spot_img
Wednesday, April 1, 2026
spot_img

ಪ್ರಣಾಳಿಕೆಯಲ್ಲಿ ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಜನಪ್ರತಿನಿಧಿ (ಬೆಂಗಳೂರು) : ಕಾಂಗ್ರೆಸ್‌ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆಯೇ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಆರ್‌.ಅಶೋಕ ಭೇಟಿ ನೀಡಿದರು.

ನಂತರ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಅವರ ಮೇಲೆ ಪೊಲೀಸರು ದೌರ್ಜನ್ಯ ಮಾಡಿದ್ದಾರೆ. ಗಂಟು ಮೂಟೆ ಕಟ್ಟಿಕೊಂಡು ಮನೆಗೆ ಹೋಗಿ ಎಂದು ಬೆದರಿಸಿದ್ದಾರೆ. ಅವರಿಗೆ ಪ್ರತಿಭಟನೆಗೆ ಅವಕಾಶ ನೀಡುತ್ತಿಲ್ಲ. ಅವರಿಗೆ ಕುಡಿಯುವ ನೀರು, ಶೌಚಾಲಯ, ಟೆಂಟ್‌ ಮೊದಲಾದ ಸೌಲಭ್ಯ ನೀಡುತ್ತಿಲ್ಲ. ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 15,000 ರೂ. ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 7,000 ರೂ. ನೀಡಲಾಗುವುದು ಎಂದು ಘೋಷಿಸಲಾಗಿದೆ. ಇದರಂತೆಯೇ ಈಗಲೇ ಸರ್ಕಾರ ಗೌರವಧನ ನೀಡಲಿ ಎಂದು ಆಗ್ರಹಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಬಿಜೆಪಿ ಬೆಂಬಲ ನೀಡುತ್ತಿದೆ. ಅವರನ್ನು ಕರೆದು ಮಾತಾಡಿ ಭರವಸೆ ನೀಡಲಿ. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರತಿಭಟಿಸಲು ಅವಕಾಶ ನೀಡದೇ ಇದ್ದಲ್ಲಿ ನಾನೇ ಬಂದು ಪ್ರತಿಭಟನೆಗೆ ಕೂರುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಸಿಎಂ ಸಿದ್ದರಾಮಯ್ಯ ಯಾವ ಇಲಾಖೆಯಲ್ಲೂ ಹುದ್ದೆ ಭರ್ತಿ ಮಾಡಿಲ್ಲ. ಆದರೆ ಅವರ ಜೇಬು ಮಾತ್ರ ಭರ್ತಿಯಾಗುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಭರವಸೆ ನೀಡಿದಂತೆಯೇ ಗೌರವಧನ ಹೆಚ್ಚಳ ಮಾಡಲು ಏಕೆ ಸಾಧ್ಯವಿಲ್ಲ? ಬೇರೆ ರಾಜ್ಯದ ಸಂತ್ರಸ್ತರಿಗೆ ಪರಿಹಾರ ನೀಡಲು ಹಣವಿದೆ. ಆದರೆ ಅಂಗನವಾಡಿ ಕಾರ್ಯಕರ್ತೆಯರಿಗೆ ಹಣ ನೀಡುವಾಗ ಖಜಾನೆ ಖಾಲಿಯಾಗಿದೆ. ಇನ್ನು ಮೇಲೆ ಫ್ರೀ ಕೊಡಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ ಎಂದರು.

ಜನರ ಮೇಲೆ ತೆರಿಗೆ ಹೇರಲಾಗಿದೆ. ಪೆಟ್ರೋಲ್‌-ಡೀಸೆಲ್‌ ದರ ಹೆಚ್ಚಿಸಲಾಗಿದೆ. ಇಷ್ಟೆಲ್ಲ ಆದಾಯ ಬಂದರೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸಹಾಯ ಮಾಡಿಲ್ಲ. ಸಿಎಂ ಸಿದ್ದರಾಮಯ್ಯ ಹೇಗೂ ನಿರ್ಗಮಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಜನರಿಗೆ ಸಹಾಯ ಮಾಡಲಿ ಎಂದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!