೆ ಸಮಾಜವನ್ನು ಕಾಡಲಿದೆ ಎಂದು ಅವರು ಹೇಳಿದರು.

ಕೃಷಿ ವೃತ್ತಿಯನ್ನು ಮೂರನೇ ದರ್ಜೆ ವೃತ್ತಿ ಎನ್ನುವ ಮನಸ್ಸು ಕೆಲವರಲ್ಲಿದೆ. ಅಂತಹ ಮನೋಭಾವ ಹೋಗಬೇಕು. ದೇಶಕ್ಕೆ ಅನ್ನ ನೀಡುವ ರೈತನ ಬಗ್ಗೆ ತಾತ್ಸಾರ ಇದೆ. ನಿರ್ಲಕ್ಷ್ಯ ಮಾಡುತ್ತಿದ್ದೇವೆ. ನನ್ನ ಪ್ರಕಾರ ರೈತನ ಪ್ರಗತಿಯೇ ದೇಶದ ಪ್ರಗತಿ. ಯಾವುದೇ ಕ್ಷೇತ್ರದಲ್ಲಿ ಎಷ್ಟೋ ಪ್ರಗತಿ ಹೊಂದಿದ್ದೇವೆ ಎನ್ನುವುದಕ್ಕಿಂತ ರೈತನ ಬದುಕು ಎಷ್ಟರ ಮಟ್ಟಿಗೆ ಅಭಿವೃದ್ಧಿಯಾಗಿದೆ ಎನ್ನುವುದು ಮುಖ್ಯ ಎಂದು ಸಚಿವರು ಪ್ರತಿಪಾದಿಸಿದರು.

ರೈತನ ಬದುಕು ಸರಿ ಮಾಡದೆ ಇದ್ದರೆ ನಾವು ಯಾವುದೇ ಕ್ಷೇತ್ರದಲ್ಲಿ ಎಷ್ಟೇ ಬೆಳೆದು ಎಷ್ಟೇ ಪೈಪೋಟಿ ಕೊಟ್ಟರೂ ಉಪಯೋಗವಿಲ್ಲ ಎನ್ನುವುದು ನನ್ನ ಅಭಿಪ್ರಾಯ ಎಂದು ಅವರು ಹೇಳಿದರು.

ಆಧುನಿಕ ಕೃಷಿಯಲ್ಲಿ ತಂತ್ರಜ್ಞಾನ ಮಹತ್ವದ ಪಾತ್ರ ವಹಿಸುತ್ತಿದೆ. ಇಲ್ಲಿ ನಡೆಯುತ್ತಿರುವ ಕೃಷಿ ವಿಚಾರ ಸಂಕಿರಣ ಅರ್ಥಪೂರ್ಣ. ಸುತ್ತೂರು ಜಾತ್ರಾ ಮಹೋತ್ಸವ ಕಂಡು ನನಗೆ ಬಹಳ ಸಂತೋಷವಾಗಿದೆ. ಗ್ರಾಮೀಣ ಬದುಕು ಎಷ್ಟು ಅರ್ಥ ಗರ್ಭಿತ ಎನ್ನುವುದನ್ನು ಈ ಜಾತ್ರಾ ಮಹೋತ್ಸವ ನೋಡಿದರೆ ತಿಳಿಯುತ್ತದೆ. ಇಂಥ ದೃಶ್ಯಗಳನ್ನು ಇನ್ನೂ ನೋಡುತ್ತಿದ್ದೇವೆ, ಅದೇ ನಮ್ಮ ಭಾಗ್ಯ ಎಂದು ನಾನು ಭಾವಿಸಿದ್ದೇನೆ ಎಂದು ಅವರು ಅಭಿಪ್ರಾಯಪಟ್ಟರು.

ಅಭಿವೃದ್ಧಿ ನಾಗಾಲೋಟದಲ್ಲಿ ಬೆಳೆಯುತ್ತಿದೆ. ಮೂರನೇ ಜಾಗತಿಕ ಆರ್ಥಿಕ ಶಕ್ತಿಯಾಗುವ ಹೊಸ್ತಿಲಲ್ಲಿ ಇದೆ ಭಾರತ. ಆದರೆ ಮನುಷ್ಯ ಸಂಬಂಧಗಳು, ಬಾಂಧವ್ಯ ಸಂಬಂಧಗಳು ನಶಿಸಿ ಹೋಗುತ್ತಿವೆ. ಪ್ರತಿ ದಿನ ಬೆಳಗ್ಗೆ ಬರುತ್ತಿವ ಸುದ್ದಿಗಳನ್ನು ನೋಡಿದರೆ ದುಃಖವಾಗುತ್ತದೆ ಎಂದು ಕುಮಾರಸ್ವಾಮಿ ಅವರು ಕಳವಳ ವ್ಯಕ್ತಪಡಿಸಿದರು.

