spot_img
Saturday, February 14, 2026
spot_img

ಎಂಎಸ್‌ಪಿ, ಕೃಷಿ ಸಾಲಮನ್ನಾ ಸೇರಿ ರೈತರ ಬೇಡಿಕೆಗಳ ಬಗ್ಗೆ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಮೌನ : ಕಾಂಗ್ರೆಸ್‌ ವಾಗ್ದಾಳಿ

ಜನಪ್ರತಿನಿಧಿ (ನವದೆಹಲಿ) : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಇಂದು(ಶನಿವಾರ) ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೂರನೇ ಅವಧಿಯ ಮೊದಲನೇ ಬಜೆಟ್‌ ಅನ್ನು ಮಂಡಿಸಿದ್ದು, ಬಜೆಟ್‌ನಲ್ಲಿ,  ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ, ಕೃಷಿ ಸಾಲ ಮನ್ನಾ ಸೇರಿದಂತೆ ರೈತರ ಬೇಡಿಕೆಗಳ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಪೂರ್ಣ ಮೌನ ವಹಿಸಿದ್ದಾರೆ ಎಂದು ರಾಷ್ಟ್ರೀಯ ಕಾಂಗ್ರೆಸ್‌ ಆಕ್ಷೇಪಿಸಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಘೋಷಣೆಗಳ ಬಗ್ಗೆ ವಿರೋಧ ಪಕ್ಷ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಈ ಸಂಬಂಧಿಸಿದಂತೆ ತಮ್ಮ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಬಜೆಟ್‌ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್‌, ‘ಹಣಕಾಸು ಸಚಿವರು ತಮ್ಮ ಭಾಷಣವನ್ನು ಕೃಷಿಯಿಂದ ಪ್ರಾರಂಭಿಸಿದ್ದಾರೆ. ಆದರೆ, ರೈತರ ಬೇಡಿಕೆಗಳಾದ ಎಂಎಸ್‌ಪಿಗೆ ಕಾನೂನು ಖಾತರಿ, ಕೃಷಿ ಸಾಲ ಮನ್ನಾ, ಪಿಎಂ ಕಿಸಾನ್‌ ಪಾವತಿಗಳ ಹಣದುಬ್ಬರ ಸೂಚ್ಯಂಕ, ಪಿಎಂ ಫಸಲ್ ಭೀಮಾ ಯೋಜನೆಗೆ ಸುಧಾರಣೆಗಳು ಸೇರಿದಂತೆ ಸಂಸದೀಯ ಸ್ಥಾಯಿ ಸಮಿತಿಯ ಶಿಫಾರಸುಗಳ ಬಗ್ಗೆ ಸಂಪೂರ್ಣ ಮೌನ ವಹಿಸಿದ್ದಾರೆ’ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಮೇಕ್ ಇನ್ ಇಂಡಿಯಾ’ ಎಂಬುದು ದೇಶದಲ್ಲಿ ನಕಲಿಯಾಗಿ ಮಾರ್ಪಟ್ಟಿದೆ. ಈಗ ‘ರಾಷ್ಟ್ರೀಯ ಉತ್ಪಾದನಾ ಮಿಷನ್’ ಎಂಬ ಹೊಸ ಹೆಸರು ಬಂದಿದೆ ಎಂದು ರಮೇಶ್ ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!