spot_img
Wednesday, April 1, 2026
spot_img

ಕೇಂದ್ರ ಬಜೆಟ್ 2025‌ : ಪ್ರಸಕ್ತ ಸಾಲಿನ ಆಯವ್ಯಯ ಮಂಡನೆ ಆರಂಭ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೊಸ ದಾಖಲೆ

ಜನಪ್ರತಿನಿಧಿ (ನವದೆಹಲಿ) : ಸಂಸತ್ತಿನಲ್ಲಿ ಪ್ರಸಕ್ತ ಸಾಲಿನ ಪೂರ್ಣ ಪ್ರಮಾಣದ ಬಜೆಟ್‌ ಮಂಡನೆ  ಆರಂಭವಾಗಿದ್ದು, ಸತತ 8ನೇ ಬಾರಿಗೆ ಆಯವ್ಯಯ ಮಂಡನೆ ಮಾಡುವ ಮೂಲಕ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೊಸ ದಾಖಲೆ ಬರೆದಿದ್ದಾರೆ.

ಸತತ 8 ಬಾರಿ ಕೇಂದ್ರ ಬಜೆಟ್‌ ಮಂಡಿಸಿದ ಸಚಿವೆ ಎಂಬ ಹೆಗ್ಗಳಿಕೆಗೆ ನಿರ್ಮಲಾ ಅವರು ಪಾತ್ರರಾಗಿದ್ದಾರೆ. ಈ ಮೂಲಕ ಮೊರಾರ್ಜಿ ದೇಸಾಯಿ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿ ಸರ್ಕಾರ ಅಂದರೆ 2019 ರಲ್ಲಿ ನಿರ್ಮಲಾ ಸೀತಾರಾಮನ್ ಅವರು ದೇಶದ ಮೊದಲ ಪೂರ್ಣಾವಧಿಯ ಮಹಿಳಾ ಹಣಕಾಸು ಸಚಿವೆಯಾದರು. 2024ರಲ್ಲಿ ಮೂರನೇ ಅವಧಿಗೆ ಅಧಿಕಾರಕ್ಕೆ ಮೋದಿ ಸರ್ಕಾರದಲ್ಲಿ ಅವರು ಹಣಕಾಸು ಖಾತೆಯನ್ನು ಉಳಿಸಿಕೊಂಡರು. ಸತತ 8ನೇ ಬಜೆಟ್ ಮಂಡನೆ ಮಾಡಿರುವ ನಿರ್ಮಲಾ ಸೀತಾರಾಮನ್ ಅವರು, ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರು ವಿವಿಧ ಅವಧಿಗಳಲ್ಲಿ ಮಂಡಿಸಿದ ಬಜೆಟ್​ಗಳ ದಾಖಲೆಗಳನ್ನು ಸರಿಗಟ್ಟಿದ್ದಾರೆ.

ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆ ಹೊಂದಿದ್ದಾರೆ. ಅವರು ಒಟ್ಟು 10 ಬಾರಿ ಬಜೆಟ್ ಮಂಡಿಸಿದ್ದರು. ಮೊರಾರ್ಜಿ ದೇಸಾಯಿ ಹಣಕಾಸು ಸಚಿವರಾಗಿದ್ದಾಗ, 1959ರಿಂದ 1964ರವರೆಗೆ ಸತತ ಆರು ಬಾರಿ ಮತ್ತು 1967ರಿಂದ 1969ರ ಅವಧಿಯಲ್ಲಿ ನಾಲ್ಕು ಬಾರಿ ಬಜೆಟ್ ಮಂಡಿಸಿದ್ದರು.

ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ 9 ಬಾರಿ ಬಜೆಟ್ ಮಂಡಿಸಿದ್ದರು. ಹಾಗೆಯೇ ಪ್ರಣಬ್ ಮುಖರ್ಜಿ ಭಾರತದ ಹಣಕಾಸು ಸಚಿವರಾಗಿದ್ದಾಗ ಎಂಟು ಬಾರಿ ಬಜೆಟ್ ಮಂಡಿಸಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!