spot_img
Wednesday, April 1, 2026
spot_img

ರೈತ ವಿರೋಧಿ ಕೇಂದ್ರ ಬಜೆಟ್|ಬಿಹಾರ ಚುನಾವಣೆಯ ಪ್ರಣಾಳಿಕೆಯಂತಿದೆ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮುಂಬರುವ ಬಿಹಾರ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಿದ್ದಾರೆ ಎನಿಸುತ್ತಿದೆ. ಬಜೆಟ್‌ನಿಂದ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿಕಾರಿದ್ದಾರೆ.
ಬಿಹಾರ ಜನರ ಒಲೈಕೆಗಾಗಿ ಪ್ರಮುಖ ಐದಾರು ಯೋಜನೆಗಳನ್ನು ಘೋಷಿಸಿದರೆ, ಕರ್ನಾಟಕಕ್ಕೆ ಒಂದು ನಯಾ ಪೈಸೆ ನೀಡಿಲ್ಲ. ಬೆಂಗಳೂರಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು. ಈ ಬಜೆಟ್‌ನಿಂದ ಸಂಪೂರ್ಣ ನಿರಾಸೆ ಉಂಟಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ನಮ್ಮ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ. ಇದೊಂದು ಸಂಪೂರ್ಣ ರೈತ ವಿರೋಧಿ, ಕರ್ನಾಟಕ ವಿರೋಧಿ ಬಜೆಟ್ ಎಂದು ಸಚಿವರು ತಿಳಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!