spot_img
Monday, March 16, 2026
spot_img

ಶ್ರೀ ಶಂಕರನಾರಾಯಣ ದೇವಸ್ಥಾನ ಆವರ್ಸೆ: ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಆವರ್ಸೆ ಸುಧಾಕರ ಶೆಟ್ಟಿ

ಕುಂದಾಪುರ: ಉಡುಪಿ ಜಿಲ್ಲೆಯ ಪಂಚ ಶಂಕರನಾರಾಯಣ ದೇವಸ್ಥಾನಗಳಲ್ಲಿ ಒಂದಾದ ಬ್ರಹ್ಮಾವರ ತಾಲೂಕು ಆವರ್ಸೆಯ ಶ್ರೀ ಶಂಕರನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಆವರ್ಸೆ ಸುಧಾಕರ ಶೆಟ್ಟಿ ಆಯ್ಕೆಯಾಗಿದ್ದಾರೆ.

ಧಾರ್ಮಿಕ ದತ್ತಿ ಇಲಾಖೆಯ ಆದೇಶದಂತೆ ವ್ಯವಸ್ಥಾಪನಾ ಸಮಿತಿಯ ಸಭೆಯನ್ನು ದೇವಸ್ಥಾನದ ಆವರಣದಲ್ಲಿ ನಡೆಸಲಾಯಿತು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಆವರ್ಸೆ ಸುಧಾಕರ ಶೆಟ್ಟಿಯವರನ್ನು ಐದನೇ ಬಾರಿಗೆ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಇವರ ಅವಧಿಯಲ್ಲಿ ಊರವರ, ದಾನಿಗಳ ಸಹಕಾರದಿಂದ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದಾರೆ.

ಇವರು ಸೇವಾ ಸಂಸ್ಥೆಯಾದ ರೋಟರಿಯಲ್ಲಿ ವಿವಿಧ ಹುದ್ದೆಗಳಲ್ಲಿ ತನ್ನನ್ನು ತೊಡಗಿಸಿಕೊಂಡು ಸಹಾಯಕ ಗವರ್ನರರಾಗಿ ಕಾರ್ಯನಿರ್ವಹಿಸಿದ್ದಾರೆ. ಸಾಮಾಜಿಕವಾಗಿ ತನ್ನನ್ನು ತೊಡಗಿಸಿಕೊಂಡು ತಾಲೂಕು ಬಂಟರ ಸಂಘದ ಕಾರ್ಯದರ್ಶಿಯಾಗಿ ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಐದು ಬಾರಿ ಆಯ್ಕೆಯಾಗಿದ್ದು, ಎರಡು ಅವಧಿಗೆ ಸಹಾ ಸಂಚಾಲಕರಾಗಿ, ಐದು ವರ್ಷ ಸಂಚಾಲಕರಾಗಿ ಸಂಘದ ಅಭಿವೃದ್ಧಿಯ ಬಗ್ಗೆ ದುಡಿದಿದ್ದಾರೆ. ನಂತರ ಬಂಟರ ಕ್ರೆಡಿಟ್ ಸಹಕಾರಿ ಸಂಘವನ್ನು ಕುಂದಾಪುರದಲ್ಲಿ ಸ್ಥಾಪಿಸಿ ಸ್ಥಾಪಕ ಅಧ್ಯಕ್ಷರಾಗಿ ಸಂಘವನ್ನು ಮುನ್ನಡೆಸುತ್ತಿದ್ದಾರೆ.

ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಲಕ್ಷ್ಮೀನಾರಾಯಣ ಐತಾಳ ಆವರ್ಸೆ, ಸೀತಾರಾಮ ಶೆಟ್ಟಿ ಆವರ್ಸೆ, ಅಮರನಾಥ ಶೆಟ್ಟಿ ಆವರ್ಸೆ, ಶ್ರೀಮತಿ ಪ್ರಮೋದ ವಿ. ಶೆಟ್ಟಿ ಆವರ್ಸೆ, ಶಂಕರ ಪೂಜಾರಿ ಆವರ್ಸೆ, ಕೃಷ್ಣ ಕುಲಾಲ ಆವರ್ಸೆ, ಶ್ರೀಮತಿ ವಿಜಯಾ ದಿವಾಕರ ಗಾಣಿಗ ಆವರ್ಸೆ, ಗಣೇಶ ಆವರ್ಸೆ ಆಯ್ಕೆಯಾದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!