spot_img
Saturday, February 14, 2026
spot_img

ಡಾ. ಕೆ. ಸುಧಾಕರ್‌ ಹೇಳಿಕೆಗೆ ತಿರುಗೇಟು ನೀಡಿದ ವಿಜಯೇಂದ್ರ ಯಡಿಯೂರಪ್ಪ

ಜನಪ್ರತಿನಿಧಿ (ಬೆಂಗಳೂರು) : ಪಕ್ಷದ ಹಿತದೃಷ್ಟಿಯಿಂದ ಏನೇ ಟಾರ್ಗೇಟ್‌ ಮಾಡಿದರೂ ನಾನದನ್ನು ಸಹಿಸಿಕೊಳ್ಳುತ್ತೇನೆ. ಪಕ್ಷಕ್ಕಾಗಿ ನನ್ನ ಮೇಲೆ ಯಾರೇ ಏನೆ ಟೀಕೆ ಮಾಡಿದರೂ ನಾನದನ್ನು ಸಹಿಸಿಕೊಳ್ಳುತ್ತೇನೆ. ದೇವರು ನನಗೆ ತಾಳ್ಮೆ ಇದೆ. ಯಡಿಯೂರಪ್ಪ ಅವರ ಮಗನಾಗಿ ಅವರ ರಾಜಕೀಯದ ಏಳು ಬೀಳುಗಳನ್ನು ಬಹಳ ಹತ್ತಿರದಿಂದ ಕಂಡಿದ್ದೇನೆ. ಎಲ್ಲರನ್ನೂ ವಿಶ್ವಾಸಕ್ಕೆ  ತೆಗದುಕೊಂಡು ಹೋಗಬೇಕಿದೆ. ಅದನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ ಎಂದು ಬಿಜೆಪಿ ರಾಜ್ಯಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಹೇಳಿದ್ದಾರೆ.

ಇಲ್ಲಿ ಮಾಧ್ಯಮಗಳ ವರದಿಗಾರರಿಗೆ ಸ್ಪಂದಿಸಿದ ವಿಜಯೇಂದ್ರ ಯಡಿಯೂರಪ್ಪ , ಬಿಜೆಪಿ ರಾಜ್ಯಧ್ಯಕ್ಷ ಸ್ಥಾನ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಯಡಿಯೂರಪ್ಪ ಅವರ ಮಗ ಎನ್ನುವುದಕ್ಕೆ ನನಗೆ ಹೆಮ್ಮೆ ಇದೆ. ಬೆಳೆಯುತ್ತಿರುವ ಒಬ್ಬ ವ್ಯಕ್ತಿಗೆ ಸವಾಲುಗಳು ಬರುವುದು ಸಹಜ. ಎಲ್ಲಾ ಸವಾಲುಗಳನ್ನು ಸಮಾಧಾನದಿಂದ ಸ್ವೀಕಾರ ಮಾಡುತ್ತಿದ್ದೇನೆ ಎಂದವರು ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ ಸುಧಾಕರ್‌ ನಿನ್ನೆ(ಬುಧವಾರ), ವಿಜಯೇಂದ್ರ ಅವರಿಗೆ ಯಾರನ್ನೂ ವಿಶ್ವಾಸಕ್ಕೆ ಪಡೆಯುವ ಗುಣವಿಲ್ಲ, ಸಂದೇಶಕ್ಕೆ ಪ್ರತಿಕ್ರಿಯಿಸುವುದಿಲ್ಲ, ವಿಜಯೇಂದ್ರ ಅವರಿಗೆ ‘ಎಸ್‌ ಬಾಸ್’ ಎನ್ನುವವರಿಗೆ ಪಕ್ಷದಲ್ಲಿ ಹುದ್ದೆಗಳನ್ನು ನೀಡಲಾಗುತ್ತಿದೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿರುವ ವಿಜಯೇಂದ್ರ, ಸುಧಾಕರ್‌ ಅವರು ತಿದ್ದಿಕೊಳ್ಳಬೇಕು ಎಂಬ ಅಭಿಪ್ರಾಯ ನೀಡಿದ್ದಾರೆ. ಚುನಾವಣೆ ಪ್ರಕ್ರಿಯೆ ನಡೆದ ಬಳಿಕ ಸುಧಾಕರ್‌ ಅವರನ್ನು ಭೇಟಿ ಮಾಡಿ ಅವರ ಸಲಹೆಗಳನ್ನು ಪಡೆದುಕೊಳ್ಳುತ್ತೇನೆ. ಸಂಘಟನಾ ವಿಚಾರಕ್ಕೆ ಸಂಬಂಧಿಸಿದಂತೆ ಸಭೆಗೆ ಕರೆಯುವ ಕಾರಣಕ್ಕೆ ಐದು ಬಾರಿ ಕರೆ ಮಾಡಿದರೂ ಅವರು ಕರೆ ಸ್ವೀಕರಿಸಿಲ್ಲ. ಮೂರು ನಾಲ್ಕು ದಿನಗಳ ಹಿಂದೆ ಭೇಟಿ ಮಾಡಬೇಕು ಎಂಬ ಕಾರಣಕ್ಕೆ ಸುಧಾಕರ್‌ ಅವರು ಮೊಬೈಲ್‌ ಸಂದೇಶ ಕಳುಹಿಸಿದ್ದರು, ಅನಿವಾರ್ಯವಾಗಿ ದೆಹಲಿಗೆ ತೆರಳಬೇಕಿತ್ತು. ಹಾಗಾಗಿ ಅವರನ್ನು ಭೇಟಿ ಮಾಡುವುದಕ್ಕೆ ಸಾಧ್ಯವಾಗಿರಲಿಲ್ಲ ಹೊರತಾಗಿ ಬೇರೇನೂ ಉದ್ದೇಶವಿಲ್ಲ. ಒಬ್ಬ ಕಾರ್ಯಕರ್ತ ನನ್ನ ಭೇಟಿ ಮಾಡಬೇಕು ಎಂದು ಕೇಳಿದರೂ ನಾನು ಅವರನ್ನು ಭೇಟಿ ಮಾಡುವುದು ನನ್ನ ಕರ್ತವ್ಯ ಎಂದು ಅವರು ಹೇಳಿದರು.

ಮಂಡಲ ಅಧ್ಯಕ್ಷ, ಜಿಲ್ಲಾಧ್ಯಕ್ಷ, ರಾಜ್ಯಾಧ್ಯಕ್ಷ ಹಾಗೂ ರಾಷ್ಟಾಧ್ಯಕ್ಷರ ಆಯ್ಕೆಗೆ ಚುನಾವಣೆ ಒಂದೇ ರೀತಿಯಲ್ಲಿ ನಡೆಯುತ್ತಿದೆ. ಚುನಾವಣೆ ಪ್ರಕ್ರಿಯೆಗಳು ಮುಗಿದ ಬಳಿಕ ವಿವರವಾಗಿ ಮಾತಾಡುತ್ತೇನೆ ಎಂದು ಅವರು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!