spot_img
Saturday, February 14, 2026
spot_img

ಬಡತನ ಮುಕ್ತ ಭಾರತ ನಿರ್ಮಾಣ ಮಾಡುವತ್ತ ಕೇಂದ್ರ ಬಜೆಟ್-ಸಂಸದ ಬಿ.ವೈ.ರಾಘವೇಂದ್ರ ಪ್ರತಿಕ್ರಿಯೆ

ಜನಪ್ರತಿನಿಧಿ ವಾರ್ತೆ] ಕುಂದಾಪುರ, ಫೆ.1: 2025- 26ನೇ ಸಾಲಿನ ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಬಡವರ, ಯುವಕರ, ರೈತರ ಹಾಗೂ ಮಹಿಳೆಯರ ಏಳಿಗೆಗಾಗಿ ಹೆಚ್ಚು ಆದ್ಯತೆಯನ್ನು ನೀಡಲಾಗಿದೆ. ಬಡತನ ಮುಕ್ತ ಭಾರತ ನಿರ್ಮಾಣ ಮಾಡುವತ್ತ ಕೇಂದ್ರ ಬಜೆಟ್ ಆಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಬಜೆಟ್ ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಗ್ರಾಮೀಣ ಭಾಗದ ರೈತರಿಗೆ ಆರ್ಥಿಕ ನೆರವು ನೀಡುವ ದೃಷ್ಟಿಯಿಂದ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಅಡಿಯಲ್ಲಿ ಕಡಿಮೆ ಇಳುವರಿ ಇರುವ ರಾಷ್ಟ್ರದ ನೂರು ಜಿಲ್ಲೆಗಳನ್ನು ಗುರುತಿಸಿ ಅವುಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಇದರಿಂದ ಸುಮಾರು 1.7 ಕೋಟಿ ರೈತರು ಇದರ ಲಾಭ ಪಡೆಯಲಿದ್ದಾರೆ. ಯುವಕರನ್ನು ಕೃಷಿಯತ್ತ ಸೆಳೆಯುತ್ತ ಸರ್ಕಾರ ಹೆಚ್ಚು ಗಮನ ನೀಡಲಾಗಿದೆ. ಕೇಂದ್ರ ಬಜೆಟ್ ನೀಡಿದೆ. ಮೂರು ಯೂರಿಯಾ ಪ್ಲಾಂಟ್ ಗಳನ್ನು ದೇಶದಲ್ಲಿ ಆರಂಭಿಸಲಾಗುತ್ತದೆ. ಕೃಷಿ ಕಾರ್ಡ ಲೋನ್ ಮೊತ್ತವನ್ನು 3 ಲಕ್ಷದಿಂದ 5ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಮೀನುಗಾರರ ವಲಯಕ್ಕೆ 60,000 ಕೋಟಿ ಅನುದಾನ ನೀಡಲಾಗಿದೆ. ಅದಲ್ಲದೆ ರೈತ ಉತ್ಪಾದನಾ ಸಹಕಾರ ಸಂಘಗಳ ರಚನೆ ಮಾಡಲು ಕ್ರಮ ವಹಿಸಲಾಗಿದೆ ಕೃಷಿ ಉತ್ಪನ್ನಗಳ ಹೆಚ್ಚಳ ಮಾಡಲು ಆದ್ಯತೆ ನೀಡಲಾಗಿದೆ.

ಮಹಿಳೆಯರಿಗೆ ಸಂಬಂಧಿಸಿದಂತೆ ಗರ್ಭಿಣಿ ಮಹಿಳೆಯರಲ್ಲಿ ಪೋಷಕಾಂಶಗಳ ಆಹಾರ ನೀಡುವಲ್ಲಿ ಹೆಚ್ಚು ನೀಡುವುದರೊಂದಿಗೆ ಇದರಿಂದ ಒಂದು ಕೋಟಿ ಮಹಿಳೆಯರಿಗೆ ಅನುಕೂಲವಾಗಲಿದೆ ಎಸ್.ಸಿ ಎಸ್.ಟಿ ಮಹಿಳೆಯರಿಗೆ ರೂ 5 ಲಕ್ಷ ಸಾಲ ನೀಡಲಾಗಿದೆ.