ಮಳವಳ್ಳಿಯಲ್ಲಿ ೧೦೬೬ನೇ ಶ್ರೀ ಶಿವರಾತ್ರೀಶ್ವರ ಜಯಂತಿ

ಮಂಡ್ಯದಲ್ಲಿ ೧೦೬೬ನೇ ಶ್ರೀ ಶಿವರಾತ್ರೀಶ್ವರ ಜಯಂತಿಯನ್ನು ಮಳವಳ್ಳಿಯಲ್ಲಿ ಆಚರಿಸಬೇಕು ಎನ್ನುವುದು ನಮ್ಮ ಅಭಿಲಾಷೆ. ಅದಕ್ಕೆ ಪರಮಪೂಜ್ಯರು ಅನುಮತಿ ಕೊಡಬೇಕು ಎಂದು ದಿವ್ಯ ಸಾನ್ನಿಧ್ಯ ವಹಿಸಿದ್ದ ಶ್ರೀ ಶ್ರೀ ಶ್ರೀ ಶಿವರಾತ್ರೀಶ್ವರ ದೇಶಿಕೇಂದ್ರ ಮಹಾ ಸ್ವಾಮೀಜಿ ಅವರ ಅನುಮತಿಯನ್ನು ಕೇಂದ್ರ ಸಚಿವರು ಕೇಳಿದರು. ತಕ್ಷಣವೇ ತಮ್ಮ ಒಪ್ಪಿಗೆ ಸೂಚಿಸಿದ ಶ್ರೀಗಳು, ಶ್ರೀ ಶಿವರಾತ್ರೀಶ್ವರ ಜಯಂತಿ ಅರ್ಥಪೂರ್ಣವಾಗಿ ನಡೆಯಲಿ ಎಂದು ಹರಸಿದರು.

ಇದಕ್ಕೆ ಧನ್ಯತೆಯ ಭಾವ ವ್ಯಕ್ತಪಡಿಸಿದ ಸಚಿವರು, ನಮ್ಮ ಕುಟುಂಬ ಸುತ್ತೂರು ಶ್ರೀಮಠಕ್ಕೆ ಶ್ರದ್ಧೆಯಿಂದ ನಡೆದುಕೊಳ್ಳುತ್ತಿದೆ. ನಮ್ಮ ತಂದೆಯವರಿಗೂ ಶ್ರೀಮಠಕ್ಕೂ ಅವಿನಾಭಾವ ಸಂಬಂಧ ಇದೆ. ಅದು ನಮ್ಮ ಜೀವನ ಪರ್ಯಂತ ಮುಂದುವರಿಯುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ರೆಡ್ಡಿ ಗುರುಪೀಠದ ಶ್ರೀ ವೇಮನಾನಂದ ಸ್ವಾಮೀಜಿ ಅವರು, ಚಿತ್ರದುರ್ಗ ಮುರುಘಾ ಮಠದ ಸದಸ್ಯರಾದ ಶ್ರೀ ಬಸವಕುಮಾರ ಸ್ವಾಮಿ ಸಾನ್ನಿಧ್ಯ ವಹಿಸಿದ್ದರು.

ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್, ಮಾಜಿ ಸಚಿವರಾದ ಸಾ.ರಾ.ಮಹೇಶ್, ಪುಟ್ಟರಾಜು, ಶಾಸಕ ಹರೀಶ್ ಗೌಡ, ಧೀರಜ್ ಮುನಿರಾಜು, ಮಂಜೇಗೌಡ, ಮಾಜಿ ಶಾಸಕರಾದ ಡಾ.ಅನ್ನದಾನಿ, ಅಶ್ವಿನ್ ಕುಮಾರ್, ಮಾಜಿ ಮೇಯರ್ ರವಿಕುಮಾರ್ ಇನ್ನಿತರರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!