spot_img
Wednesday, April 1, 2026
spot_img

ಕೇಂದ್ರ ಬಜೆಟ್ 2025‌ : ಸ್ಟಾರ್ಟ್‌ಅಪ್ ಕಂಪನಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ : ನಿರ್ಮಲಾ ಸೀತಾರಾಮನ್

ಜನಪರತಿನಿಧಿ (ನವ ದೆಹಲಿ) : ಸ್ಟಾರ್ಟ್‌ಅಪ್ ಕಂಪನಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

ಮೋದಿ ನೇತೃತ್ವದ ಸರ್ಕಾರ ಮೂರನೇ ಅವಧಿಯ ಮೊದಲ ಬಜೆಟ್ ಮಂಡಿಸಿದ ನಿರ್ಮಲಾ, ಸ್ಟಾರ್ಟ್‌ಅಪ್ ಕಂಪನಿಗಳಿಗೆ 10 ಕೋಟಿ ರೂಪಾಯಿಯಿಂದ 20 ಕೋಟಿ ರೂ. ವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗವುದು ಎಂದು ಹೇಳೀದರು.

ಮೇಕ್ ಇನ್ ಇಂಡಿಯಾ ಯೋಜನೆ ಅಡಿ ಉತ್ಪಾದನೆ ಹೆಚ್ಚಿಸುವುದಕ್ಕಾಗಿ ಮೈಕ್ರೋ ಕಂಪನಿಗಳಿಗೆ 5 ಲಕ್ಷ ರೂ.ವರೆಗೆ ಕ್ರೆಡಿಟ್​​ ಕಾರ್ಡ್ ನೀಡಲಾಗುವುದು. ಮೊದಲ ಹಂತದಲ್ಲಿ 10 ಲಕ್ಷ ಕಾರ್ಡ್ ವಿತರಣೆಯ ಗುರಿ ಹೊಂದಲಾಗಿದೆ. ಇಷ್ಟೇ ಅಲ್ಲದೆ, ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತೇಜಿಸಲು ಹೊಸ ಯೋಜನೆ ಜಾರಿಗೆ ತರಲಾಗುವುದು. ಇದರಿಂದ 22 ಲಕ್ಷ ಉದ್ದಿಮೆದಾರರಿಗೆ ಅನುಕೂಲವಾಗಲಿದೆ.

ಚರ್ಮೋದ್ಯಮವನ್ನು ಉತ್ತೇಜಿಸಲು ರಫ್ತು ಹೆಚ್ಚಿಸುವಲ್ಲಿ ಗಮನ ಹರಿಸಲಾಗುವುದು. ಈ ಮೂಲಕ ಮೇಕ್ ಇನ್ ಇಂಡಿಯಾ ಬ್ರ್ಯಾಂಡ್ ನಿರ್ಮಾಣದ ಗುರಿ ಹೊಂದಲಾಗಿದೆ. ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತೇಜಿಸಲು ಹೊಸ ಯೋಜನೆ ಜಾರಿಗೆ ತರಲಾಗವುದು ಎಂದು ಬಜೆಟ್​​ನಲ್ಲಿ ಘೋಷಿಸಲಾಯಿತು.

ಇದಲ್ಲದೆ, ಮೊದಲ ಬಾರಿ ಉದ್ಯಮ ಆರಂಭಿಸುವ 5 ಲಕ್ಷ ಎಸ್‌ಸಿ, ಎಸ್‌ಟಿ ಮತ್ತು ಮಹಿಳೆಯರಿಗೆ ಹೊಸ ಯೋಜನೆಯನ್ನು ಪ್ರಾರಂಭಿಸಲಾಗುವುದು. ಅಲ್ಲಿ ಅವರಿಗೆ 2 ಕೋಟಿ ರೂಪಾಯಿ ವರೆಗಿನ ಸಾಲವನ್ನು ನೀಡಲಾಗುತ್ತದೆ ಎಂದು ಅವರು ಘೋಷಿಸಿದರು.

ದೇಶದಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಂಖ್ಯೆ ಸುಮಾರು 1 ಕೋಟಿ ಇದ್ದು, 5.7 ಕೋಟಿ ಜನರು ಅವುಗಳೊಂದಿಗೆ ಸಂಬಂಧ ಹೊಂದಿದ್ದಾರೆ. ಭಾರತವನ್ನು ವಿಶ್ವದಲ್ಲೇ ಅಗ್ರ ಪಂಕ್ತಿಯ ಉತ್ಪಾದನಾ ಕೇಂದ್ರವನ್ನಾಗಿ ಮಾಡಲು ಇದು ಸಹಕಾರಿಯಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!