ಯುವಕರ ಏಳಿಗೆಗಾಗಿ ಸಂಶೋಧನೆ ಹಾಗೂ ಅಭಿವೃದ್ಧಿಗಾಗಿ 20,000 ಕೋಟಿ ಮೀಸಲಿಡಲಾಗಿದೆ ಐ‌ಐಟಿ‌ಎಸ್ಸಿ ಗಳಿಗೆ ಅನುದಾನ ಹೆಚ್ಚಳ ಮಾಡಲಾಗಿದೆ ಶಿಕ್ಷಣ ಕ್ಷೇತ್ರದಲ್ಲಿ Artificial Intelligence  ಅಳವಡಿಕೆಗೆ 500 ಕೋಟಿ ಮೀಸಲಿಡಲಾಗಿದೆ. “Make for India, Make for World” ದ್ಯೇಯವನ್ನು ಇಟ್ಟುಕೊಂಡು ಐ‌ಐಟಿ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಶೇಕಡ 100 ರಷ್ಟು ಹೆಚ್ಚುವರಿ ಸೀಟುಗಳು ಲಭಿಸುವಂತೆ ಕ್ರಮ ವಹಿಸಲಾಗಿದೆ. ಒಟ್ಟಾರೆ ವಿಕಸಿತ ಭಾರತ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ.

ಆರೋಗ್ಯ ಕ್ಷೇತ್ರದಲ್ಲಿಯೂ ಸಹ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ ಎಲ್ಲಾ ಜಿಲ್ಲೆಗಳಲ್ಲಿ ಡಿಕೆರೆ ಯೂನಿಟ್ ಗಳನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ ಹಾಗೆಯೇ ಎಲ್ಲಾ ಜಿಲ್ಲೆಗಳಲ್ಲಿಯೂ ಸಹ ಕ್ಯಾನ್ಸರ್ ಸೆಂಟ್ರಲ್ ಗಳನ್ನು ತೆರೆಯಲು ಸೂಕ್ತ ಬಜೆಟ್ ನೀಡಲಾಗಿದೆ

ದೇಶದ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ, ನಗರ ಅಭಿವೃದ್ಧಿಗಾಗಿ ಒಂದು ಲಕ್ಷ ಕೋಟಿ ಅನುದಾನವನ್ನು ನೀಡಲಾಗಿದೆ. ಮುಂದಿನ 10 ವರ್ಷಗಳಲ್ಲಿ 100 ಹೊಸ ವಿಮಾನ ನಿಲ್ದಾಣಗಳ ನಿರ್ಮಾಣ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ.

ಆದಾಯ ತೆರಿಗೆ ಇದಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರ 12 ಲಕ್ಷಗಳವರೆಗೆ ಯಾವುದೇ ಆದಾಯ ತೆರಿಗೆ ನೀಡುವಂತಿಲ್ಲ ಎಂದು ಘೋಷಣೆ ಮಾಡಿರುವುದರಿಂದ ಬಹಳಷ್ಟು ಬಡ ಹಾಗೂ ಮಧ್ಯಮ ವರ್ಗದವರಿಗೆ ಒಂದು ದೊಡ್ಡ ಕೊಡುಗೆಯನ್ನು ನಮ್ಮ ಕೇಂದ್ರ ಸರ್ಕಾರ ಈ ಬಜೆಟ್ ನಲ್ಲಿ ನೀಡಿದೆ. ಒಟ್ಟಾರೆ ದೇಶದ ಅಭಿವೃದ್ಧಿಗಾಗಿ ಮಾಡಿದ ಬಜೆಟ್ ಆಗಿರುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!