spot_img
Wednesday, April 1, 2026
spot_img

ಭಾರತೀಯರ ಆಕಾಂಕ್ಷೆಗಳನ್ನು ಈಡೇರಿಸುವ ಬಜೆಟ್‌ : ನರೇಂದ್ರ ಮೋದಿ

ಜನಪ್ರತಿನಿಧಿ (ನವದೆಹಲಿ) : ಈ ಬಾರಿಯ ಕೇಂದ್ರ ಬಜೆಟ್ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಈಡೇರಿಸುವ ನಮ್ಮ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು (ಶನಿವಾರ) ಸತತ ಎಂಟನೇ ಬಾರಿಗೆ ಬಜೆಟ್‌ ಮಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಇದಾಗಿದೆ.

ಬಜೆಟ್‌ ಕುರಿತು ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ‘ಬಜೆಟ್‌ನಲ್ಲಿ ಉಳಿತಾಯ, ಹೂಡಿಕೆ, ಬಳಕೆ ಮತ್ತು ಬೆಳವಣಿಗೆಗೆ ಹೆಚ್ಚಿನ ಉತ್ತೇಜನ ಸಿಗುವಂತಹ ಹಲವು ಅಂಶಗಳಿವೆ. ಜತೆಗೆ, ಗಿಗ್ ಕಾರ್ಮಿಕರ ಕಲ್ಯಾಣ ಕ್ರಮಗಳು ಕಾರ್ಮಿಕರ ಘನತೆಗೆ ಸರ್ಕಾರದ ಬದ್ಧತೆಯನ್ನು ಒತ್ತಿಹೇಳುತ್ತವೆ’ ಎಂದಿದ್ದಾರೆ.

‘ಈ ಬಾರಿಯ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಜತೆಗೆ, ಸಾಮಾನ್ಯ ಪ್ರಜೆಯ ಜೇಬು ತುಂಬಿಸುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗಿದೆ. ‘ವಿಕಸಿತ ಭಾರತ’ದ ನಮ್ಮ ಧೈಯವನ್ನು ಸಾಮಾನ್ಯ ಜನರು ಕೊಂಡೊಯ್ಯುತ್ತಾರೆ ಎಂಬುದಕ್ಕೆ ಇದುವೇ ಸಾಕ್ಷಿ’ ಎಂದು ಮೋದಿ ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!